ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು

ಅತ್ತ ಜಾತಿ ಜನಗಣತಿ ಒತ್ತಾಯಿಸಿ ಬೃಹತ್ ಜಾಗೃತಿ ಸಮಾವೇಶ ಆಯೋಜನೆ ಮಾಡುತ್ತಾ, ಇತ್ತ ತಾವೂ ಅಖಾಡಕ್ಕೆ ಇಳಿಯಲು ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ ಸಜ್ಜಾಗಿ ನಿಂತಿದ್ದಾರೆ. ಸಿದ್ದರಾಮಯ್ಯ ತಂತ್ರಗಾರಿಕೆ ಪ್ರತಿಯಾಗಿ ಬಿಕೆ ಹರಿಪ್ರಸಾದ್ ಕೂಡ ಸಮಯದಾಯ ಒಗ್ಗೂಡಿಸುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಮತ್ತೊಂದು ಸಮಾವೇಶ ನಡೆಸಲು ಸಜ್ಜಾಗುತ್ತಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು
ಬಿಕೆ ಹರಿಪ್ರಸಾದ್ ಮತ್ತು ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Dec 17, 2023 | 9:04 AM

ಬೆಂಗಳೂರು, ಡಿ.17: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಟೀಕೆಗಳನ್ನು ನಡೆಸುತ್ತಾ ಬರುತ್ತಿರುವ ಕಾಂಗ್ರೆಸ್ ಎಂಎಲ್​ಸಿ ಬಿಕೆ ಹರಿಪ್ರಸಾದ್ (B.K. Hariprasad), ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಪ್ರತಿಯಾಗಿ ಸಮಯದಾಯ ಒಗ್ಗೂಡಿಸುತ್ತಾ ಬರುತ್ತಿದ್ದಾರೆ. ಮೊದಲು ಹಿಂದುಳಿದ ವರ್ಗಗಳ ಒಗ್ಗೂಡಿಸಿ ತಮ್ಮ ಸಾಮರ್ಥ್ಯವನ್ನು ಎದುರಾಳಿಗಳಿಗೆ ಮನವರಿಕೆ ಮಾಡಿದ್ದ ಹರಿಪ್ರಸಾದ್, ಇದೀಗ ಮತ್ತೊಂದು ಸಮಾವೇಶ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ.

ಈಡಿಗ, ಬಿಲ್ಲವ, ನಾಮಧಾರಿ ಸಮಾವೇಶ ಮೂಲಕ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಒಡ್ಡಿದ್ದರು. ಇವರಿಗೆ ಕೌಂಟರ್​ ನೀಡಲೆಂದೇ ಸರ್ಕಾರದ ಇರಾದೆ ಮೇರೆಯೇ ಮತ್ತೊಂದು ಈಡಿಗ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಸಮಯದಾಯದ ನಾಯಕ ಹರಿಪ್ರಸಾದ್ ಅವರನ್ನೇ ದೂರ ಇಡಲಾಗಿತ್ತು.

ಇದನ್ನೂ ಓದಿ: ಈಡಿಗ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳಿಗೆ ಟಕ್ಕರ್ ಕೊಟ್ಟ ಬಿಕೆ ಹರಿಪ್ರಸಾದ್

ಇದೀಗ ಜಾತಿ ಜನಣತಿಗೆ ಒತ್ತಾಯಿಸಿ ನಡೆಯುತ್ತಿರುವ ಅಹಿಂದ ಸಮಾವೇಶಕ್ಕೆ ಹರಿಪ್ರಸಾದ್ ಕಾಯುತ್ತಿದ್ದಾರೆ. ಜನವರಿಯಲ್ಲಿ ಮತ್ತೊಂದು ಸುತ್ತಿನ ಬೃಹತ್ ಹಿಂದುಳಿದ ಸಮಾವೇಶ ನಡೆಸಲು ಹರಿಪ್ರಸಾದ್ ಸಿದ್ಧತೆ ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲು ಸಜ್ಜಾಗುತ್ತಿದ್ದಾರೆ.

ಹರಿಪ್ರಸಾದ್ ಅವರು ಹಿಂದುಳಿದ ವರ್ಗ ತಮ್ಮ ಬೆನ್ನಿಗೆ ನಿಂತಿದೆ ಎಂದು ಮತ್ತೆ ಸಂದೇಶ ರವಾನಿಸಲು ಮುಂದಾಗಿದ್ದು, ಮತ್ತೊಂದು ಸುತ್ತು ರಾಜ್ಯ ಪ್ರವಾಸ ಮಾಡಲಿದ್ದಾರೆ. ಹಿಂದುಳಿದ ವರ್ಗಗಳ ಹಲವು ಸ್ವಾಮೀಜಿಗಳು ಜನವರಿಯಲ್ಲಿ ಬೃಹತ್ ಸಮಾವೇಶ ನಡೆಸಲು ಹರಿಪ್ರಸಾದ್ ಬೆನ್ನಿಗೆ ನಿಂತಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ