AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ಫೆ.16ರಂದು ರಾಜ್ಯ ಬಜೆಟ್ ಮಂಡನೆಗೆ ಬಿಜೆಪಿ ವಿರೋಧ, ಕಾರಣವೇನು?

Karnataka Budget 2024: ಮುಖ್ಯಮಂತ್ರಿ ಸಿದ್ದರಾಮಯ್ಯನವರು 2024ನೇ ಸಾಲಿನ ರಾಜ್ಯ ಬಜೆಟ್​ ಅನ್ನು ಇದೇ ಫೆಬ್ರವರಿ 16ರಂದು ಮಂಡಿಸಲು ತೀರ್ಮಾನಿಸಿದ್ದಾರೆ. ಆದ್ರೆ, ಇದಕ್ಕೆ ವಿರೋಧ ಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಫೆ.16ರಂದು ಬಜೆಟ್ ಮಂಡನೆಗೆ ಅವಕಾಶ ಮಾಡಿಕೊಡಬಾರದು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ. ಕಾರಣವೇನು?

Karnataka Budget 2024: ಫೆ.16ರಂದು ರಾಜ್ಯ ಬಜೆಟ್ ಮಂಡನೆಗೆ ಬಿಜೆಪಿ ವಿರೋಧ, ಕಾರಣವೇನು?
ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ಮನವಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 24, 2024 | 6:28 PM

ಬೆಂಗಳೂರು, (ಜನವರಿ 24): ಇದೇ ಫೆಬ್ರವರಿ 16ರಂದು ರಾಜ್ಯ ಬಜೆಟ್​ (Karnataka Budget 2024) ಮಂಡನೆಯಾಗಲಿದೆ. ಆದ್ರೆ, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್‌ ಸರ್ಕಾರ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಹೀಗಾಗಿ ಬಜೆಟ್​ ದಿನಾಂಕವನ್ನು ಮುಂದೂಡಬೇಕೆಂದು ಬಿಜೆಪಿ ನಿಯೋಗ(BJP Karnataka) ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿದೆ.

ಇಂದು (ಜನವರಿ 24) ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕ ನಿಯೋಗ, ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್‌ ಸರ್ಕಾರ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ಮನವಿ ಸಲ್ಲಿಸಿದೆ.

ರಾಜ್ಯಪಾಲರ ಭೇಟಿ ಬಳಿಕ ಅಶ್ವತ್ಥನಾರಾಯಣ್ ಹೇಳಿದ್ದೇನು?

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಚುನಾವಣಾ ಆಯೋಗವು ಬೆಂಗಳೂರಿನ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಚುನಾವಣೆ ನಡೆಯಲಿದೆ ಎಂದು ಜನವರಿ 23ರಂದೇ ಚುನಾವಣಾ ದಿನವನ್ನು ನಿಗದಿಪಡಿಸಿತ್ತು. ಆದರೆ, ಈಗ ಮತದಾನದ ದಿನವೇ ರಾಜ್ಯ ಸರ್ಕಾರ ಬಜೆಟ್ ಮಂಡನೆಗೆ ಮುಂದಾಗಿದೆ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಬಜೆಟ್ ದಿನವೇ ಚುನಾವಣೆ ಮಾಡುವ ಬದಲು ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಲು ಕೋರಲಾಗಿದೆ. ಬಿಜೆಪಿ, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ಕೊಡಲು ಕೋರಿದ್ದೇವೆ ಎಂದು‌ ಡಾ. ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು.

ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚಿಸುವುದಾಗಿ ರಾಜ್ಯಪಾಲರೂ ತಿಳಿಸಿದ್ದಾರೆ. ಇದಲ್ಲದೆ ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ ಎಂದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ