ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು: ಭೂಪೇಂದ್ರ ಯಾದವ್

ಲೋಕಸಭೆ ಚುನಾವಣೆಗೆ ಮೂರು ನಾಲ್ಕು ತಿಂಗಳಷ್ಟೇ ಬಾಕಿ ಇರುವಾಗ ಬಿಜೆಪಿ ದೇಶಾದ್ಯಂತ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದೆ. ಕರ್ನಾಟಕದಲ್ಲಿ ಕ್ಷೇತ್ರವಾರು ಉಸ್ತುವಾರಿಗಳು, ಸಹ ಉಸ್ತುವಾರಿಗಳನ್ನು ನೇಮಿಸಿದೆ. ಅಲ್ಲದೆ, 2024ರ ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆದ್ದುಕೊಳ್ಳುವ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು: ಭೂಪೇಂದ್ರ ಯಾದವ್
ಕರ್ನಾಟಕದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂದ ಕೇಂದ್ರ ಸಚಿವ ಭೂಪೇಂದ್ರ ಯಾದವ್
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Jan 27, 2024 | 10:42 PM

ಬೆಂಗಳೂರು, ಜ.27: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 400 ಸೀಟುಗಳು ಸಿಗುವುದು ಖಚಿತ, ನರೇಂದ್ರ ಮೋದಿ (Narendra Modi) ಅವರು ಮತ್ತೆ ಪ್ರಧಾನಿ ಆಗುವುದೂ ಖಚಿತ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ (Bhupender Yadav) ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ (BJP) ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಧ್ವಂಸ ಮಾಡಿ ಬಿಜೆಪಿ ಅಧಿಕಾರಕ್ಕೆ ಏರಬೇಕು ಎಂದರು.

ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಈಗಾಗಲೇ ಕೆಲಸ ಆರಂಭಿಸಿದ್ದಾರೆ ಎಂದ ಕೇಂದ್ರ ಸಚಿವರು, ಪಂಚ ರಾಜ್ಯಗಳಲ್ಲಿ ಕಾಂಗ್ರೆಸ್​​ನ ಸುಳ್ಳುಗಳು ಜನರಿಗೆ ಗೊತ್ತಾಯಿತು. ಹಾಗಾಗಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಾಯಿತು. ಕಾಂಗ್ರೆಸ್​ನ ಗ್ಯಾರಂಟಿಗಳು ವಿಫಲವಾಗಿವೆ ಎಂದರು. ಕಾಂಗ್ರೆಸ್ ಕೇವಲ ಗಾಂಧಿ ಪರಿವಾರ ಹಾಗೂ ಅಲ್ಪಸಂಖ್ಯಾತರಿಗೆ ಸೀಮಿತವಾಗಿ ಅಧಿಕಾರ ಮಾಡಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲೋದು ಪಕ್ಕಾ ಎಂದರು.

ಇದನ್ನೂ ಓದಿ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ; ಪಟ್ಟಿ ಇಲ್ಲಿದೆ

ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್​ಗಳಿಗೆ ಬಿಜೆಪಿ ಉಸ್ತುವಾರಿ ನೇಮಕ

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ ನಡೆಯುತ್ತಿದ್ದು, ಲೋಕಸಭಾ ಕ್ಷೇತ್ರಗಳ ಕ್ಲಸ್ಟರ್​ಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ. 28 ಕ್ಷೇತ್ರಗಳನ್ನು 8 ಕ್ಲಸ್ಟರ್​ಗಳಾಗಿ ವಿಂಗಡಿಸಲಾಗಿದ್ದು, ಎಸ್.ಎ.ರಾಮದಾಸ್, ಎಂ.ಬಿ.ಭಾನುಪ್ರಕಾಶ್, ಮಹೇಶ್ ಟೆಂಗಿನಕಾಯಿ, ರಾಜಕುಮಾರ್ ಪಾಟೀಲ್ ತೇಲ್ಕೂರ್, ಚಂದ್ರಶೇಖರ ಪಾಟೀಲ್ ಹಲಗೇರಿ, ಕೆ.ಎಸ್.ನವೀನ್, ಎಸ್.ಮುನಿರಾಜು, ಹೆಚ್.ಎಸ್.ಗೋಪಿನಾಥರೆಡ್ಡಿ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ Lok ಮಾಡಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು