ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಕರೆಯುವುದೇಕೆ? 8 ಕಾರಣ ಕೊಟ್ಟು ಪಟ್ಟಿ ಟ್ವೀಟ್ ಮಾಡಿದ ಬಿಜೆಪಿ
ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಸರಣಿ ಟ್ವೀಟ್ ಮೂಲಕ ಬಿಜೆಪಿ ವಾಗ್ದಾಳಿ.
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದು ಈ ಹಿಂದೆ ಸಿ. ಟಿ ರವಿ(CT Ravi) ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸದ್ಯ ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು ಸಿದ್ರಾಮುಲ್ಲಾ ಖಾನ್ ಎಂದು ಏಕೆ ಕರೆಯುತ್ತಾರೆ ಎಂಬ ಬಗ್ಗೆ ತಿಳಿಸಿದೆ. ಸಿದ್ದರಾಮಯ್ಯರನ್ನ ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆದಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುನನ್ನು ನುಗ್ಗಿಸಿ ಪೆಡಂಭೂತದ ಜಯಂತಿಯನ್ನು ಆಚರಣೆಯಾಗಿ ತಂದವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?. ತಮ್ಮವರನ್ನೇ ತುಳಿಯುವ ಸಿದ್ದರಾಮಯ್ಯರ ಮನಸ್ಥಿತಿ ಕಂಡು ದೇವೇಗೌಡರು ಅಂದೇ ಸಿದ್ದರಾಮಯ್ಯರನ್ನು ಹೊರಹಾಕಿದ್ದರು. ಆಗ ಕಾಂಗ್ರೆಸ್ ಸೇರಲು ಅಹಿಂದ ಹೆಸರಲ್ಲಿ ಬಲಪ್ರದರ್ಶಿಸಿದರು ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದೆ. ಕನ್ನಡಿಗರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು? ತಮ್ಮವರನ್ನೇ ತುಳಿಯುವ ಸಿದ್ದು ಮನಸ್ಥಿತಿ ಕಂಡು ದೇವೇಗೌಡರು ಅಂದೇ ಅವರನ್ನು ಹೊರಹಾಕಿದರು. ಆಗ ಕಾಂಗ್ರೆಸ್ ಸೇರಲು ಬಲಪ್ರದರ್ಶನದ ಅಗತ್ಯ ಬಂತು. ಹಾಗಾಗಿ ಅಹಿಂದ ಎಂಬ ಏಣಿ ಕಟ್ಟಿ ನಂತರ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದುಳಿದವರು & ದಲಿತರನ್ನು ಹತ್ತಿದ ಏಣಿ ತುಳಿಯುವಂತೆ ಎಡಗಾಲಲ್ಲಿ ತುಳಿದದ್ದನ್ನು ಜನ ಮರೆತಿಲ್ಲ ಎಂದಿದೆ.
ಕನ್ನಡಿಗರು @siddaramaiah ರನ್ನು ಸಿದ್ರಾಮುಲ್ಲಾ ಖಾನ್ ಎಂದು ವಿನಾಕಾರಣ ಕರೆಯುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತಾಂಧ ಟಿಪ್ಪುವನ್ನು ನುಗ್ಗಿಸಿ, ನಮ್ಮ ನಾಡಿನ ಅಸ್ಮಿತೆಗೆ ಕೊಳ್ಳಿಯಿಟ್ಟ ಪೆಡಂಭೂತದ ಜಯಂತಿಯನ್ನು ಸರಕಾರಿ ಆಚರಣೆಯಾಗಿ ತಂದವರು ಅವರು. ಇಂಥವರು ಸಿದ್ರಾಮುಲ್ಲಾ ಖಾನ್ ಅಲ್ಲದೇ ಇನ್ಯಾರು?
1/8
— BJP Karnataka (@BJP4Karnataka) December 5, 2022
ಕ್ಷಣವೂ ವಿವೇಚಿಸದೆ ತಲಾಖ್ ಎಂದು ಮಹಿಳೆಯರ ಬದುಕು ಬರ್ಬಾದ್ ಮಾಡುವ ಮನಸ್ಥಿತಿಯವರಿಗೆ ಬೆನ್ನುತಟ್ಟುವ ಶಾದಿ ಭಾಗ್ಯ ಕಲ್ಪಿಸಿದ್ದು ಸಿದ್ದರಾಮಯ್ಯ. ಕೇವಲ ಒಂದು ಸಮುದಾಯದ ಓಲೈಕೆ ಮಾಡಲು ಸೆಕ್ಯುಲರಿಸಂ ಹೆಸರಿನಲ್ಲೇ ತುಷ್ಟೀಕರಣಕ್ಕಿಳಿದಿರಿ. ಇಂಥವರನ್ನು ಸಿದ್ರಾಮುಲ್ಲಾ ಖಾನ್ ಎನ್ನದೆ ಮತ್ತೇನೆಂದು ಕರೆದಾರು? ದೇಶಾದ್ಯಂತ ಮತಾಂಧತೆಯನ್ನು ಪಸರಿಸುತ್ತಾ ಅಲ್ಲಲ್ಲಿ ಭಯೋತ್ಪಾದಕ ದಾಳಿ ನಡೆಸಲು ಹೊಂಚು ಹಾಕುತ್ತಿದ್ದ ಪಿಎಫ್‌ಐನ 175 ಗೂಂಡಾಗಳ ಮೇಲಿದ್ದ ಕೇಸುಗಳನ್ನು ವಿಚಾರಣೆಯಿಲ್ಲದೆ ಹಿಂಪಡೆದದ್ದಕ್ಕಾಗಿ ವಿಚಾರವಾದಿ ಸಿದ್ದುಗೆ ಸಿದ್ರಾಮುಲ್ಲಾ ಖಾನ್ ಎಂಬ ಬಿರುದನ್ನು ನಾವಲ್ಲ, ಜನರೇ ನೀಡಿದ್ದಾರೆ.
ಇದನ್ನೂ ಓದಿ: ಮತ್ತೆ ಕೆಜಿಎಫ್ ಲಕಲಕ! 22 ವರ್ಷ ನಂತರ ಕೆಜಿಎಫ್ ಗಣಿಯಲ್ಲಿ ಚಿನ್ನ ತೆಗೆಯಲು ಟೆಂಡರ್ ಕರೆದ ಕೇಂದ್ರ ಸರ್ಕಾರ
ಟಿಪ್ಪು ಎಕ್ಸ್‌ಪ್ರೆಸ್ ಎಂಬ ಹೆಸರನ್ನು ಬದಲಾಯಿಸಿ ಜನ ಇಂದಿಗೂ ಸ್ಮರಿಸುವ-ಆರಾಧಿಸುವ ‘ಒಡೆಯರ್’ ಎಕ್ಸ್‌ಪ್ರೆಸ್ ಎಂದು ಕರೆದಾಗ ನಿಮಗೆ ಆದ ಅಸಹನೆಯನ್ನು ನಾಡಿನ ಜನ ಕಂಡಿದ್ದಾರೆ. ಟಿಪ್ಪುವಿನ ಆಸ್ಥಾನ ವಿದೂಷಕರಂತಾಗಿರುವ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎನ್ನದೇ ಮೋಸ ಮಾಡುವ ಮೀರ್ ಸಾದಿಕ್ ಎನ್ನಬಹುದೆ? ನಳಂದಾ ವಿಶ್ವವಿದ್ಯಾಲಯವನ್ನು ಸುಟ್ಟು ಸರ್ವನಾಶ ಮಾಡಿದ್ದು ಇಸ್ಲಾಮಿಕ್ ಭಯೋತ್ಪಾದನೆ ಎಂಬುದನ್ನು ಒಪ್ಪದ ನೀವು, ಆ ಇತಿಹಾಸವನ್ನು ಮರೆಮಾಚಲು ಯತ್ನಿಸಿದರು. ಇಂದಿಗೂ ಇಸ್ಲಾಮಿಕ್ ಭಯೋತ್ಪಾದನೆಯ ಕ್ರೌರ್ಯವನ್ನು ಒಪ್ಪದೇ ಮುಘಲ್ ಆಕ್ರಮಣಕಾರರ ಮಾನಸಿಕತೆಯಲ್ಲಿರುವ ಕಾರಣಕ್ಕೆ ಜನರೇ ಸಿದ್ರಾಮುಲ್ಲಾ ಖಾನ್ ಬ್ರಾಂಡ್ ಮಾಡಿರುವುದು.
ಮುಂಬೈ ದಾಳಿಯಲ್ಲಿ ಸಾರ್ವಜನಿಕರ ಪ್ರಾಣ ಉಳಿಸಲು ಪ್ರಾಣಾರ್ಪಣೆ ಮಾಡಿದ ಮೇಜರ್ ಸಂದೀಪ್ ಉನ್ನಿಕೃಷ್ಣನ್‌ರವರ ವೀರಗಾಥೆಯುಳ್ಳ “ಕರಾಳ ರಾತ್ರಿ” ಪಾಠವನ್ನು ಕೈಬಿಟ್ಟವರು ತಾವು. ರಾಷ್ಟ್ರೀಯತೆಯ ಪರಮ ವಿರೋಧಿ ನೀವು, ಹೀಗಿರುವಾಗ ತಮ್ಮನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆಯದೆ ಬೇರೆ ಬಿರುದು ಕೊಟ್ಟಾರೆಯೇ? ಹಿಜಾಬ್ ಸಮರ್ಥನೆಗೆ ಸ್ವಾಮೀಜಿಗಳು ಹಿಜಾಬ್ ಹಾಕಲ್ವಾ, ಹಿಂದೂ ಮಹಿಳೆಯರು ದುಪಟ್ಟಾ ಹಾಕಲ್ವಾ ಎಂದು ಎಲ್ಲದರಲ್ಲೂ ಹಿಜಾಬನ್ನೇ ಕಂಡ ಮೌಲ್ವಿ ನಮ್ಮ ಸಿದ್ರಾಮುಲ್ಲಾ ಖಾನ್. ಗೋ ಹತ್ಯೆಯಾದರೂ ಬೀಫ್ ಮಾರ್ಕೆಟ್ ನಿಲ್ಲಬಾರದೆಂದ ಹರಿಕಾರ. ಇಂಥವರು ಖಾನ್ ಆಗದೇ ಕೇಶವ ಆಗಲು ಸಾಧ್ಯವೇ? ಎಂದು ಸರಣಿ ಟ್ವೀಟ್ ಮೂಲಕ ಬಿಜೆಪಿ ಸಿದ್ದರಾಮಯ್ಯರನ್ನು ಏಕೆ ಸಿದ್ರಾಮುಲ್ಲಾ ಖಾನ್ ಎನ್ನಬೇಕು ಎಂಬ ಬಗ್ಗೆ ವಿವರಿಸಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:37 pm, Mon, 5 December 22