ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ ವಿರೋಧ ಪಕ್ಷ ನಾಯಕನ ಆಯ್ಕೆ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಸಭೆ ನಿಗದಿಯಾಗಿದ್ದು, ಈ ಸಭೆಯಲ್ಲಿ ಪಾಲ್ಗೊಂಡು ಶಾಸಕರ ಅಭಿಪ್ರಾಯ ಸಂಗ್ರಹಿಸಿಲು ಕೇಂದ್ರ ಬಿಜೆಪಿಯಿಂದ ವೀಕ್ಷಕರು ಬೆಂಗಳೂರಿಗೆ ಬಂದಿಳಿಸಿದ್ದಾರೆ.

ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು
ನಿರ್ಮಲಾ ಸೀತರಾಮನ್ ಭೇಟಿಯಾದ ವಿಜಯೇಂದ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 17, 2023 | 11:51 AM

ಬೆಂಗಳೂರು, (ನವೆಂಬರ್, 17): ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್​ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ. ಹೌದು.. ಕೆಳಮನೆ ಹಾಗೂ ಮೇಲ್ಮನೆಗೆ ವಿರೋಧ ಪಕ್ಷದ (Opposition Leaders )ಆಯ್ಕೆ ಮಾಡುವ ಸಂಬಂಧ ಇಂದು(ನವೆಂಬರ್ 17) ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕರ ಅಭಿಪ್ರಾಯಕ್ಕೆ ಕೇಂದ್ರ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ವೀಕ್ಷಕರನ್ನು ಬರಮಾಡಿಕೊಂಡ ವಿಜಯೇಂದ್ರ

ವಿಪಕ್ಷ ನಾಯಕ ಆಯ್ಕೆ ಮಾಡುವ ಸಂಬಂಧ ಶಾಸಕ ಅಭಿಪ್ರಾಯ ಸಂಗ್ರಹಿಸಲು ಬಂದಿರುವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಗೆ ಭೇಟಿ ನೀಡಿದು. ಈ ವೇಳ ಅವರನ್ನು ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸ್ವಾಗತಿಸಿದರು. ಬಳಿಕ ವಿಜಯೇಂದ್ರ ಅವರು ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ತೆರಳಿದರು.

ಇದನ್ನೂ ಓದಿ: ಇಂದು ವಿರೋಧ ಪಕ್ಷದ ನಾಯಕನ ಆಯ್ಕೆ ಫೈನಲ್: ಒಕ್ಕಲಿಗ ನಾಯಕನಿಗೆ ಪಟ್ಟ ಫಿಕ್ಸ್​, ಯಾರು ಗೊತ್ತಾ?

ವೀಕ್ಷಕರನ್ನು ಭೇಟಿಯಾದ ಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ

ಇನ್ನು ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ ಮೇಲ್ಮನೆ ವಿರೋಧ ಪಕ್ಷದ ಸ್ಥಾನದ ಅವಕಾಶ ಕೊಟ್ಟರೆ, ನಿಭಾಯಿಸುವುದಾಗಿ ವರಿಷ್ಠರಿಗೆ ಹೇಳಿದ್ದೇನೆ. ಇವತ್ತು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಸಭೆಯಲ್ಲಿ ಎರಡು ಮನೆಗಳಿಗೂ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ನಾನು ಆಕಾಂಕ್ಷಿ ಎನ್ನುವುದಕ್ಕಿಂತ ಮುಖ್ಯವಾಗಿ ನನಗೆ ಅವಕಾಶ ಕೊಟ್ಟರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:50 am, Fri, 17 November 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್