AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಮತ್ತೆ ತಲೆನೋವಾದ ಬಿಆರ್ ಪಾಟೀಲ್; ರಾಜೀನಾಮೆ ಬಗ್ಗೆ ಉಲ್ಲೇಖಿಸಿ ಸಿಎಂಗೆ ಪತ್ರ

ಆಳಂದ ಶಾಸಕ ಬಿ.ಆರ್.ಪಾಟೀಲ್ ಸಿಎಂ ಗೆ ಪತ್ರ ಬರೆದಿದ್ದು, ‘ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ವಿರುದ್ಧದ ಆರೋಪಗಳ ಸಂಬಂಧ ತನಿಖೆಯನ್ನು ನಡೆಸಿ, ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಸರ್ಕಾರಕ್ಕೆ ಮತ್ತೆ ತಲೆನೋವಾದ ಬಿಆರ್ ಪಾಟೀಲ್; ರಾಜೀನಾಮೆ ಬಗ್ಗೆ ಉಲ್ಲೇಖಿಸಿ ಸಿಎಂಗೆ ಪತ್ರ
ಬಿಆರ್​ ಪಾಟೀಲ್ ಸಿಎಂ ಗೆ ಪತ್ರ​
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2023 | 5:56 PM

Share

ಬೆಂಗಳೂರು, ನ.28: ಕಾಂಗ್ರೆಸ್​ನ ಹಿರಿಯ, ಆಳಂದ ಶಾಸಕ ಬಿ.ಆರ್.ಪಾಟೀಲ್(BR Patil) ಕೆಆರ್‌ಐಡಿಎಲ್‌ ಕಾಮಗಾರಿಗಳನ್ನು ಲಂಚ ಪಡೆದು  ನೀಡಿದ್ದೇನೆಂಬ ಆರೋಪ ಬಂದಿದೆ. ಇಂತಹ ಆರೋಪಗಳನ್ನು ಹೊತ್ತು ಅಧಿವೇಶನ(Session)ಕ್ಕೆ ಹಾಜರಾಗುವುದು ಸರಿಯಲ್ಲ. ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ವಿರುದ್ಧದ ಆರೋಪಗಳ ಸಂಬಂಧ ತನಿಖೆಯನ್ನು ನಡೆಸಿ, ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭೆಯ ವಿಷಯ ಪ್ರಸ್ತಾಪಿಸಿ ಪತ್ರ ಬರೆದಿರುವ B.R ಪಾಟೀಲ್, 2013ರಲ್ಲಿ ಕಾಮಗಾರಿಗಳನ್ನು ನಾನು ಕೆಆರ್‌ಐಡಿಎಲ್‌ ಸಂಸ್ಥೆಗೆ ನೀಡಿದ್ದೆ. ಕಾರಣಾಂತರಗಳಿಂದ 2013ರಲ್ಲಿ ನೀಡಿದ್ದ ಕಾಮಗಾರಿಗಳು ಪೂರ್ಣವಾಗಿಲ್ಲ. ಕಳೆದ ಅಧಿವೇಶನದಲ್ಲಿ ಪ್ರಸ್ತಾಪಿಸಿದಾಗ KRIDL ನಿಂದ ನಾನು ಲಂಚ ಪಡೆದು ಭೂಸೇನೆಗೆ ಕಾಮಗಾರಿ ಕೊಟ್ಟಿದ್ದೇನೆಂದು ನನ್ನನ್ನೇ ಅನುಮಾನದಿಂದ ನೋಡಿದರು. ಪ್ರಿಯಾಂಕ್ ಖರ್ಗೆ ಅನುಪಸ್ಥಿತಿಯಲ್ಲಿ ನನ್ನ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅನುಮಾನ ಬರುವಂತೆ ಮಾತನಾಡಿದರು. ಅದಾದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಕಾಮಗಾರಿಗಳ ಕುರಿತು ಸಭೆಯನ್ನು ನಡೆಸಲಿಲ್ಲ.

ಇದನ್ನೂ ಓದಿ:BR Patil: ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು; ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ

ತಕ್ಷಣವೇ ತನಿಖಾ ಆಯೋಗ ರಚನೆ ಮಾಡಿ

ಇಂತಹ ಆರೋಪಗಳನ್ನು ಹೊತ್ತುಕೊಂಡು ನಾನು ಅಧಿವೇಶನಕ್ಕೆ ಹಾಜರಾಗುವುದು ಸರಿಯಲ್ಲ. ಪಂಚ ರಾಜ್ಯ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಾರದೆಂದು ಈಗ ಪತ್ರ ಬರೆಯುತ್ತಿದ್ದೇನೆ. ತಕ್ಷಣವೇ ತನಿಖಾ ಆಯೋಗ ರಚನೆ ಮಾಡಿ ಎಂದು ಸಿಎಂಗೆ ಪತ್ರದ ಮೂಲಕ ಬಿ ಆರ್ ಪಾಟೀಲ್ ಆಗ್ರಹಿಸಿದ್ದಾರೆ.

ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ ಎಂದ ಸಿಎಂ

ಇನ್ನು ಆಳಂದ ಶಾಸಕ ಬಿ.ಆರ್.ಪಾಟೀಲ್ ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ, ನಾನು ನೋಡಿಲ್ಲ, ಏನು ಪತ್ರ ಬರೆದಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:45 pm, Tue, 28 November 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು