ಬಿಜೆಪಿಯ ಚುನಾವಣಾ ಪ್ರಚಾರದ ತಂತ್ರಗಳಲ್ಲೊಂದಾಗಿರುವ ಗೋಡೆ ಬರಹ ಅಭಿಯಾನಕ್ಕೆ ಚಾಲನೆ

ಲೋಕಸಭಾ ಚುನಾವನೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಯ ಚುನಾವಣಾ ಪ್ರಚಾರದ ತಂತ್ರಗಳಲ್ಲೊಂದಾಗಿರುವ ಅಭಿಯಾನಕ್ಕೆ ಚಾಲನೆ ನೀಡಿದೆ. ಮತ್ತೊಂದೆಡೆ ಬಿ.ವೈ. ವಿಜಯೇಂದ್ರ‌ ರಾಜ್ಯಾಧ್ಯಕ್ಷರಾದ ಬಳಿಕದ ಇದೇ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ನಿಗದಿಯಾಗಿದ್ದು, ಈ ಸಂಬಂಧ ಇಂದು ವಿಜಯೇಂದ್ರ‌ ಪೂರ್ವಭಾವಿ ಸಭೆ ನಡೆಸಿದರು.

ಬಿಜೆಪಿಯ ಚುನಾವಣಾ ಪ್ರಚಾರದ ತಂತ್ರಗಳಲ್ಲೊಂದಾಗಿರುವ ಗೋಡೆ ಬರಹ ಅಭಿಯಾನಕ್ಕೆ ಚಾಲನೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2024 | 3:44 PM

ಬೆಂಗಳೂರು, (ಜನವರಿ 15): ಮುಂಬರುವ ಲೋಕಸಭಾ ಚುನಾವಣೆ(Loksabha Elections 2024) ಸಂಬಂಧ ರಾಜ್ಯ ಬಿಜೆಪಿಯಲ್ಲಿ(BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೊನ್ನೇ ಅಷ್ಟೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಸ್ಥಿತಿಗತಿ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಭೆ ಮಾಡಿ, ಆಯಾ ಕ್ಷೇತ್ರದ ನಾಯಕರುಗಳಿಂದ ಮಾಹಿತಿ ಕಲೆಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಗೋಡೆ ಬರಹ ಅಭಿಯಾನಕ್ಕಿಂದು ಬಿಜೆಪಿ ಚಾಲನೆ ನೀಡಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ವಿಜಯೇಂದ್ರ ಅವರು ಮತ್ತೊಮ್ಮೆ ಮೋದಿ ಎಂಬ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದರು.

ಬಿಜೆಪಿಯ ಚುನಾವಣಾ ಪ್ರಚಾರ ತಂತ್ರಗಳಲ್ಲೊಂದಾಗಿರುವ ಗೋಡೆ ಬರಹ ಸಹ ಒಂದಾಗಿದೆ. ಪ್ರತಿ ಕ್ಷೇತ್ರದ ಪ್ರತಿ ಬೂತ್ ನಲ್ಲಿ 5 ಕಡೆ ಗೋಡೆ ಬರಹ ಬರೆಯಬೇಕು ಎಂದು ಸೂಚಿಸಲಾಗಿದ್ದು, ಈ ಅಭಿಯಾನ ಜನವರಿ 25 ರವರೆಗೆ ನಡೆಯಲಿದೆ. ಇನ್ನು ಗೋಡೆ ಬರಹ ಚಾಲನೆ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ. ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ, ಯುವ ಮೋರ್ಛಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಬೆಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷರು ಭಾಗಿಯಾಗಿದ್ದರು.

ಇದನ್ನೂ ಓದಿ: ಎಲ್ಲವೂ ಸುಖಾಂತ್ಯವಾಗಿದೆ, ಮುಂದಿನ ನಡೆಯ ಬಗ್ಗೆ ಸೋಮಣ್ಣ ಕೊಟ್ಟ ಸುಳಿವೇನು?

ಜ.19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ

ಇದೇ ಜನವರಿ 19ರಂದು ಸಂಜೆ 4 ಗಂಟೆಗೆ ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಕಾಂಗ್ರೆಸ್ ಎಲೆಕ್ಷನ್ ಕಮಿಟಿ ಸಭೆ ಕರೆದಿದೆ. ಮತ್ತೊಂದೆಡೆ ಜ.19 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಬಿ.ವೈ. ವಿಜಯೇಂದ್ರ‌ ರಾಜ್ಯಾಧ್ಯಕ್ಷರಾದ ಬಳಿಕದ ಇದೇ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ ಈ ಸಂಬಂಧ ಇಂದು ವಿಜಯೇಂದ್ರ‌ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್, ಪ್ರೀತಂ ಗೌಡ ಮತ್ತು ಶಾಸಕ ಎಸ್.ಆರ್. ವಿಶ್ವನಾಥ್ ಉಪಸ್ಥಿತರಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ