ಲಂಚ ಪ್ರಕರಣ: ಮಾಡಾಳ್ ಪುತ್ರ ಪ್ರಶಾಂತ್​​​ ವಿರುದ್ಧ ಮತ್ತೆರೆಡು ಎಫ್​ಐಆರ್ ದಾಖಲು

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್​​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ವಿರುದ್ಧ ಮತ್ತೆ ಎರಡು ಎಫ್​ಐಆರ್​ ದಾಖಲು ಮಾಡಲಾಗಿದೆ.

ಲಂಚ ಪ್ರಕರಣ: ಮಾಡಾಳ್ ಪುತ್ರ ಪ್ರಶಾಂತ್​​​ ವಿರುದ್ಧ ಮತ್ತೆರೆಡು ಎಫ್​ಐಆರ್ ದಾಖಲು
ಮಾಡಾಳ್ ಪುತ್ರ ಪ್ರಶಾಂತ್ Image Credit source: oneindia.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 10, 2023 | 3:47 PM

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Veerupakshappa)  ಪುತ್ರ ಪ್ರಶಾಂತ್​​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ವಿರುದ್ಧ ಮತ್ತೆ ಎರಡು ಎಫ್​ಐಆರ್​ ದಾಖಲು ಮಾಡಲಾಗಿದೆ. ಪಿಸಿ ಆ್ಯಕ್ಟ್ ಅಡಿ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಇನ್ಸ್​​ಪೆಕ್ಟರ್​​ ಕುಮಾರಸ್ವಾಮಿರಿಂದ FIR ದಾಖಲಿಸಿದ್ದು, ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದಾರೆ. ಮಾರ್ಚ್ 2 ರಂದು ನಡೆದ ಟ್ರ್ಯಾಪ್ ಕಾರ್ಯಚರಣೆ ವೇಳೆ 2 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪೈಕಿ ಶ್ರೇಯಸ್ ಕಶ್ಯಪ್ ಕಂಪೆನಿಯಿಂದ 40 ಲಕ್ಷ ರೂ. ಲಂಚ ಪಡೆಯುವಾಗ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು.

ಪ್ರತ್ಯೇಕ ಮತ್ತೆರಡು ಕೇಸ್ ದಾಖಲು

ಉಳಿದಂತೆ ಕ್ರೆಸೆಂಟ್ ರಸ್ತೆಯ ಖಾಸಗಿ ಕಚೇರಿಯಲ್ಲಿ ಮತ್ತೆ 1.60 ಲಕ್ಷ ರೂ. ಪತ್ತೆಯಾಗಿತ್ತು. ಕರ್ನಾಟಕ ಆರೋಮಾಸ್ ಕಂಪೆನಿಯ ಆಲ್ಬರ್ಟ್ ನಿಕೋಲಸ್ ಬಳಿ 45 ಲಕ್ಷ ರೂ. ಮತ್ತು ಗಂಗಾಧರ್ ಬಳಿ 45 ಲಕ್ಷ ರೂ. ಪತ್ತೆಯಾದ ಹಿನ್ನಲೆ ಪ್ರತ್ಯೇಕ ಕೇಸ್ ದಾಖಲಿಸಲಾಗಿದೆ. ಮತ್ತೊಂದೆಡೆ ಪ್ರಶಾಂತ್ ಮಾಡಾಳು ಸಂಬಂಧಿ ಸುರೇಂದ್ರ ಬಳಿ 60 ಲಕ್ಷ ಪತ್ತೆಯಾಗಿತ್ತು. ಹಾಗಾಗಿ ಪ್ರತ್ಯೇಕ ಮತ್ತೆರಡು ಕೇಸ್ ದಾಖಲಿಸಿ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಲಂಚ ಪ್ರಕರಣ: ಲೋಕಾಯುಕ್ತ ವಿಚಾರಣೆ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಿಷ್ಟು

ಇನ್ನು ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರು ಗುರುವಾರ (ಮಾ. 09) ಸಂಜೆ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಸುದೀರ್ಘ ವಿಚಾರಣೆ ಎದುರಿಸಿದ್ದರು. ವಕೀಲರು, ಪೊಲೀಸರೊಂದಿಗೆ ಕಚೇರಿಗೆ ಹಾಜರಾದ ಮಾಡಾಳ್ ಅವರನ್ನು ಲೋಕಾಯುಕ್ತ ತನಿಖಾಧಿಕಾರಿ ಆಂಥೋನಿ ಜಾನ್​ ಲೋಕಾಯುಕ್ತ ಕಚೇರಿಯ 3ನೇ ಮಹಡಿಯಲ್ಲಿ ವಿಚಾರಣೆಗೆ ಒಳಪಡಿಸಿದರು. ರಾತ್ರಿ 9.30ರ ಸುಮಾರಿಗೆ ವಿಚಾರಣೆ ಮುಕ್ತಾಯಗೊಂಡಿದ್ದು, ಲೋಕಾಯುಕ್ತ ಕಚೇರಿಯಿಂದ ಮಾಡಾಳ್ ನಿರ್ಗಮಿಸಿದ್ದರು.

ನನ್ನನ್ನು ಸಿಲುಕಿಸಲಾಗಿದೆ: ಮಾಡಾಳ್

ಭ್ರಷ್ಟಾಚಾರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ್ದ ಮಾಡಾಳ್, ಉದ್ದೇಶಪೂರ್ವಕವಾಗಿ ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ. ಟೆಂಡರ್ ಪ್ರಕ್ರಿಯೆ ಪರಾದರ್ಶಕವಾಗಿದೆ ನಡೆದಿದೆ. ಯಾವ ಸಿಬ್ಬಂದಿಗೂ ಹಣಕ್ಕೆ ಬೇಡಿಕೆ ಇಟ್ಟಿಲ್ಲ. ಲೋಕಾಯುಕ್ತ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ತನಿಖಾ ಹಂತದಲ್ಲಿ ಯಾವುದನ್ನು ಪ್ರಸ್ತಾಪಿಸಲ್ಲ. ಸದ್ಯ ಲೋಕಾಯುಕ್ತ ಪೊಲೀಸರು ಮತ್ತೆ ಬರಲು ಹೇಳಿಲ್ಲ. ಮತ್ತೆ ಕರೆದಾಗ ವಿಚಾರಣೆ ಹಾಜರಾಗುತ್ತೇನೆ. ಮಾಧ್ಯಮಗಳು ಪ್ರಶ್ನಿಸಿದ್ದರಿಂದ ಒತ್ತಡದಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Madal Virupakshappa: ಪಕ್ಷದಿಂದ ಉಚ್ಚಾಟಿಸುವುದಾಗಿ ಸಿಎಂ ಹೇಳಿದ್ದರು; ಮಾಡಾಳ್ ವಿರೂಪಾಕ್ಷಪ್ಪ

ಸತತ 2 ಗಂಟೆಗಳು ಶಾಸಕ ಮಾಡಾಳು ವಿರುಪಾಕ್ಷಪ್ಪ ವಿಚಾರಣೆ ಮಾಡಿರುವ ತನಿಖಾಧಿಕಾರಿ ಆಂಥೋಣಿ ಜಾನ್​ ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದಾರೆ. ಭ್ರಷ್ಟಾಚಾರ ಆರೋಪದ ಕುರಿತ ಪ್ರಶ್ನೆಗಳಿಗೆ ಮಾಡಳು ವಿರೂಪಾಕ್ಷಪ್ಪ ಉತ್ತರಿಸಿದ್ದಾರೆ ಎನ್ನಲಾಗಿದೆ. ಯಾವ ಕೆಮಿಕಲ್ ಕಂಪೆನಿ ಸಿಬ್ಬಂದಿಗೂ ಹಣಕ್ಕೆ ಡಿಮ್ಯಾಂಡ್ ಮಾಡಿಲ್ಲ ಮಾಡಳ್ ವಿರೂಪಾಕ್ಷಪ್ಪ ಹೇಳಿದ್ದಾರೆನ್ನಲಾಗಿದೆ.

ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ 

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ ಜನತಾ ನ್ಯಾಯಾಲಯದಲ್ಲಿ ಶಾಸಕ ವಿರೂಪಾಕ್ಷಪ್ಪಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದರು. ಭ್ರಷ್ಟ ಮಾಡಾಳ್ ವಿರೂಪಾಕ್ಷಪ್ಪರನ್ನು ಚುನಾವಣೆಯಲ್ಲಿ ಸೋಲಿಸಬೇಕು. ಬಿಜೆಪಿ, ಆರ್​ಎಸ್​ಎಸ್​ ನಾಯಕರು ಬರೀ ಸುಳ್ಳು ಹೇಳುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

ಭಾರೀ ಅವ್ಯವಹಾರ

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಕಳೆದ ವಾರ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿದ್ದು, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:46 pm, Fri, 10 March 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್