ಬಿಜೆಪಿ ಅವಲೋಕನ ಸಭೆ: ಸೋಲಿಗೆ ಕಾರಣಗಳನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಪರಾಜಿತ ಅಭ್ಯರ್ಥಿಗಳು

ಇಂದು ನಡೆದ ಬಿಜೆಪಿ ಅವಲೋಕನ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Jun 08, 2023 | 6:44 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results 2023) ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು (BJP) ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಗುರುವಾರ ಮಾಡಲಾಗಿದೆ. ನಗರದ ಮಲ್ಲೇಶ್ವರಂನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ಬಿಜೆಪಿ ಸೋಲಿಗೆ ಕಾರಣಗಳನ್ನು ಬಿಚ್ಚಿಟ್ಟಿದ್ದಾರೆ. ಜೊತೆಗೆ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ಸೋಲಿಗೆ ಪರಾಜಿತ ಅಭ್ಯರ್ಥಿಗಳ ಕಾರಣಗಳು?

  • ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳು
  • ಒಳ ಮೀಸಲಾತಿ ಹಂಚಿಕೆಯ ಒಳ ಏಟು
  • 40% ಕಮೀಷನ್ ಆರೋಪ ಸೇರಿ ಕೆಲವು ಭ್ರಷ್ಟಾಚಾರ ಆರೋಪ ಪ್ರಕರಣಗಳು
  • ಅಲ್ಲಲ್ಲಿ ಬೀಸಿದ ವಿರೋಧಿ ಅಲೆ
  • ಟಿಕೆಟ್ ಹಂಚಿಕೆಯಲ್ಲಿನ ವಿಳಂಬ
  • ಹೈಕಮಾಂಡ್ ಮೇಲಿನ ಹೆಚ್ಚಿನ ಅವಲಂಬನೆ
  • ಸಚಿವರು ಸರ್ಕಾರ ಇದ್ದಾಗ ಸರಿಯಾಗಿ ಸ್ಪಂದಿಸಲಿಲ್ಲ
  • ಪಕ್ಷದ ಮುಖಂಡರು ಅಭ್ಯರ್ಥಿಗಳ ಮಾತಿಗೆ ಬೆಲೆ ಕೊಡಲಿಲ್ಲ
  • ಲಕ್ಷ್ಮಣ ಸವದಿ ಪಕ್ಷ ಬಿಟ್ಟಿದ್ದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಡೆತ ಆಯಿತು
  • ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಪ್ರಮುಖ ಕಾರಣ
  • ನಾಯಕರು ಮಾಡಿರುವ ತಪ್ಪಿನಿಂದ ನಾವು ಬಲಿಯಾದೆವು ಎಂದು ಪರಾಜಿತ ಅಭ್ಯರ್ಥಿಗಳು ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ಓದಿ: Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

ಸೋಲಿನಿಂದ ಯಾರೂ ಧೃತಿಗೆಡಬೇಡಿ: ಬಿಎಸ್​ ಯಡಿಯೂರಪ್ಪ ಕಿವಿಮಾತು

ಸಭೆಯಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮಾತನಾಡಿ, ವಿಧಾನಸಭಾ ಚುನಾವಣೆ ಸೋಲಿನಿಂದ ಯಾರೂ ಧೃತಿಗೆಡಬೇಡಿ. ರಾಜ್ಯದಲ್ಲಿ 2 ಸ್ಥಾನದಿಂದ ಇಲ್ಲಿಯವರೆಗೆ ಪಕ್ಷ ಕಟ್ಟಿ ಬೆಳೆಸಿದ್ದೇನೆ. ವಿಧಾನಸಭೆಯಲ್ಲಿ ಬಿಜೆಪಿಯ ಇಬ್ಬರು ಶಾಸಕರ ಮಾತ್ರ ಇದ್ದೆವು. ಬಿಜೆಪಿ ಶಾಸಕರಾಗಿದ್ದ ವಸಂತ ಬಂಗೇರ ಪಕ್ಷ ಬಿಟ್ಟು ಹೋದರು. ಆಗ ನಾನು ಒಬ್ಬನೇ ಸದನದಲ್ಲಿ ನಿಂತು ಹೋರಾಟ ಮಾಡಿದ್ದೇನೆ.

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ. ನರೇಂದ್ರ ಮೋದಿ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸಿ. ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರೋಣ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಕಿವಿಮಾತು ಹೇಳಿದರು.

ನನ್ನ ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲಿಗೆ ಸುಧಾಕರ್ ಕಾರಣ: ಎಂಟಿಬಿ ನಾಗರಾಜ್ 

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ಕಾಂಗ್ರೆಸ್​ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಬಿ.ಎಸ್.ಯಡಿಯೂರಪ್ಪ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ ಎಂದರು.

ಇದನ್ನೂ ಓದಿ: BJP Introspection Meeting: ಬಿಜೆಪಿ ಆತ್ಮಾವಲೋಕನ ಸಭೆ; ಯಾರಾಗಲಿದ್ದಾರೆ ಪ್ರತಿಪಕ್ಷ ನಾಯಕ?

ಡಾ. ಸುಧಾಕರ್​ಗೆ ಉಸ್ತುವಾರಿ ನೀಡಿದರು. ಆತನೂ ಸೋತ, ನಮ್ಮನ್ನೂ ಸೋಲಿಸಿದ. ಉಸ್ತುವಾರಿಯನ್ನು ಸಮರ್ಥವಾಗಿ ಸುಧಾಕರ್‌ ನಿಭಾಯಿಸಲಿಲ್ಲ. ನಾನು ಹಣ, ಅಧಿಕಾರದ ಆಮಿಷಕ್ಕೆ ಬಿಜೆಪಿಗೆ ಬಂದವನಲ್ಲ. ನನ್ನ ಮತ್ತು ಚಿಂತಾಮಣಿ ಅಭ್ಯರ್ಥಿ ಸೋಲಿಗೆ ಸುಧಾಕರ್ ಕಾರಣ ಎಂದು ವಾಗ್ದಾಳಿ ಮಾಡಿದರು.

40% ಕಮಿಷನ್ ಆರೋಪಕ್ಕೆ ಕೌಂಟರ್ ಅಟ್ಯಾಕ್ ಮಾಡಿಲ್ಲ. ನಾವು ಕೇವಲ ಸಿದ್ದರಾಮಯ್ಯಗೆ ಅಷ್ಟೇ ಬೈದೆವು. ನಮ್ಮಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಸರಿಯಾಗಿ ಆರೋಪಕ್ಕೆ ತಿರುಗೇಟು ಕೊಟ್ಟಿಲ್ಲ. ಚುನಾವಣೆ ಸಂದರ್ಭದಲ್ಲಿ ಅಕ್ಕಿ ಕೊಡುವುದನ್ನು ಕಡಿಮೆ ಮಾಡಿದ್ದೂ ಪ್ರಮುಖ ಕಾರಣಗಳಲ್ಲಿ ಒಂದು. ಪಕ್ಷದ ಕಾರ್ಯಕರ್ತರನ್ನು ಸಚಿವರು ಗಣನೆಗೆ ತೆಗೆದುಕೊಂಡಿಲ್ಲ. ಕಾರ್ಯಕರ್ತರ ಆಗು ಹೋಗುಗಳನ್ನು ಉಸ್ತುವಾರಿ ಸಚಿವರು ಕೇಳಲಿಲ್ಲ. ಇದರಿಂದ ಕಾರ್ಯಕರ್ತರು ಸಿಟ್ಟಾಗಿದ್ದರು. ಹತ್ತು ಕೆಜಿ ಅಕ್ಕಿ ಗ್ಯಾರಂಟಿಯೂ ನನ್ನ ಸೋಲಿಗೆ ಕಾರಣವಾಗಿ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:43 pm, Thu, 8 June 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ