2 ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ನಿರೀಕ್ಷೆ: ಮುಂಚೂಣಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಹೆಸರು

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ. ರಾಜ್ಯದಲ್ಲಿ ಬಿಜೆಪಿಯನ್ನ ಬಲ ಪಡಿಸುವ ಹೊಣೆ ಯಾರಿಗೆ ಸಿಗುತ್ತೆ ಅನ್ನುವುದು ಕುತೂಹಲ ಮೂಡಿಸಿದೆ. ಇದೀಗ ರಾಜ್ಯ ಬಿಜೆಪಿ ನಾಯಕರು ದಸರಾ ಹಬ್ಬದ ಒಳಗಾಗಿ ಅಂದರೆ 2 ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ನಿರೀಕ್ಷೆಯಲ್ಲಿದ್ದಾರೆ.

2 ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ನಿರೀಕ್ಷೆ: ಮುಂಚೂಣಿಯಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಹೆಸರು
ಪ್ರಾತಿನಿಧಿಕ ಚಿತ್ರ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 22, 2023 | 7:07 PM

ಬೆಂಗಳೂರು, ಅಕ್ಟೋಬರ್​​​​ 22: ಬಿಜೆಪಿ (BJP) ರಾಜ್ಯಾಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಅಳೆದು ತೂಗಿ ಲೆಕ್ಕಾಚಾರ ಹಾಕುತ್ತಿದೆ. ರಾಜ್ಯದಲ್ಲಿ ಬಿಜೆಪಿಯನ್ನ ಬಲ ಪಡಿಸುವ ಹೊಣೆ ಯಾರಿಗೆ ಸಿಗುತ್ತೆ ಅನ್ನುವುದು ಕುತೂಹಲ ಮೂಡಿಸಿದೆ. ಇದೀಗ ರಾಜ್ಯ ಬಿಜೆಪಿ ನಾಯಕರು ದಸರಾ ಹಬ್ಬದ ಒಳಗಾಗಿ ಅಂದರೆ 2 ದಿನಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಾತಿ ನಿರೀಕ್ಷೆಯಲ್ಲಿದ್ದಾರೆ. ಮತ್ತೆ ಕೆಲ ನಾಯಕರು ಇಂದು ರಾತ್ರಿಯೊಳಗೆ ಘೋಷಣೆ ನಿರೀಕ್ಷೆಯಲ್ಲಿದ್ದಾರೆ.

ದೆಹಲಿಯಲ್ಲೇ ಅಧ್ಯಕ್ಷರ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಲಿದೆ. ನಳಿನ್​ ಕುಮಾರ್​​ ಕಟೀಲ್ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಹೊಸ ನೇಮಕಾತಿ ಮಾಡಲಾಗುತ್ತಿದ್ದು, ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು ಮುನ್ನೆಲೆಯಲ್ಲಿದೆ. ದಸರಾ ಹಬ್ಬದ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಮೈಸೂರಿನಲ್ಲಿದ್ದಾರೆ.

ಇದನ್ನೂ ಓದಿ: ರಾಜ್ಯ ಬಿಜೆಪಿ ಶಾಸಕರಿಗೆ ಹೊಸ ಟಾಸ್ಕ್ ಕೊಟ್ಟ ಬಿಜೆಪಿ ಹೈಕಮಾಂಡ್; ಏನದು?

ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ಹಿನ್ನೆಲೆ ಈ ಮಧ್ಯೆ ಬುಧವಾರ ಸಂಸದ ಸದಾನಂದಗೌಡ ದೆಹಲಿಗೆ ತೆರಳಲಿದ್ದಾರೆ. ರಾಜ್ಯಾಧ್ಯಕ್ಷ, ವಿಪಕ್ಷ ನಾಯಕ ನೇಮಕಾತಿ ವಿಳಂಬದ ಬಗ್ಗೆ ಸದಾನಂದಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಭೇಟಿ ಮಾಡುವಂತೆ ಡಿವಿ ಸದಾನಂದಗೌಡ ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ.

ರಾಜ್ಯ ಬಿಜೆಪಿಯನ್ನ ಮುನ್ನಡೆಸುವ ಸಾರಥಿ ಯಾರಾಗುತ್ತಾರೆ ಅನ್ನೋದು ಸಸ್ಪೆನ್ಸ್ ಆಗಿದೆ. ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ಜೋರಾಗಿದೆ. ಜೆ.ಪಿ. ನಡ್ಡಾ ಸೇರಿ ಹೈಕಮಾಂಡ್ ನಾಯಕರ ಜತೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ಒಕ್ಕಲಿಗ ಕೋಟಾದಡಿ ಸಿ.ಟಿ.ರವಿ ಫ್ರಂಟ್ ರನ್ನರ್ ಆಗಿದ್ದಾರೆ. ಅಲ್ಲದೇ ಶೋಭಾ ಕರಂದ್ಲಾಜೆ, ಡಾ.ಅಶ್ವತ್ಥ್ ನಾರಾಯಣ ಕೂಡ ರಾಜ್ಯಾಧ್ಯಕ್ಷ ಸ್ಥಾನದ ರೇಸ್​ನಲ್ಲಿದ್ದಾರೆ. ಮತ್ತೊಂದೆಡೆ ಆರ್.ಅಶೋಕ್ ರಾಜ್ಯಾಧ್ಯಕ್ಷ ಸ್ಥಾನ ಕೇಳಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಮತ್ತು ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮೀಕರಣದ ಹಾಕಲಾಗುತ್ತಿದೆ. ಜೊತೆಗೆ ಎರಡೂ ಹುದ್ದೆಗಳಿಗೂ ಹಿಂದೂ ಫೈರ್ ಬ್ರ್ಯಾಂಡ್ ನಾಯಕರನ್ನೇ ನೇಮಕ ಮಾಡುವುದು ಹೈಕಮಾಂಡ್ ಲೆಕ್ಕಾಚಾರ ಎನ್ನಲಾಗಿದೆ. ಈ ಬಗ್ಗೆ ಇತ್ತೀಚೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶೀಘ್ರವೇ ರಾಜ್ಯಾಧ್ಯಕ್ಷ ನೇಮಕವಾಗಲಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:53 pm, Sun, 22 October 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್