ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ; ಬಿಜೆಪಿ ಕಿಡಿ

|

Updated on: May 25, 2023 | 2:55 PM

ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಹೊಣೆಗೇಡಿತನದ ವಿರುದ್ಧ ಜನ ಸಿಡಿದೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ ಟೀಕಿಸಿದೆ.

ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ; ಬಿಜೆಪಿ ಕಿಡಿ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ (Congress) ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಹೊಣೆಗೇಡಿತನದ ವಿರುದ್ಧ ಜನ ಸಿಡಿದೇಳುವ ಕಾಲ ದೂರವಿಲ್ಲ ಎಂದು ಬಿಜೆಪಿ (BJP) ಟೀಕಿಸಿದೆ. ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳನ್ನು ಶೀಘ್ರ ಜಾರಿಗೊಳಿಸುವಂತೆ ಆಗ್ರಹಿಸಿರುವ ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಪಕ್ಷದ ವಿರುದ್ಧ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಅತ್ತ ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ಆಕಾಂಕ್ಷಿಗಳ ಲಾಬಿಯೂ ಜೋರಾಗಿದ್ದು, ಹಲವು ನಾಯಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ದೆಹಲಿಯಲ್ಲೇ ಇದ್ದಾರೆ.

‘ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳು ರಾಜ್ಯದ ವಾತಾವರಣವನ್ನು ಹಾಳುಮಾಡುತ್ತಿದೆ. ಜನರು ಗ್ಯಾರಂಟಿಗಳಿಗೆ ಕಾಯುತ್ತಿದ್ದರೆ, ಕಾಂಗ್ರೆಸ್ ನಾಯಕರು ಅಧಿಕಾರಕ್ಕಾಗಿ ದೆಹಲಿ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ನಿತ್ಯ ನಿರಂತರ ಜರುಗುತ್ತಿರುವ ಇಂತಹ ಹಲವಾರು ಘಟನೆಗಳಿಗೆ ಸಿದ್ದರಾಮಯ್ಯ ಅವರ ನೇತೃತ್ವದ ಎಟಿಎಂ ಸರ್ಕಾರ (#ATMSarkara) ವೇ ನೇರ ಹೊಣೆ!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


‘ಕಾಂಗ್ರೆಸ್‌ ಸಾರಿರುವ ಸುಳ್ಳುಗಳಿಂದ ಜನಸಾಮಾನ್ಯರ ಹಾಗೂ ಸರ್ಕಾರಿ ಸಿಬ್ಬಂದಿಗಳ ನಡುವೆ ಅನಾವಶ್ಯಕ ಸಂಘರ್ಷ ನಡೆಯುವಂತಾಗಿದೆ. ‘ಸರ್ಕಾರದ ಗ್ಯಾರಂಟಿಗಳಿಂದ ಬಸ್ಸುಗಳಲ್ಲಿ ಸಿಬ್ಬಂದಿಗಳು ಹಾಗೂ ಪ್ರಯಾಣಿಕರ ನಡುವೆ ವಾಗ್ವಾದ ನಡೆಯುತ್ತಿದೆ’ ಎಂದು ಅಸಹಾಯಕತೆಯಿಂದ ಕೆಎಸ್‌ಆರ್‌ಟಿಸಿ ನೌಕರರ ಸಂಘ ಪತ್ರ ಬರೆದಿದೆ! ಸಾರ್ವಜನಿಕರ ಭಾವನೆಗಳೊಂದಿಗೆ ಚೆಲ್ಲಾಟವಾಡುವ ಹಾಗೂ ಸರ್ಕಾರದ ಈ ಹೊಣೆಗೇಡಿತನದ ವಿರುದ್ಧ ರಾಜ್ಯದ ಜನ ಸಿಡಿದೇಳುವ ಕಾಲ ದೂರವಿಲ್ಲ!’ ಎಂದೂ ಬಿಜೆಪಿ ಉಲ್ಲೇಖಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಈ ಕುರಿತು ಆದೇಶಗಳನ್ನೂ ಹೊರಡಿಸಲಾಗಿತ್ತು. ಆದಾಗ್ಯೂ ಗ್ಯಾರಂಟಿಗಳ ಷರತ್ತು ಮತ್ತು ನಿಬಂಧನೆಗಳು ಇನ್ನಷ್ಟೇ ಸಿದ್ಧವಾಗಬೇಕಿದೆ.

ಈ ಮಧ್ಯೆ, ಜೂನ್ 1ರ ವರೆಗೆ ಗ್ಯಾರಂಟಿಗಳ ಜಾರಿಗಾಗಿ ಕಾಯುತ್ತೇವೆ. ಅಷ್ಟರೊಳಗೆ ಮಾಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ