ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಬಿಜೆಪಿ ರಾಜ್ಯ ಸಮಿತಿ ಶಿಫಾರಸು; ನಳಿನ್ ಕುಮಾರ್ ಕಟೀಲು ವಿರುದ್ಧ ಡಿಕೆ ಶಿವಕುಮಾರ್ ಆರೋಪ
ರಾಜ್ಯ ಶಿಸ್ತು ಸಮಿತಿ ಯತ್ನಾಳ್ ಸಂಪರ್ಕ ಮಾಡಲು ಪ್ರಯತ್ನಿಸಿದೆ. ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿವರಣೆ ಪಡೆಯಲು ಸಮಿತಿ ಯತ್ನಿಸಿದೆ. ಆದರೆ ಶಾಸಕರು ದೂರವಾಣಿ ಕರೆಯನ್ನು ಸ್ವೀಕರಿಸಿಲ್ಲ.
ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal) ನೀಡಿದ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಿಜೆಪಿ (BJP) ರಾಜ್ಯ ಸಮಿತಿ ಶಿಫಾರಸು ಮಾಡಿದೆ. ಯತ್ನಾಳ್ ಹೇಳಿಕೆ ಬಗ್ಗೆ ಕೇಂದ್ರ ಶಿಸ್ತು ಸಮಿತಿಗೆ ಮಾಹಿತಿ ರವಾನೆ ಮಾಡಲಾಗಿದೆ. ಹಲವು ಬಾರಿ ಮುಜುಗರದ ಹೇಳಿಕೆ ನೀಡಿರುವ ಬಗ್ಗೆ ವರದಿ ನೀಡಲಾಗಿದೆ. ರಾಜ್ಯ ಶಿಸ್ತು ಸಮಿತಿ ಯತ್ನಾಳ್ ಸಂಪರ್ಕ ಮಾಡಲು ಪ್ರಯತ್ನಿಸಿದೆ. ಆಕ್ಷೇಪಾರ್ಹ ಹೇಳಿಕೆ ಬಗ್ಗೆ ವಿವರಣೆ ಪಡೆಯಲು ಸಮಿತಿ ಯತ್ನಿಸಿದೆ. ಆದರೆ ಶಾಸಕರು ದೂರವಾಣಿ ಕರೆಯನ್ನು ಸ್ವೀಕರಿಸಿಲ್ಲ. ಇಂದು (ಮೇ 7) ಸಂಜೆ ವೇಳೆಗೆ ಕೇಂದ್ರ ಶಿಸ್ತು ಸಮಿತಿ ಕ್ರಮದ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಯಿದೆ.
ಬಸನಗೌಡ ಯತ್ನಾಳ್ರನ್ನ ಕೂಡಲೇ ವಶಕ್ಕೆ ಪಡೆಯಬೇಕು- ಡಿಕೆಶಿ: ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಲ್ಲಾ ನೇಮಕಾತಿಗಳಲ್ಲೂ ಸಹ ಒಂದೊಂದು ರೇಟ್ ಫಿಕ್ಸ್ ಆಗಿದೆ. ಶಾಸಕ ಬಸನಗೌಡ ಯತ್ನಾಳ್ರನ್ನ ಕೂಡಲೇ ವಶಕ್ಕೆ ಪಡೆಯಬೇಕು. ಯತ್ನಾಳ್ರನ್ನ ಸಾಕ್ಷಿಯಾಗಿಸಿಕೊಂಡು ತನಿಖೆ ಮಾಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾಗಿಯಾಗಿದ್ದಾರೆ. ಕಟೀಲು ಇದನ್ನ ಮುಚ್ಚೋಕೆ ಪ್ರಯತ್ನ ಮಾಡುತ್ತಿದ್ದಾರೆ. ಯಾವುದೇ ಮಂತ್ರಿ ಇದರಲ್ಲಿ ಭಾಗಿಯಾಗಿದ್ರೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಯತ್ನಾಳ್ ಮಾಡಿರುವುದು ಬಹಳ ದೊಡ್ಡ ಗಂಭೀರ ಆರೋಪ. 2,500 ಕೋಟಿ ರೂ. ಸಿಎಂ ಖುರ್ಚಿಗೆ ಕೇಳಿದ್ದಾರೆ ಎನ್ನುವ ಅರೋಪ ಮಾಡಿದ್ದಾರೆ. ನನ್ನ ನಲವತ್ತು ವರ್ಷ ಜೀವನದಲ್ಲಿ ಈ ರೀತಿ ಆರೋಪ ಕೇಳಿರಲಿಲ್ಲ. ಇದು ಅತಿ ದೊಡ್ಡ ಸ್ಫೋಟಕ ಸುದ್ದಿ ಎಂದು ಶಿವಕುಮಾರ್ ಆರೋಪಿಸಿದ್ದಾರೆ.
ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಶಾಸಕ ಯತ್ನಾಳ್ ಹೇಳಿಕೆ ಬಗ್ಗೆ ನಾನೇನೂ ಮಾತಾಡಲ್ಲ. ಪಕ್ಷದ ನಾಯಕರಿದ್ದಾರೆ, ಅವರು ನೋಡಿಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ
‘ಕೆಜಿಎಫ್ 2’ ನೋಡಿದ್ಮೇಲೆ ‘ಕೆಜಿಎಫ್ 3’ ಬಗ್ಗೆ ಶಿವಣ್ಣ ಹೇಳಿದ್ದೇನು? ಇಲ್ಲಿದೆ ‘ಸೆಂಚುರಿ ಸ್ಟಾರ್’ ಮಾತು
Published On - 10:32 am, Sat, 7 May 22