ಆರ್​ಡಿ ಪಾಟೀಲ್ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರಬರುವ ಆತಂಕ ಎಟಿಎಂ ಸರ್ಕಾರಕ್ಕೆ: ಬಿಜೆಪಿ ವಾಗ್ದಾಳಿ

ಮಾನ್ಯ ಗೃಹ ಸಚಿವ ಜಿ ಪರಮೇಶ್ವರ ಸಾಹೇಬರೇ, ಯಾರಿಗಾಗಿ ಯಾರಿಗೋಸ್ಕರ ಕಿಂಗ್ ಪಿನ್ ಆರ್​ಡಿ ಪಾಟೀಲ್ ಅವರನ್ನು ಬಂಧಿಸದೆ ಕಳ್ಳಾಟವಾಡುತ್ತಿದ್ದೀರಿ? ಆತನ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರ ಬರಲಿದೆ ಎನ್ನುವ ಆತಂಕ #ATMSarkaraಕ್ಕೆ ಇದ್ದಂತಿದೆ ಎಂದು ಬಿಜೆಪಿ ಟೀಕಿಸಿದೆ.

ಆರ್​ಡಿ ಪಾಟೀಲ್ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರಬರುವ ಆತಂಕ ಎಟಿಎಂ ಸರ್ಕಾರಕ್ಕೆ: ಬಿಜೆಪಿ ವಾಗ್ದಾಳಿ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 07, 2023 | 3:10 PM

ಬೆಂಗಳೂರು, ನವೆಂಬರ್ 7: ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆ ಅಕ್ರಮ (KEA Exam Scam) ಪ್ರಕರಣದ ಕಿಂಗ್​ಪಿನ್ ಆರ್​ಡಿ ಪಾಟೀಲ್ (RD Patil) ಪೊಲೀಸರಿಂದ ತಪ್ಪಿಸಿಕೊಂಡಿರುವ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ. ಆರ್​ಡಿ ಪಾಟೀಲ್ ಬಂಧನವಾದರೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೆಸರು ಹೊರಬರುವ ಆತಂಕ ‘ಎಟಿಎಂ ಸರ್ಕಾರ’ಕ್ಕೆ ಇದೆ. ಹೀಗಾಗಿಯೇ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಕಾಂಪೌಂಡ್‌ ಹಾರಿ ಹೋಗಲು ಬಿಟ್ಟಿದೆ ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸರಣಿ ಪೋಸ್ಟ್ ಪ್ರಕಟಿಸುವ ಮೂಲಕ ಆರೋಪಿಸಿದೆ.

ಮಾನ್ಯ ಗೃಹ ಸಚಿವ ಜಿ ಪರಮೇಶ್ವರ ಸಾಹೇಬರೇ, ಯಾರಿಗಾಗಿ ಯಾರಿಗೋಸ್ಕರ ಕಿಂಗ್ ಪಿನ್ ಆರ್​ಡಿ ಪಾಟೀಲ್ ಅವರನ್ನು ಬಂಧಿಸದೆ ಕಳ್ಳಾಟವಾಡುತ್ತಿದ್ದೀರಿ? ಆತನ ಬಂಧನವಾದರೆ ಪ್ರಿಯಾಂಕ್ ಖರ್ಗೆ ಹೆಸರು ಹೊರ ಬರಲಿದೆ ಎನ್ನುವ ಆತಂಕ #ATMSarkaraಕ್ಕೆ ಇದ್ದಂತಿದೆ. ಹೀಗಾಗಿಯೇ‌ ನೇಮಕಾತಿ ಪರೀಕ್ಷೆಯ ಅಕ್ರಮದ ಕಿಂಗ್‌ಪಿನ್ ಕಾಂಪೌಂಡ್‌ ಹಾರಿ ಹೋಗಲು ಬಿಟ್ಟಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಳ್ಳ ಪೊಲೀಸ್ ಆಟ ಆಡುತ್ತಾ ಕಳ್ಳರನ್ನು ರಾಜಾರೋಷವಾಗಿ ಓಡಾಡಿಕೊಂಡು ಇರುವಂತೆ ಬಿಟ್ಟು, ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆಸಿ ಕಲೆಕ್ಷನ್ ಮಾಡುತ್ತಿದೆ. ವರ್ಷಪೂರ್ತಿ ಕಷ್ಟಪಟ್ಟು ಓದಿ ನೌಕರಿ ಕನಸು ಕಾಣುತ್ತಿರುವ ಬಡ ವಿದ್ಯಾರ್ಥಿಗಳ ಹೊಟ್ಟೆ ಮೇಲೆ ಹೊಡೆಯುವ ಗ್ಯಾರಂಟಿ ಕೊಟ್ಟಿದೆ ಸಿದ್ದರಾಮಯ್ಯ ಅವರ ಸರ್ಕಾರ! ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸುವುದಕ್ಕೆ ಕುಖ್ಯಾತಿ ಪಡೆದಿರುವ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಪಾಟೀಲ್, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲೂ ಅಕ್ರಮ ನಡೆಸಲು ಹೊಂಚು ಹಾಕಿ ಕೂತಿದ್ದು ಬೆಳಕಿಗೆ ಬಂದಿದೆ. ಪ್ರತಿಯೊಂದು ಪರೀಕ್ಷೆಯಲ್ಲೂ ಆರ್. ಡಿ. ಪಾಟೀಲ್ ರಾಜಾರೋಷವಾಗಿ ಅಕ್ರಮ ನಡೆಸಲು ಕಾರಣ ಆತನ ಬೆನ್ನಿಗೆ #ATMSarkara ನಿಂತಿರುವುದರಿಂದ. ಸಿಬಿಐ ತನಿಖೆಗೆ ವಹಿಸಿ ಎಂದರೆ #TrollMinister ಪ್ರಿಯಾಂಕ್ ಖರ್ಗೆ ಮೂಗು ಮುರಿಯುವುದಕ್ಕೆ ಕಾರಣ ತಮ್ಮ ಬುಡಕ್ಕೆ ಪ್ರಕರಣ ಬಂದು ಬೀಳಲಿದೆ ಎನ್ನುವುದು ಅವರಿಗೆ ಖಾತರಿಯಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಪೊಲೀಸರ ನಿರ್ಲಕ್ಷ್ಯದಿಂದ ಆರ್​ಡಿ ಪಾಟೀಲ್ ತಪ್ಪಿಸಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಪರಮೇಶ್ವರ್, ಗೃಹಸಚಿವ

ಹಗರಣ, ಅಕ್ರಮಗಳ ಹೂರಣದಲ್ಲಿ ಯಾವುದೇ ಮುಲಾಜಿಲ್ಲದೆ ಭಾಗಿಯಾಗಿ, ಸದಾ ಕಲೆಕ್ಷನ್‌, ಕಮಿಷನ್‌ ಎನ್ನುತ್ತಾ, ಕೆ.ಇ.ಎ ಪರೀಕ್ಷಾ ಅಕ್ರಮ ಹಾಗೂ ಕಿಯೋನಿಕ್ಸ್ ಹಗರಣದಲ್ಲಿ ಭಾಗಿಯಾಗಿರುವ ಕಿಂಗ್‌ ಪಿನ್‌‌ಗಳನ್ನು ರಕ್ಷಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನದಲ್ಲಿ ಮುಂದುವರೆಯಲು ಒಂದು ಕ್ಷಣವೂ ಅರ್ಹರಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಮೊದಲು ಈ ಕಡುಭ್ರಷ್ಟ ಸಚಿವರನ್ನು ನಿಮ್ಮ ಸಂಪುಟದಿಂದ ವಜಾ ಮಾಡಿ ಎಂದು ಬಿಜೆಪಿ ಆಗ್ರಹಿಸಿದೆ.

ಕಿಂಗ್​ಪಿನ್ ಆರ್​ಡಿ ಪಾಟೀಲ್ ಪೊಲೀಸರು ದಾಳಿ ನಡೆಸುವ ವೇಳೆ ಕಂಪೌಂಡ್ ಹಾರಿ ತಪ್ಪಿಸಿಕೊಂಡಿರುವ ಬೆನ್ನಲ್ಲೇ ಬಿಜೆಪಿಯು ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್