Hubballi News: ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್

ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲವೆಂದು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

Hubballi News: ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್
ಜಗದೀಶ್​ ಶೆಟ್ಟರ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 28, 2023 | 2:45 PM

ಹುಬ್ಬಳ್ಳಿ: ‘ಕಾಂಗ್ರೆಸ್(Congress) ಪಾರ್ಟಿಗೆ ಅನ್ ಕಂಡೀಷನ್​ ಆಗಿ ಬಂದಿದ್ದೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ರು, ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ‘ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ‘ನಾನು ಕಾಂಗ್ರೆಸ್ ಸೇರೋ ಸಮಯದಲ್ಲಿ ಹೇಳಿರೋ ಪ್ರಶ್ನೆಗೆ ಇದುವರೆಗೂ ಬಿಜೆಪಿ‌ಯವರು ಯಾರೂ ಉತ್ತರ ಕೊಟ್ಟಿಲ್ಲ. ಬಿಜೆಪಿಯವರು ಎಲ್ಲಿದಾರೆ? ಗೊತ್ತಿಲ್ಲ. ಪರೋಕ್ಷವಾಗಿ ಬಿಎಲ್ ಸಂತೋಷ್ ವಿರುದ್ದ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ. ಇನ್ನು ನಾನು ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ ಎಂದರು.

ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸೀಗುವ ಮೂಲಕ ಸಾಕಷ್ಟು ಅವಕಾಶಗಳಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡ್ತೇವೆ ಎಂದಿದ್ದಾರೆ. ಗ್ಯಾರೆಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತೆ. ಪ್ರತಿಪಕ್ಷ ಅದನ್ನ ರಾಜಕೀಯವಾಗಿ ಬಳಸಿಕೊಳ್ತಾ ಇದ್ದಾರೆ. ಹೊಸ ಸರ್ಕಾರ ಬಂದಿದ್ದು, ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತೆ ಎಂದಿದ್ದಾರೆ.

ಇದನ್ನೂ ಓದಿ:ಬಿಕೆ ಹರಿಪ್ರಸಾದ್​ಗೆ ಕೈ ತಪ್ಪಿದ ಸಚಿವ ಸ್ಥಾನ: ಸಿಡಿದೆದ್ದ ಬಿಲ್ಲವ ಸಮುದಾಯ ಹೇಳಿದ್ದೇನು?​

ಇನ್ನು ನೂತನ ಸಂಸತ್ ಉದ್ಘಾಟನೆಗೆ ರಾಷ್ಟಪತಿಯನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆಗ ನಾನು ಅಂದಿನ ರಾಷ್ಟಪತಿಯಾಗಿದ್ದ ಪ್ರಣವ್ ಮುಖರ್ಜಿ ಅವರನ್ನು ಕರದಿದ್ದೇ. ರಾಷ್ಟಪತಿಗಳನ್ನು ಕರೆಯಬೇಕು ಎಂದು ಪ್ರತಿ ಪಕ್ಷಗಳು ಹೇಳ್ತಿರೋದ ಸರಿಯಾಗಿದೆ. ಇನ್ನು ಶೆಟ್ಟರ್ ಸೋಲಿಗೆ ಕಾರಣ ವಿಚಾರ ‘ಸೋಲಿಗೆ ಕಾರಣವಾದದ್ದು, ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಜೊತೆಗೆ ಹಿರಿಯ ನಾಯಕರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ಆಗಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?, ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು. ಇನ್ನು ಭಜರಂಗದಳವನ್ನ ಬ್ಯಾನ್​ ವಿಚಾರ ಕುರಿತು ‘ಯಾರಾದರೂ ಬ್ಯಾನ್ ಮಾಡಿದ್ದಾರ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲ, ಎಲ್ಲವುದಕ್ಕೂ ಉತ್ತರಿಸಲು ಎಂದು ಶೆಟ್ಟರ್ ಗರಂ ಆಗಿ ಉತ್ತರಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್