ಕೆಎಸ್​​ಡಿಎಲ್​ ಟೆಂಡರ್​​ಗಾಗಿ ಲಂಚ ಸ್ವೀಕಾರ ಆರೋಪ: ಮಾಡಾಳ್ ಪ್ರಶಾಂತ್​ಗೆ ಜಾಮೀನು

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್​ಗಾಗಿ ಲಂಚ ಪಡೆದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಇತ್ತೀಚೆಗಷ್ಟೇ ಜಾಮೀನು ಮಂಜೂರಾಗಿತ್ತು. ಇದೀಗ ಅವರ ಪುತ್ರ ಪ್ರಶಾಂತ್​ಗೂ ಜಾಮೀನು ಮಂಜೂರಾಗಿದೆ.

ಕೆಎಸ್​​ಡಿಎಲ್​ ಟೆಂಡರ್​​ಗಾಗಿ ಲಂಚ ಸ್ವೀಕಾರ ಆರೋಪ: ಮಾಡಾಳ್ ಪ್ರಶಾಂತ್​ಗೆ ಜಾಮೀನು
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್Image Credit source: Oneindia.Com
Follow us
Rakesh Nayak Manchi
|

Updated on:Apr 21, 2023 | 3:31 PM

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಸಂಬಂಧ ಇತ್ತೀಚೆಗಷ್ಟೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಇವರ ಬೆನ್ನಲ್ಲೇ ಪುತ್ರ ಮಾಡಾಳ್ ಪ್ರಶಾಂತ್​ಗೂ (Madal Prashanth) ಕರ್ನಾಟಕ ಹೈಕೋರ್ಟ್ (Karnataka High Court), ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಮಾರ್ಚ್ 2 ರಂದು ನಡೆದ ಟ್ರ್ಯಾಪ್ ಕಾರ್ಯಚರಣೆ ವೇಳೆ 2 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಪೈಕಿ ಶ್ರೇಯಸ್ ಕಶ್ಯಪ್ ಕಂಪೆನಿಯಿಂದ 40 ಲಕ್ಷ ರೂ. ಲಂಚ ಪಡೆಯುವಾಗ ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದರು.

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿವೆ. ಈ ಸಂಬಂಧ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು. ನಂತರ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಿದ್ದರು.

ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನ 6 ವರ್ಷಗಳ ಅವಧಿಗೆ ಬಿಜೆಪಿಯಿಂದ ಉಚ್ಛಾಟನೆ

ಪ್ರಶಾಂತ್​​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ವಿರುದ್ಧ ಮತ್ತೆರಡಲು ಎಫ್​ಐಆರ್ ದಾಖಲಾಗಿದ್ದವು. ಪಿಸಿ ಆ್ಯಕ್ಟ್ ಅಡಿ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದರು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿತ್ತು. ಈ ವೇಳೆ, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು.

ಇದೇ ಪ್ರಕರಣದಲ್ಲಿ ಸಿಲುಕಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈಗಾಗಲೇ ಜಾಮೀನು ಮಂಜೂರು ಮಾಡಿದೆ. 5 ಲಕ್ಷ ರೂ. ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಸೂಚನೆ ನೀಡಲಾಗಿದೆ. ಜತೆಗೆ, 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Fri, 21 April 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್