ಬೆಂಗಳೂರು, ನ.28: ಕಾಂಗ್ರೆಸ್ನ ಹಿರಿಯ, ಆಳಂದ ಶಾಸಕ ಬಿ.ಆರ್.ಪಾಟೀಲ್(BR Patil) ಕೆಆರ್‌ಐಡಿಎಲ್ ಕಾಮಗಾರಿಗಳನ್ನು ಲಂಚ ಪಡೆದು ನೀಡಿದ್ದೇನೆಂಬ ಆರೋಪ ಬಂದಿದೆ. ಇಂತಹ ಆರೋಪಗಳನ್ನು ಹೊತ್ತು ಅಧಿವೇಶನ(Session)ಕ್ಕೆ ಹಾಜರಾಗುವುದು ಸರಿಯಲ್ಲ. ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ವಿರುದ್ಧದ ಆರೋಪಗಳ ಸಂಬಂಧ ತನಿಖೆಯನ್ನು ನಡೆಸಿ, ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.
ಕಳೆದ ವಿಧಾನಸಭೆಯ ವಿಷಯ ಪ್ರಸ್ತಾಪಿಸಿ ಪತ್ರ ಬರೆದಿರುವ B.R ಪಾಟೀಲ್, 2013ರಲ್ಲಿ ಕಾಮಗಾರಿಗಳನ್ನು ನಾನು ಕೆಆರ್‌ಐಡಿಎಲ್ ಸಂಸ್ಥೆಗೆ ನೀಡಿದ್ದೆ. ಕಾರಣಾಂತರಗಳಿಂದ 2013ರಲ್ಲಿ ನೀಡಿದ್ದ ಕಾಮಗಾರಿಗಳು ಪೂರ್ಣವಾಗಿಲ್ಲ. ಕಳೆದ ಅಧಿವೇಶನದಲ್ಲಿ ಪ್ರಸ್ತಾಪಿಸಿದಾಗ KRIDL ನಿಂದ ನಾನು ಲಂಚ ಪಡೆದು ಭೂಸೇನೆಗೆ ಕಾಮಗಾರಿ ಕೊಟ್ಟಿದ್ದೇನೆಂದು ನನ್ನನ್ನೇ ಅನುಮಾನದಿಂದ ನೋಡಿದರು. ಪ್ರಿಯಾಂಕ್ ಖರ್ಗೆ ಅನುಪಸ್ಥಿತಿಯಲ್ಲಿ ನನ್ನ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅನುಮಾನ ಬರುವಂತೆ ಮಾತನಾಡಿದರು. ಅದಾದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಕಾಮಗಾರಿಗಳ ಕುರಿತು ಸಭೆಯನ್ನು ನಡೆಸಲಿಲ್ಲ.
ಇದನ್ನೂ ಓದಿ:BR Patil: ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು; ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ
ಇಂತಹ ಆರೋಪಗಳನ್ನು ಹೊತ್ತುಕೊಂಡು ನಾನು ಅಧಿವೇಶನಕ್ಕೆ ಹಾಜರಾಗುವುದು ಸರಿಯಲ್ಲ. ಪಂಚ ರಾಜ್ಯ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಾರದೆಂದು ಈಗ ಪತ್ರ ಬರೆಯುತ್ತಿದ್ದೇನೆ. ತಕ್ಷಣವೇ ತನಿಖಾ ಆಯೋಗ ರಚನೆ ಮಾಡಿ ಎಂದು ಸಿಎಂಗೆ ಪತ್ರದ ಮೂಲಕ ಬಿ ಆರ್ ಪಾಟೀಲ್ ಆಗ್ರಹಿಸಿದ್ದಾರೆ.
ಇನ್ನು ಆಳಂದ ಶಾಸಕ ಬಿ.ಆರ್.ಪಾಟೀಲ್ ಪತ್ರ ಬರೆದಿರುವುದು ನನಗೆ ಗೊತ್ತಿಲ್ಲ, ನಾನು ನೋಡಿಲ್ಲ, ಏನು ಪತ್ರ ಬರೆದಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ಬೆಂಗಳೂರು ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:45 pm, Tue, 28 November 23