ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿ: ಅಪರಾಧ ಪ್ರಕರಣಗಳ ಪಟ್ಟಿ ಮಾಡಿ ಬಿಜೆಪಿ ಕಿಡಿ

|

Updated on: Apr 19, 2024 | 2:17 PM

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯ ಹತ್ಯೆ ಸೇರಿದಂತೆ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮತ್ತೊಂದೆಡೆ, ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿ: ಅಪರಾಧ ಪ್ರಕರಣಗಳ ಪಟ್ಟಿ ಮಾಡಿ ಬಿಜೆಪಿ ಕಿಡಿ
ಪರಿಷತ್‌ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಆರು ಕ್ಷೇತ್ರಗಳಿಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ
Follow us on

ಬೆಂಗಳೂರು, ಏಪ್ರಿಲ್ 19: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಬಿಜೆಪಿ (BJP), ರಾಜ್ಯದಲ್ಲಿ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ ಎಂದು ವ್ಯಂಗ್ಯವಾಡಿದೆ. ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಬಿಜೆಪಿ, ರಾಹುಲ್ ಗಾಂಧಿಯವರ (Rahul Gandhi) ದ್ವೇಷದ ಅಂಗಡಿ ಕರ್ನಾಟಕವನ್ನು ಗಲಭೆಯ ತೋಟವನ್ನಾಗಿ ಮಾಡಿದೆ ಎಂದು ಟೀಕಿಸಿದೆ.

ಬಿಜೆಪಿ ಎಕ್ಸ್ ಸಂದೇಶ


‘ರಾಜ್ಯದಲ್ಲಿ ಕಾಂಗ್ರೆಸ್​​ನ ಪಾ‘ಕೈ’ಸ್ತಾನ್ ಸರ್ಕಾರದಿಂದ‌ ತಾಲಿಬಾನ್‌ ಮಾಡೆಲ್‌ ಜಾರಿಯಾಗಿದೆ. ಜೈ ಶ್ರೀರಾಮ್‌ ಎಂದರೆ ‘ಬ್ರದರ್ಸ್‌’ಗಳಿಂದ ಹಲ್ಲೆ. ಲವ್‌ ಜಿಹಾದ್‌ಗೆ ಒಪ್ಪದೆ ಇದ್ದರೆ ಬರ್ಬರ ಕೊಲೆ. ಒಡೆಯರ್‌ ಪರ ನಿಂತರೆ ಕಾರು ಹರಿಸಿ ಕೊಲೆ. ಡ್ರಾಪ್ ಕೊಟ್ಟರೆ‌ ಮತಾಂಧರಿಂದ ಹಿಗ್ಗಾಮುಗ್ಗ ಥಳಿತ. ಕನ್ನಡ ಮಾತನಾಡಿದರೆ ನಟಿ ಮೇಲೆಯೇ ಹಲ್ಲೆ ಯತ್ನ. ಚುನಾವಣೆ ಸಮಯದಲ್ಲಿ ಜಿಹಾದಿ ಮತಾಂಧ ಬ್ರದರ್ಸ್‌ಗಳನ್ನು ಸಿಎಂ ಸಿದ್ದರಾಮಯ್ಯ ಹಾಗೂ ಆ ದಿನಗಳ ಕೊತ್ವಾಲ್‌ ಶಿಷ್ಯ ಡಿಕೆ ಶಿವಕುಮಾರ್ ಬೀದಿಗೆ ಬಿಟ್ಟು ಹಿಂದೂಗಳನ್ನೇ ಟಾರ್ಗೆಟ್‌ ಮಾಡಿ ಬೆದರಿಸುತ್ತಿದ್ದಾರೆ. ಕರ್ನಾಟಕವನ್ನು ಮತಾಂಧರ ಗಲಭೆಯ ತೋಟವನ್ನಾಗಿ ಮಾಡಿದೆ ರಾಹುಲ್ ಗಾಂಧಿ ಅವರು ದ್ವೇಷದ ಅಂಗಡಿ!’ ಎಂದು ಬಿಜೆಪಿ ಎಕ್ಸ್ ಸಂದೇಶದಲ್ಲಿ ಕಿಡಿಕಾರಿದೆ.

ಕಾಂಗ್ರೆಸ್ ಆಡಳಿತದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ: ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಆಡಳಿತ ವ್ಯವಸ್ಥೆ ಕುಸಿದಿದೆ ಎಂದು ಶಾಸಕ ಅಶ್ವತ್ಥನಾರಾಯಣ ಟೀಕಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಮಾತನಾಡಿದ ಅವರು, ಕಾನೂನು ಕಾಪಾಡಲು ವಿಫಲವಾದ ಈ ಸರ್ಕಾರ ವಜಾ ಆಗಬೇಕು. ಸರ್ಕಾರದ ಮೃದುಧೋರಣೆಯ ವ್ಯವಸ್ಥೆಯಿಂದ ಯಾರಿಗೂ ಭಯವಿಲ್ಲದಂತಾಗಿದೆ. ನಾವು ಏನು ಬೇಕಾದರೂ ಮಾಡಬಹುದೆಂಬ ಮನಸ್ಥಿತಿ ನಿರ್ಮಾಣವಾಗಿದೆ. ಆತಂಕವಾದಿಗಳು ನಿರಾಳವಾಗಿ ಮನಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

ಇದನ್ನೂ ಓದಿ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ವೈಯಕ್ತಿಕ ಕಾರಣಕ್ಕೆ ಹತ್ಯೆ ಆಗಿದೆ; ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಲೋಪದಿಂದ ಕಾನೂನು ವ್ಯವಸ್ಥೆ ಕುಸಿದಿದೆ. ಜನರ ಸುರಕ್ಷತೆಗೆ ಆದ್ಯತೆ ನೀಡಿ, ಬಿಜೆಪಿಗೆ ಮತ ನೀಡಿ ಎಂದು ಅಶ್ವತ್ಥನಾರಾಯಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ