ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ರಾಜೀನಾಮೆ; ಬಿಜೆಪಿಗೂ ಗುಡ್​​ಬೈ
ಬಾಬುರಾವ್ ಚಿಂಚನಸೂರ್ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.

Updated on: Mar 20, 2023 | 10:47 PM

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ (BJP) ಬಾಬುರಾವ್ ಚಿಂಚನಸೂರ್ (Baburao Chinchansur) ಸೋಮವಾರ ರಾತ್ರಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರು ಗುರುಮಿಠಕಲ್ ಕ್ಷೇತ್ರದ ವಿಧಾನಸಭೆ ಟಿಕೆಟ್ ಕೇಳಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿರುವ ಕಾರಣ ಟಿಕೆಟ್ ನೀಡಲಾಗದು ಎಂದು ಬಿಜೆಪಿ ನಾಯಕರು ತಿಳಿಸಿದ್ದರು. ಹೀಗಾಗಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. ಜತೆಗೆ, ಬಿಜೆಪಿ ಪಕ್ಷಕ್ಕೂ ರಾಜೀನಾಮೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ‘ಟಿವಿ9’ ಗೆ ಮಾಹಿತಿ ನೀಡಿವೆ. ನಿಜ ಶರಣ ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷರೂ ಆಗಿರುವ ಚಿಂಚನಸೂರ್, 2019 ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆ ಆಗಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಗುರುಮಠಕಲ್‌ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡಲು ಚಿಂಚನಸೂರ್ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2018ರ ವಿಧಾನಸಭ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಸೋತಿದ್ದ ಅವರು ಇದೀಗ ಮತ್ತೆ ‘ಕೈ’ ಪಕ್ಷದಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Belagavi: ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ 3,000 ರೂ. ನಿರುದ್ಯೋಗ ಭತ್ಯೆ; ರಾಹುಲ್ ಗಾಂಧಿ ಘೋಷಣೆ

2019ರ ಲೋಕಸಭಾ ಚುನಾವಣೆಯಲ್ಲಿ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಚಿಂಚನಸೂರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಿಂಗಳ ಹಿಂದೆಯೇ ಬಿಜೆಪಿಗೆ ರಾಜೀನಾಮೆ ಕೊಡಲು‌ ಮುಂದಾಗಿದ್ದರು. ಆದರೆ, ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಬಿಜೆಪಿಯಲ್ಲೇ ಉಳಿಯುವುದಾಗಿ ಹೇಳಿದ್ದರು.

ಮಂಗಳವಾರ ಬೆಳಿಗ್ಗೆ ಕಾಂಗ್ರೆಸ್ ಸೇರ್ಪಡೆ

ಬಾಬೂರಾವ್ ಚಿಂಚನಸೂರ್ ಮಂಗಳವಾರ ಬೆಳಿಗ್ಗೆ 9.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್‌ ಖರ್ಗೆ ಸಮ್ಮುಖದಲ್ಲಿ ಅವರು ‘ಕೈ’ ಹಿಡಿಯಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Mon, 20 March 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us