ಸ್ವಪಕ್ಷದವರ ವಿರುದ್ಧವೇ ಬಹಿರಂಗ ಹೇಳಿಕೆ: ಯತ್ನಾಳ್, ರೇಣುಕಾಚಾರ್ಯಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ

ಬಿಜೆಪಿ ನಾಯಕರಿಂದ ಬಹಿರಂಗ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ ಸೇರಿ ಕೆಲವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಿದೆ. ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಉತ್ತರ ನೀಡಬೇಕೆಂದು ಸೂಚಿಸಲಾಗಿದೆ. 

Follow us
Kiran HV
| Updated By: ಗಂಗಾಧರ​ ಬ. ಸಾಬೋಜಿ

Updated on:Jun 29, 2023 | 7:11 PM

ಬೆಂಗಳೂರು: ಬಿಜೆಪಿ ನಾಯಕರಿಂದ ಬಹಿರಂಗ ಹೇಳಿಕೆ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಮಾಜಿ ಶಾಸಕ ರೇಣುಕಾಚಾರ್ಯ (MP Renukacharya) ಸೇರಿ ಕೆಲವರಿಗೆ ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಿದೆ. ಬಹಿರಂಗ ಹೇಳಿಕೆ ನೀಡದಂತೆ ನೋಟಿಸ್‌ ನೀಡಿದ್ದು, ಒಂದು ವಾರದೊಳಗಾಗಿ ಲಿಖಿತ ರೂಪದಲ್ಲಿ ಇದಕ್ಕೆ ಉತ್ತರ ನೀಡಬೇಕೆಂದು ಸೂಚಿಸಲಾಗಿದೆ.

ತಮಗೆ ಪಕ್ಷ ಸಾಕಷ್ಟು ಬಾರಿ ತಿಳಿ ಹೇಳಿದರೂ ಕೂಡ ತಾವು ಪದೇ ಪದೇ ರಾಜ್ಯ ಮತ್ತು ರಾಷ್ಟ್ರೀಯ ನಾಯಕರುಗಳ ವಿರುದ್ಧ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಶಿಸ್ತು ಸಮಿತಿ ಗಂಭೀರವಾಗಿ ಪರಿಗಣಿಸಿದೆ. ತಮ್ಮ ಮೇಲೆ ಯಾಕೆ ಶಿಸ್ತು ಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ಈ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: ಬಿಜೆಪಿಯಲ್ಲೇ ಭುಗಿಲೆದ್ದ ಅಂತರ್​​ಯುದ್ಧ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನಳಿನ್ ಕುಮಾರ್ ಕಟೀಲ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಸ್ವಪಕ್ಷದ ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ 

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಕೆರಳಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದರು. ಗ್ರಾಮ ಪಂಚಾಯಿತಿಯಲ್ಲಿ ಗೆಲ್ಲದವರು ಬಂದು ನಮಗೆ ಮಾರ್ಗದರ್ಶನ ಮಾಡುತ್ತಾರೆ. ಅಣ್ಣಾಮಲೈ ಬಂದು ನಮಗೆ ಮಾರ್ಗದರ್ಶನ ಕೊಡುತ್ತಾರೆ.

ಅಣ್ಣಾಮಲೈ ಏನು ದೊಡ್ಡ ಹೀರೋ ನಾ? ಸೆಲ್ಯೂಟ್ ಹೊಡೆಸಿಕೊಳ್ಳುತ್ತಿದ್ದವರಿಂದ ಬೊಮ್ಮಾಯಿ ಅವರಿಗೆ ಹೇಳಿಸಿಕೊಳ್ಳುವ ಮುಜುಗರ. ಇವೆಲ್ಲಾ ನನ್ನ ಮಾತುಗಳಲ್ಲ, ಕಾರ್ಯಕರ್ತರ ಭಾವನೆಗಳು. ಪ್ರಧಾನಿ ಮೋದಿ ಬಂದು ಹೋದ ಮೇಲೆ ಅದನ್ನು ಮತಗಳಾಗಿ ಪರಿವರ್ತನೆ ಮಾಡುವ ಮುಖಗಳು ಬೇಕಲ್ವಾ? ಅಂತೆಲ್ಲ ಎಂದು ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯಿತಿ ಗೆಲ್ಲದವರು ನಮಗೆ ಮಾರ್ಗದರ್ಶನ ಮಾಡ್ತಾರೆ: ಸ್ವಪಕ್ಷದ ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ನಳಿನ್​​ ಕುಮಾರ್​ ಕಟೀಲ್​ಗೆ ರಾಜೀನಾಮೆ ನೀಡುವಂತೆ ಬಹಿರಂಗ ಆಗ್ರಹ​

ಇತ್ತೀಚಿಗೆ ನಳಿನ್​​ ಕುಮಾರ್​ ಕಟೀಲ್​ ವಿರುದ್ಧ ಕಿಡಿಕಾರಿದ್ದ ರೇಣುಕಾಚಾರ್ಯ, ಅವರ ಅಧ್ಯಕ್ಷತೆಯಲ್ಲಿ ಬಿಜಿಪಿ ಹೀನಾಯವಾಗಿ ಸೋಲು ಕಂಡಿದೆ. ಇದರಿಂದ ಅವರು ನೈತಿಕ ಹೊಣೆಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಹಿರಂಗವಾಗಿಯೇ ಆಗ್ರಹಿಸಿದ್ದರು.

ಅದೇ ರೀತಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ಬಸವನಗೌಡ ಪಾಟೀಲ್​ ಯತ್ನಾಳ್​ ಹೊಂದಾಣಿಕೆಯ ಆರೋಪ ಮಾಡಿದ್ದರು.

ಬಿಜೆಪಿ ಸ್ವಪಕ್ಷದವರಿಂದಲೇ ನಾಯಕರ ವಿರುದ್ಧ ಹೇಳಿಕೆ ವಿಚಾರ ಹಿನ್ನೆಲೆ ನಾಳೆ ಬೆಳಿಗ್ಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಯಕರ ಸಭೆ ಕರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:05 pm, Thu, 29 June 23