ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ
ಬಾಬುರಾವ್ ಚಿಂಚನಸೂರ್ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
Follow us
Ganapathi Sharma
|

Updated on:Mar 20, 2023 | 10:47 PM

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ(BJP) ಬಾಬುರಾವ್ ಚಿಂಚನಸೂರ್ (Baburao Chinchansur) ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಜತೆಗೆ, ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ‘ಟಿವಿ9’ ಗೆ ಮಾಹಿತಿ ನೀಡಿವೆ. ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು‌ ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.

ಮಂಗಳವಾರ ಬೆಳಿಗ್ಗೆ ಕಾಂಗ್ರೆಸ್ ಸೇರ್ಪಡೆ

ಬಾಬೂರಾವ್ ಚಿಂಚನಸೂರ್ ಮಂಗಳವಾರ ಬೆಳಿಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸಮ್ಮುಖದಲ್ಲಿ ಅವರು ‘ಕೈ’ ಹಿಡಿಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Mon, 20 March 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ