Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ವೀಟ್​​ ವಾರ್​​: ಯತ್ನಾಳ್, ಹರಿಪ್ರಸಾದ್​ ಸೇರಿ ಪಕ್ಷ ಆರಂಭಿಸುವುದು ಒಳ್ಳೆಯದು ಎಂದ ಬಿಸಿ ಪಾಟೀಲ್

ಮಾಜಿ ಸಚಿವ ಬಿಸಿ ಪಾಟೀಲ್​ ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​​) ಮೂಲಕ ಬಿಕೆ ಹರಿಪ್ರಸಾದ ಮತ್ತು ಬಸನಗೌಡ ಪಾಟೀಲ್​ ಯತ್ನಾಳ್​ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಟ್ವೀಟ್ ಮೂಲಕವೇ ಬಸನಗೌಡ ಪಾಟೀಲ್​ ಯತ್ನಾಳ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಟ್ವೀಟ್​​ ವಾರ್​​: ಯತ್ನಾಳ್, ಹರಿಪ್ರಸಾದ್​ ಸೇರಿ ಪಕ್ಷ ಆರಂಭಿಸುವುದು ಒಳ್ಳೆಯದು ಎಂದ ಬಿಸಿ ಪಾಟೀಲ್
ಮಾಜಿ ಸಚಿವ ಬಿಸಿ ಪಾಟೀಲ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 26, 2023 | 12:55 PM

ಬೆಂಗಳೂರು, ಡಿಸೆಂಬರ್​ 26: ಮಾಜಿ ಸಚಿವ ಬಿಸಿ ಪಾಟೀಲ್ (BC Patil)​ ಕಾಂಗ್ರೆಸ್​ ನಾಯಕ ಬಿ.ಕೆ.ಹರಿಪ್ರಸಾದ್​ (BK Hariprasad) ಮತ್ತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ (Basangouda Patil Yatnal) ವಿರುದ್ಧ ವಾಗ್ದಾಳಿ ಮಾಡಿದ್ದಾರೆ. “ವಿಕೃತ ಮನಸು ಹೊಂದಿರುವ ಬಿ.ಕೆ.ಹರಿಪ್ರಸಾದ್​​ ಮತ್ತು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಇಬ್ಬರೂ ಸೇರಿ ಒಂದು ಪಕ್ಷ ಆರಂಭಿಸುವುದು ಒಳ್ಳೆಯದು ಅಂತ ನನ್ನ ಭಾವನೆ” ಎಂದು ಬಿ.ಸಿ.ಪಾಟೀಲ್ ಟ್ವೀಟ್​​​ ಮಾಡಿದ್ದಾರೆ.

‘”ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ನಾನು ಬಸವನಗೌಡ ಪಾಟೀಲ್ ಅಂದರೆ ಬಿಸಿ ಪಾಟೀಲ್. ಏನು ಪಾಟೀಲ್ ಅವರೇ, ನೀವು ಈ ರೀತಿ ಹೇಳಿಕೆ ಕೊಡುವುದು ಸರಿನಾ ನೀವು ಈ ರೀತಿ ಹೇಳಿಕೆ ಕೊಡುವುದು ನೋಡಿದರೆ ನೀವು ಬಿಜೆಪಿ ಪರವಾಗಿರುವಿರೋ ಅಥವಾ ಕಾಂಗ್ರೆಸ್ ಪರವಾಗಿರುವಿರೋ ಎನ್ನುವುದು ಅನುಮಾನ. ವಿಷಯ ತಿಳಿದುಕೊಂಡು ಮಾತಾಡುವುದು ಬಹಳ ಒಳ್ಳೆಯದು” ಎಂದಿದ್ದಾರೆ.

ಇದನ್ನೂ ಓದಿ: ಬಿಎಸ್​ ಯಡಿಯೂರಪ್ಪ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ್​ ಯತ್ನಾಳ್​

ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಗಾಗ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ. ಇತ್ತ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕನ ಸ್ಥಾನ ದೂರೆಯದೆ ಕಂಗಲಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್​ ಕೂಡಾ ಬಿವೈ ವಿಜಯೇಂದ್ರ ಹಾಗೂ ಆರ್​ ಅಶೋಕ್ ವಿರುದ್ಧ ಹೇಳಿಕೆ ನೀಡುತ್ತಾ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಬಿಸಿ ಪಾಟೀಲ್​ ಸಾಮಾಜಿಕ ಜಾಲತಾಣ ಎಕ್ಸ್​ (ಟ್ವಿಟರ್​​) ನಲ್ಲಿ ಬಿಕೆ ಹರಿಪ್ರಸಾದ ಮತ್ತು ಬಸನಗೌಡ ಪಾಟೀಲ್​ ಯತ್ನಾಳ್​ ಅವರ ಕಾಲು ಎಳೆದಿದ್ದಾರೆ.

ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಯತ್ನಾಳ್​

ಇದಕ್ಕೆ ಟ್ವೀಟ್ ಮೂಲಕವೇ ಬಸನಗೌಡ ಪಾಟೀಲ್​ ಯತ್ನಾಳ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. “ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಆಮೇಲೆ ಯೋಚಿಸಬಹುದು.” ಎಂದು ಬಸನಗೌಡ ಪಾಟೀಲ್​ ಯತ್ನಾಳ್​ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ