ಕಳ್ಳರನ್ನು ಕಳ್ಳ ಎಂದು ಹೇಳೋದು ತಪ್ಪು ಎಂಬ ಭಾವನೆ ಬಿಜೆಪಿಯಲ್ಲಿದೆ: ಬಿಕೆ ಹರಿಪ್ರಸಾದ್​ ವಾಗ್ದಾಳಿ

|

Updated on: Mar 25, 2023 | 4:08 PM

ಕಳ್ಳರನ್ನು ಕಳ್ಳ ಎಂದು ಹೇಳೋದು ತಪ್ಪು ಎಂಬ ಭಾವನೆ ಬಿಜೆಪಿಯಲ್ಲಿದೆ. ನರೇಂದ್ರ ಮೋದಿ ಈ ದೇಶದಲ್ಲಿ ರಣಹೇಡಿ ಎಂದು ತೋರಿಸಿಕೊಳ್ಳುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ ಮಾಡಿದ್ದಾರೆ.

ಕಳ್ಳರನ್ನು ಕಳ್ಳ ಎಂದು ಹೇಳೋದು ತಪ್ಪು ಎಂಬ ಭಾವನೆ ಬಿಜೆಪಿಯಲ್ಲಿದೆ: ಬಿಕೆ ಹರಿಪ್ರಸಾದ್​ ವಾಗ್ದಾಳಿ
ಬಿ.ಕೆ.ಹರಿಪ್ರಸಾದ್
Image Credit source: vijaykarnataka.com
Follow us on

ಮಂಗಳೂರು: ಕಳ್ಳರನ್ನು ಕಳ್ಳ ಎಂದು ಹೇಳೋದು ತಪ್ಪು ಎಂಬ ಭಾವನೆ ಬಿಜೆಪಿಯಲ್ಲಿದೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್​ (BK Hariprasad) ವಾಗ್ದಾಳಿ ಮಾಡಿದರು. ಸಂಸದ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹಗೊಳಿಸಿರುವ ವಿಚಾರವಾಗಿ ಮಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿ ಅವರು, ನರೇಂದ್ರ ಮೋದಿ ಈ ದೇಶದಲ್ಲಿ ರಣಹೇಡಿ ಎಂದು ತೋರಿಸಿಕೊಳ್ಳುತ್ತಿದ್ದಾರೆ. ರಾಹುಲ್ ಮೇಲಿನ ಕ್ರಮವನ್ನು‌ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಎಲ್ಲಾ ನೀತಿ ಸಂಹಿತೆಗಳನ್ನು ಗಾಳಿಗೆ ತೂರಲಾಗಿದೆ. ರಾಹುಲ್ ಬಗ್ಗೆ ನರೇಂದ್ರ ಮೋದಿಗೆ ಎಷ್ಟು ಭಯ ಇದೆ ಎಂದು ಗೊತ್ತಾಗುತ್ತೆ. ಪಾಕಿಸ್ತಾನಕ್ಕೆ ಓಡಿಸುತ್ತೇವೆ ಎಂದವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ನರಮೇಧದ ಭಾಷಣ ಮಾಡುವವರು ಸಹ ಆರಾಮವಾಗಿ ತಿರುಗಾಡುತ್ತಿದ್ದಾರೆ. ಆದರೆ ಬಿಜೆಪಿಗೊಂದು ಕಾನೂನು, ಬೇರೆಯವರಿಗೊಂದು ಕಾನೂನು ಎನ್ನುವಂತಾಗಿದೆ. ದ್ವೇಷ ಭಾಷಣ ಮಾಡಿದವರು, ಸಂಘರ್ಷಕ್ಕೆ ಕರೆ ಕೊಟ್ಟವರು, ಶಾಂತಿ‌ಸೌಹಾರ್ಧತೆ ಕೆಡಿಸಿದವರ ಮೇಲೆ ಕ್ರಮ ಆಗಿಲ್ಲ ಎಂದು ತೀವ್ರ ವಾಗ್ದಾಳಿ ಮಾಡಿದರು.

ಸಂಪೂರ್ಣ ಮೀಸಲಾತಿ ರದ್ದುಗೊಳಿಸುವ ಹುನ್ನಾರವಿದು

ಮುಸ್ಲಿಂರ ಮೀಸಲಾತಿಗೆ ಕತ್ತರಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ಮೀಸಲಾತಿ ರದ್ದುಗೊಳಿಸುವ ಹುನ್ನಾರವಿದು. 2015ರಲ್ಲಿ ಬಿಹಾರದಲ್ಲಿ ಮೋಹನ್ ಭಾಗವತ್ ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ತೆಗುಯುತ್ತೇವೆ ಎಂದು ಹೇಳಿದ್ದರು. ಈ ಸಂವಿಧಾನದಲ್ಲಿ ಸರ್ಕಾರ ನಡೆಸಲು ಆಗಲ್ಲ ಎಂದು ಜೋಷಿಯವರು ಹೇಳಿದ್ದಾರೆ. ಬಿಜೆಪಿಯ ಸೂತ್ರಧಾರಿಗಳ ಹೇಳಿಕೆಯಂತೆ ಪಾತ್ರಧಾರಿಗಳು ಮಾಡುತ್ತಿದ್ದಾರೆ ಎಂದರು.

ಇದನ್ನೂ ಓದಿ: ರಾಜಕೀಯ ಲಾಭದ ದುರುದ್ದೇಶದ ಪರಿಷ್ಕೃತ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ

ಸಂಪೂರ್ಣವಾಗಿ ಮೀಸಲಾತಿ ವಿರೋಧಿ ನೀತಿಯಿದು. ಇದು ಕೇವಲ ಮೊಸಳೆ ಕಣ್ಣೀರು ಹಾಕುವಂತದ್ದು. ಮೊದಲು ಮೂಗಿಗೆ ತುಪ್ಪ ಹಚ್ಚುತ್ತಿದ್ದರು. ಈಗ ತಲೆ ಮೇಲೆ ತುಪ್ಪ ಹಚ್ಚುತ್ತಿದ್ದಾರೆ. ಮೂಗಿಗೆ ತುಪ್ಪ ಹಚ್ಚಿದರೆ ವಾಸನೆಯಾದರು ಬರುತ್ತಿತ್ತು. ತಲೆ ಚೆನ್ನಾಗಿ ಬಾಚಿಕೊಳ್ಳಿಯೆಂದು ತಲೆಗೆ ತುಪ್ಪ ಹಚ್ಚಿದ್ದಾರೆ ಎಂದು ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ ಮಾಡಿದ್ದಾರೆ.

ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’: ಸಿದ್ದರಾಮಯ್ಯ 

ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್​ಗಳಿಗೆ ಜನ ಬಲಿಯಾಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾಹ ಬಂದಾಗ ಬರಲಿಲ್ಲ, ಈಗ ಮಾತ್ರ ಕರ್ನಾಟಕದ ಬಗ್ಗೆ ಪ್ರೀತಿ ಹುಕ್ಕಿಹರಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ಕುಮಾರಸ್ವಾಮಿ ಕಿಡಿ

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದಿದ್ದಾರೆ.

ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಮಾಣಿಕತೆಗೆ ಸಾಕ್ಷಿ. ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:08 pm, Sat, 25 March 23