AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಕಾರ್ಯಕರ್ತ ನಾರಾಯಣ ಭಾಂಡಗೆ ಬಿಜೆಪಿ ರಾಜಸಭೆ ಟಿಕೆಟ್​; ಇಲ್ಲಿದೆ ವ್ಯಕ್ತಿಚಿತ್ರ

ರಾಜ್ಯಸಭೆ ಚುನಾವಣೆಗೆ ಟಿಕೆಟ್​ ಸಿಕ್ಕ ಬೆನ್ನಲ್ಲೆ ಮಾತನಾಡಿದ ನಾರಾಯಣ ಬಾಂಡ ಅವರು ‘ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ರಾಜ್ಯಸಭೆ ಟಿಕೆಟ್ ನೀಡಿದ್ದಕ್ಕೆ ಸಂತಸವಾಗಿದೆ. ಇಂತಹ ಕಾರ್ಯ ಕೇವಲ ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ನಾನು ಅಯೋದ್ಯಾ ರಾಮಮಂದಿರ‌ ಹೋರಾಟದಲ್ಲಿ ಭಾಗಿಯಾಗಿ ಆಗ ಜೈಲು ಸೇರಿದವನು. ಅಯೋದ್ಯಾ ವಿವಾಧಿತ ಕಟ್ಟಡ ಬೀಳೋದನ್ನು ಕಣ್ಣಾರೆ ಕಂಡವನು. ಈಗ ರಾಮಮಂದಿರ‌ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಟಾಪನೆ ಕೂಡ ನೋಡಿದ್ದೇನೆ. ಇದೀಗ ನನಗೆ ಡಬಲ್ ಖುಷಿಯಾಗಿದೆ ಎಂದಿದ್ದಾರೆ.

ಆರ್​ಎಸ್​ಎಸ್​ ಕಾರ್ಯಕರ್ತ ನಾರಾಯಣ ಭಾಂಡಗೆ ಬಿಜೆಪಿ ರಾಜಸಭೆ ಟಿಕೆಟ್​; ಇಲ್ಲಿದೆ ವ್ಯಕ್ತಿಚಿತ್ರ
ನಾರಾಯಣ ಭಾಂಡ ವ್ಯಕ್ತಿಚಿತ್ರ
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 11, 2024 | 9:30 PM

Share

ಬಾಗಲಕೋಟೆ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections) ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟ ಮಾಡಲಾಗಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್​ ಕೈತಪ್ಪಿದೆ. ಅವರ ಬದಲು ಬಾಗಲಕೋಟೆಯ ನಾರಾಯಣ ಭಾಂಡ(Narayan Banda)ಗೆ ಟಿಕೆಟ್​​ ನೀಡಲಾಗಿದೆ. ಈ ಹಿನ್ನಲೆ ಬಾಗಲಕೋಟೆ ನಾರಾಯಣ ಬಾಂಡ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಬಾಂಡ ಅವರಿಗೆ ಕುಟುಂಬಸ್ಥರು ಸಿಹಿ ತಿನ್ನಿಸಿ ಸಂಭ್ರಮಪಟ್ಟಿದ್ದಾರೆ. ಮನೆಯಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರ ಪರ ಘೋಷಣೆ ಮಾಡಿ, ಮನೆ ಹೆಣ್ಣುಮಕ್ಕಳು ವಿಕ್ಟರಿ ಸಿಂಬಾಲ್‌ ತೋರಿಸಿ ಸಂತಸಪಟ್ಟಿದ್ದಾರೆ.

ಈ ಕುರಿತು ಮಾತನಾಡಿದ ನಾರಾಯಣ ಭಾಂಡ, ‘ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ರಾಜ್ಯಸಭೆ ಟಿಕೆಟ್ ನೀಡಿದ್ದಕ್ಕೆ ಸಂತಸವಾಗಿದೆ. ಇಂತಹ ಕಾರ್ಯ ಕೇವಲ ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ. ನಾನು ಅಯೋದ್ಯಾ ರಾಮಮಂದಿರ‌ ಹೋರಾಟದಲ್ಲಿ ಭಾಗಿಯಾಗಿ ಆಗ ಜೈಲು ಸೇರಿದವನು. ಅಯೋದ್ಯಾ ವಿವಾಧಿತ ಕಟ್ಟಡ ಬೀಳೋದನ್ನು ಕಣ್ಣಾರೆ ಕಂಡವನು. ಈಗ ರಾಮಮಂದಿರ‌ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಟಾಪನೆ ಕೂಡ ಕಂಡವನು. ಇದೀಗ ನನಗೆ ಡಬಲ್ ಖುಷಿಯಾಗಿದೆ ಎಂದರು.

ಇದನ್ನೂ ಓದಿ:ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಚಿವ ಸೋಮಣ್ಣಗೆ ಕೈತಪ್ಪಿದ ಟಿಕೆಟ್​

ವ್ಯಕ್ತ ಚಿತ್ರಣ

ನಾರಾಯಣಸಾ ಬಾಂಡ ಅವರು 1951 ನವೆಂಬರ್​ 20 ರಂದು ಬಾಗಲಕೋಟೆಯಲ್ಲಿ ಜನಿಸಿದ ಇವರು ತಮ್ಮ 17ನೇ ವಯಸ್ಸಿನಲ್ಲಿ ಆರ್​ಎಸ್​ಎಸ್ ಕಾರ್ಯಕರ್ತರಾಗಿ ಸಂಘ ಪರಿವಾರ ಸೇರಿದ್ದರು. ಖಟ್ಟರ್ ಆರ್​ ಎಸ್ ಎಸ್ ಕಾರ್ಯಕರ್ತರಾದ ಇವರು, ಬಿಜೆಪಿ ಪಕ್ಷದಲ್ಲಿ ಸಕ್ರೀಯ ಮುಖಂಡರಾದರು. ಅಯೋದ್ಯಾ ರಾಮಮಂದಿರ‌ ಹೋರಾಟದಲ್ಲಿ ಭಾಗಿಯಾದ ಪ್ರಮುಖರಲ್ಲಿ ಇವರು ಕೂಡ ಒಬ್ಬರು. ಅಷ್ಟೇ ಅಲ್ಲ, ಕಾಶ್ಮೀರ ತಿರಂಗಾ ಹೋರಾಟದಲ್ಲಿ ಭಾಗಿ, ಗೋವಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ತೆಲಂಗಾಣ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸಿದರು.

ಎಮ್​ಎಲ್​ಸಿ ಕರ್ತವ್ಯ

ಆರ್​ಎಸ್​ಎಸ್ ಪ್ರಮುಖರ ಜೊತೆ ನಿಕಟ ಸಂಪರ್ಕ ಹೊಂದಿದ್ದ ಇವರು, ರಾಮಮಂದಿರ‌ ಹೋರಾಟದಲ್ಲಿ ಭಾಗಿಯಾಗಿದ್ದಾಗ ಮಧ್ಯಪ್ರದೇಶದಲ್ಲಿ ಬಂಧನವಾಗಿದ್ದರು. ರಾಮಮಂದಿರ‌ ಹೋರಾಟ, ಕಾಶ್ಮೀರ ತಿರಂಗಾ ಹೋರಾಟ ಸೇರಿದಂತೆ ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದ ಇವರು, ಬರೊಬ್ಬರಿ 10 ರಿಂದ 15 ಸಾರಿ ಜೈಲು ವಾಸ ಅನುಭವಿಸಿದ್ದಾರೆ. ಕಳೆದ 2010 ರಿಂದ 2016 ರವರೆಗೆ ಅವಧಿಯಲ್ಲಿ ಎಮ್​ಎಲ್​ಸಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ವಾಜಪೇಯಿ ಅವರ ಅನುಯಾಯಿಯಾದ ಇವರು ವಾಜಪೇಯಿ ಭಾಷಣವನ್ನು ಉತ್ತರ ಕರ್ನಾಟಕದಲ್ಲಿ ಹಿಂದಿಯಿಂದ ಕನ್ನಡ ಅನುವಾದ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ 2 ಬಾರಿ ಆಯ್ಕೆ

ಬಾಗಲಕೋಟೆ ಜಿಲ್ಲಾ ಬಿಜೆಪಿ ಪ್ರಥಮ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ ಭಾಂಡ ಅವರು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ ಎರಡು ಬಾರಿ ಆಯ್ಕೆಯಾಗಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಾಗಲಕೋಟೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಅಧ್ಯಕ್ಷ, ಎಬಿವಿಪಿ ಬಾಗಲಕೋಟೆ ಶಾಖೆಯ ಪ್ರಾರಂಭಿಕ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಕರ್ನಾಟಕ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದ ರಾಜ್ಯಾಧ್ಯಕ್ಷರಾಗಿದ್ದು, ಕರ್ನಾಟಕ ಕ್ಷತ್ರಿಯ ಒಕ್ಕೂಟದ ಉಪಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:25 pm, Sun, 11 February 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!