ಬೆಂಗಳೂರು, ಜನವರಿ 3: ಕಾಟಾಚಾರಕ್ಕೆ ವಾಗ್ದೇವಿ ದರ್ಶನ (Vagdevi Temple) ಮಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ಚುನಾವಣಾ ಹಿಂದೂ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಅವರು ಮಂಗಳವಾರ ವಿಜಯಪುರ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದರು. ಇದೇ ವೇಳೆ, ವಾಗ್ದೇವಿ ದೇವಸ್ಥಾನಕ್ಕೆ ತೆರಳಿದ್ದಾಗ ಒಳ ಪ್ರವೇಶಿಸಲು ನಿರಾಕರಿಸಿ ಸಚಿವ ಎಂಬಿ ಪಾಟೀಲ್ ಅವರನ್ನು ಮುಂದೆ ಕಳುಹಿಸಿದ್ದರು. ಒಳ ಬನ್ನಿ ಎಂದು ಕರೆದರೂ ಸಿದ್ದರಾಮಯ್ಯ ಹೊರಗಡೆಯಿಂದಲೇ ಕೈಮುಗಿದು ಒಳ ಪ್ರವೇಶಿಸಲು ನಿರಾಕರಿಸಿದ್ದರು. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಬಿಜೆಪಿ ಕಿಡಿಕಾರಿದೆ.
‘ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು. ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ. ಸಿಎಂ ಸಿದ್ದರಾಮಯ್ಯ ಅವರೇ, ಮಸೀದಿ, ದರ್ಗಾಗಳಿಗೆ ಹೋಗಿ ಅವರು ನೀಡಿದ್ದೆಲ್ಲವನ್ನೂ ಮೈ ಮೇಲೆ ಹಾಕಿಕೊಂಡು ಫೋಸು ಕೊಡುವ ನಿಮಗೆ, ದೇವಿಯ ಬಳಿ ನಾಡಿನ ಒಳಿತಿಗಾಗಿ ಭಕ್ತಿಯಿಂದ ಕೈ ಮುಗಿಯುವಷ್ಟು ಸಮಯವಿಲ್ಲ. ಹಿಂದೂ ಧರ್ಮ, ಹಿಂದೂ ದೈವ ಹಾಗೂ ಹಿಂದೂಗಳನ್ನು ಕಂಡರೆ ಈ ಪರಿ ಅಸಡ್ಡೆ ಏಕೆ?’ ಎಂದು ಎಕ್ಸ್ ಸಂದೇಶದಲ್ಲಿ ಬಿಜೆಪಿ ಪ್ರಶ್ನಿಸಿದೆ.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಿ, ರಾಮಮಂದಿರಕ್ಕೆ ಒಂದು ರೂ. ಸಹ ದೇಣಿಗೆ ನೀಡದ ಚುನಾವಣಾ ಹಿಂದೂ ಸಿಎಂ ಸಿದ್ದರಾಮಯ್ಯರವರ ಅಸಲಿ ಮುಖ ಇದು.
ವಿಜಯಪುರದ ದ್ಯಾಬೇರಿ ಗ್ರಾಮದ ವಾಗ್ದೇವಿ ದೇವಿಯ ದರ್ಶನವನ್ನು ಕಾಟಾಚಾರಕ್ಕೆ ಮಾಡಿದ ಹಿಂದೂ ವಿರೋಧಿ ಸಿದ್ದರಾಮಯ್ಯರವರು ಪ್ರಭು ಶ್ರೀರಾಮರ ಅಪರಾವತಾರವಂತೆ.
ಸಿಎಂ @siddaramaiah ಅವರೇ,… pic.twitter.com/wd8LRjBGb4
— BJP Karnataka (@BJP4Karnataka) January 3, 2024
ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಹೆಚ್ ಆಂಜನೇಯ ರಾಮನಿಗೆ ಹೋಲಿಸಿದ್ದಕ್ಕೆ ಕೂಡ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಈ ಮಧ್ಯೆ, ಹುಬ್ಬಳ್ಳಿಯಲ್ಲಿ 30 ವರ್ಷಗಳ ಹಿಂದೆ ನಡೆದಿದ್ದ ಗಲಭೆಗೆ ಸಂಬಂಧಿಸಿ ಸಂಬಂಧಿಸಿ ಕರಸೇವಕರ ವಿರುದ್ಧ ಸಿದ್ದರಾಮಯ್ಯ ಕಾನೂನು ಕ್ರಮಕ್ಕೆ ಮುಂದಾಗಿರುವುದು ಸಹ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.
ಇದನ್ನೂ ಓದಿ: ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ, ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುವುದಾಗಿ ಹೇಳಿದ್ದರು. ಅದೂ ಸಹ ತೀವ್ರ ವಿರೋಧಕ್ಕೆ ಗುರಿಯಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ