ಬೆಂಗಳೂರು, (ಜನವರಿ 24): ಇದೇ ಫೆಬ್ರವರಿ 16ರಂದು ರಾಜ್ಯ ಬಜೆಟ್ (Karnataka Budget 2024) ಮಂಡನೆಯಾಗಲಿದೆ. ಆದ್ರೆ, ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಹೀಗಾಗಿ ಬಜೆಟ್ ದಿನಾಂಕವನ್ನು ಮುಂದೂಡಬೇಕೆಂದು ಬಿಜೆಪಿ ನಿಯೋಗ(BJP Karnataka) ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಇಂದು (ಜನವರಿ 24) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕ ನಿಯೋಗ, ಫೆಬ್ರವರಿ 16ರಂದು ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ಇದೆ. ಈ ಚುನಾವಣೆ ದಿನದಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಮಂಡಿಸುವುದು ಸರಿಯಲ್ಲ. ಇದು ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಹೀಗಾಗಿ ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಬೇಕು ಎಂದು ಮನವಿ ಸಲ್ಲಿಸಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಚುನಾವಣಾ ಆಯೋಗವು ಬೆಂಗಳೂರಿನ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಚುನಾವಣೆ ನಡೆಯಲಿದೆ ಎಂದು ಜನವರಿ 23ರಂದೇ ಚುನಾವಣಾ ದಿನವನ್ನು ನಿಗದಿಪಡಿಸಿತ್ತು. ಆದರೆ, ಈಗ ಮತದಾನದ ದಿನವೇ ರಾಜ್ಯ ಸರ್ಕಾರ ಬಜೆಟ್ ಮಂಡನೆಗೆ ಮುಂದಾಗಿದೆ ಇದು ಸರಿ ಅಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಮಾದರಿ ನೀತಿಸಂಹಿತೆ ಮತ್ತು ಜನಪ್ರತಿನಿಧಿ ಕಾಯ್ದೆ ಪ್ರಕಾರ ಇದು ನ್ಯಾಯಬದ್ಧವಲ್ಲ. ಬಜೆಟ್ ದಿನವೇ ಚುನಾವಣೆ ಮಾಡುವ ಬದಲು ಬಜೆಟ್ ಮಂಡನೆ ದಿನಾಂಕವನ್ನು ಮುಂದಕ್ಕೆ ಹಾಕಲು ಕೋರಲಾಗಿದೆ. ಬಿಜೆಪಿ, ಈ ಸಂಬಂಧ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸೂಚನೆ ಕೊಡಲು ಕೋರಿದ್ದೇವೆ ಎಂದು ಡಾ. ಸಿ.ಎನ್. ಅಶ್ವತ್ಥನಾರಾಯಣ್ ತಿಳಿಸಿದರು.
ಬಜೆಟ್ ಮಂಡನೆ ದಿನವನ್ನು ಮುಂದೂಡಬೇಕು. ಚುನಾವಣೆ ದಿನವೇ ಬಜೆಟ್ ಮಂಡಿಸದಂತೆ ಸೂಚಿಸಲು ಕೋರಿದ್ದೇವೆ. ರಾಜ್ಯ ಸರ್ಕಾರಕ್ಕೆ ಈ ಕುರಿತು ಸೂಚಿಸುವುದಾಗಿ ರಾಜ್ಯಪಾಲರೂ ತಿಳಿಸಿದ್ದಾರೆ. ಇದಲ್ಲದೆ ಚುನಾವಣಾ ಆಯೋಗಕ್ಕೂ ಮನವಿ ಕೊಡಲಿದ್ದೇವೆ ಎಂದರು.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ