ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ: ವಿವಾದಾತ್ಮಕ ಹೇಳಿಕೆ ನೀಡಿದ ಸಲೀಂ ಅಹ್ಮದ್

ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ ಎಂದು ಹೇಳುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಎಲ್ ಸಂತೋಷ್ ಬಹುಶ ಕನಸು ಕಾಣುತ್ತಿದ್ದಾರೆ. ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಅವರ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಜಗಜ್ಜಾಹೀರಾಗಿದೆ. ಸಂತೋಷ್ ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ ಎಂದರು.

ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ: ವಿವಾದಾತ್ಮಕ ಹೇಳಿಕೆ ನೀಡಿದ ಸಲೀಂ ಅಹ್ಮದ್
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್
Follow us
| Updated By: Rakesh Nayak Manchi

Updated on:Sep 03, 2023 | 3:43 PM

ಹುಬ್ಬಳ್ಳಿ, ಸೆ.3: ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ ಎಂದು ಹೇಳುವ ಮೂಲಕ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ (Salim Ahmed) ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಲ್ಲದೆ, 40 ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ (B.L.Santhosh) ಹೇಳಿಕೆಗೆ ತಿರುಗೇಟು ನೀಡಿದ ಸಲೀಂ ಅಹಮ್ಮದ್, ಅವರು ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ ಎಂದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಲೀಂ ಅಹಮ್ಮದ್, ಕರ್ನಾಟಕದಲ್ಲಿ ನಮ್ಮ ಶಾಸಕರನ್ನು ಬಾಂಬೆ ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದರು. ಮಧ್ಯಪ್ರದೇಶದಲ್ಲಿ ಆಪರೇಶನ್ ಮಾಡಿದ್ದಾರೆ. ಬಿಎಲ್ ಸಂತೋಷ್ ಅವರು ಬಹುಶ ಕನಸು ಕಾಣುತ್ತಿದ್ದಾರೆ. ಸಂತೋಷ್ ನಿದ್ದೆಯಲ್ಲಿ ಮಾತಾಡುತ್ತಿರಬಹುದು. ಬಿಜೆಪಿ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಜಗಜ್ಜಾಹೀರಾಗಿದೆ. ಸಂತೋಷ್ ಅವರಿಗೆ ವಾಸ್ತವ ಸ್ಥಿತಿ ಗೊತ್ತಿಲ್ಲ. ಅವರ ಹೇಳಿಕೆಗೆ ನಗಬೇಕೋ ಏನೋ ಮಾಡಬೇಕೋ ಗೊತ್ತಿಲ್ಲ ಎಂದರು.

ಇದನ್ನೂ ಓದಿ: ಆಪರೇಷನ್ ಕಮಲಕ್ಕೆ ಎಲ್ಲಿಂದ ಹಣ ಬರುತ್ತಿದೆ? ಬಿಎಲ್ ಸಂತೋಷ್ ಉತ್ತರಿಸಲಿ ಎಂದ ಪ್ರಿಯಾಂಕ್ ಖರ್ಗೆ

ಕಳೆದ ಬಾರಿ ಚುನಾವಣೆಯಲ್ಲಿ ಜನ ಬಿಜೆಪಿಗೆ ಉತ್ತರ ಕೊಟ್ಟಿದ್ದಾರೆ. ಮೋದಿ ಸುಳ್ಳು ಹೇಳುತ್ತಾ ಒಂಬತ್ತು ವರ್ಷ ಕಳೆದಿದ್ದಾರೆ. ನಾವು 100 ದಿನದಲ್ಲಿ ನುಡಿದಂತೆ ನಡೆದಿದ್ದೇವೆ. ಯಾವ ಘನಕಾರ್ಯ ಮಾಡೀದ್ದೀರಿ ಅಂತಾ ಜನ ನಿಮಗೆ ಉತ್ತರ‌ ಕೊಡಬೇಕು? ನಾವು ಮುಂದಿನ‌ ದಿನಗಳಲ್ಲಿ ಬಿಜೆಪಿಯನ್ನು ಬೆತ್ತಲೆ ಮಾಡುತ್ತೇವೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜೀನಾಮೆ ಕೊಡಿಸಿದ ಕಣ್ಣೀರ ಕಥೆಗೆ ಉತ್ತರ ಕೊಡಬೇಕು. ಕಾಂಗ್ರೆಸ್ ಪಕ್ಷಕ್ಕೆ ಆಪರೇಶನ್ ಹಸ್ತದ ಅವಶ್ತಕತೆ ಇಲ್ಲ. ನಮಗೆ ಅದರ ಅನಿವಾರ್ಯತೆ ಇಲ್ಲ. ಕಾಂಗ್ರೆಸ್ ಒಪ್ಪಿ ಕೆಲವರು ಬರುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 3 September 23

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು