ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ

ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ ವ್ಯಂಗ್ಯವಾಡಿದ್ದಾರೆ.

ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ; ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ: ಬಿ ಎಸ್ ಯಡಿಯೂರಪ್ಪ ವ್ಯಂಗ್ಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 20, 2022 | 5:29 PM

ಬೆಂಗಳೂರು: ಪ್ರತ್ಯೇಕ ಲಿಂಗಾಯತ (Lingayat) ಧರ್ಮದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಯೂ ಟರ್ನ್ ಹೊಡೆದ ವಿಚಾರವಾಗಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ (BS Yadiyurappa) ಮಾತನಾಡಿ ನಾನ್ಯಾಕೆ ಅವರ ಬಗ್ಗೆ ಟೀಕೆ ಮಾಡಿ ಹಗುರ ಆಗಬೇಕು? ಎಂದು ಬೆಂಗಳೂರಿನಲ್ಲಿ (Bengaluru) ವ್ಯಂಗ್ಯವಾಡಿದ್ದಾರೆ. ಬಿ.ಎಸ್​ ಯಡಿಯೂರಪ್ಪ ಇಂದು ಬೆಂಗಳೂರಿನಲ್ಲಿರುವ ಆದಿಚುಂಚನಗಿರಿ (Adichunchanagiri) ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದರು.

ನಿನ್ನೆ (ಆಗಸ್ಟ್​ 19) ಬಾಳೆಹೊನ್ನೂರಿನ ರಂಭಾಪುರಿ ಮಠಕ್ಕೆ ಚೊಚ್ಚಲ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸ್ವಾಮಿಗಳ ಸಮ್ಮುಖದಲ್ಲಿ ಲಿಂಗಾಯತ – ವೀರಶೈವ ಧರ್ಮ ಒಡೆದ ಆರೋಪದ ಬಗ್ಗೆ ಮಾತನಾಡುತ್ತಾ ಪಶ್ಚಾತಾಪ, ವಿಶಾದ ವ್ಯಕ್ತಪಡಿಸಿದ್ದರು. ಆದರೆ ಮರುಗಳಿಗೆಯಲ್ಲೇ ಮಠದಿಂದ ಹೊರಬಂದು ಯೂ ಟರ್ನ್​ ಹೊಡೆದ ಸಿದ್ದರಾಮಯ್ಯ ನಾನು ಪಶ್ಚಾತಾಪ ವ್ಯಕ್ತಪಡಿಸಿಲ್ಲ, ಪ್ರಸ್ತಾಪ ಮಾಡಿದ್ದೆ ಅಷ್ಟೇ ಎಂದಿದ್ದರು.

ಈ ಸಂಬಂಧ ಬಿ.ಎಸ್​ ಯಡಿಯೂರಪ್ಪ ಮಾತನಾಡಿ ನಾನು ಸಿದ್ದರಾಮಯ್ಯ ಬಗ್ಗೆ ಮಾತಾಡಲ್ಲ. ಅವರ ಸ್ವಭಾವ ಏನು ಅಂತ ಎಲ್ಲರಿಗೂ ಗೊತ್ತಿದೆ. ನಾನು ಯಾಕೆ ಅವರ ಬಗ್ಗೆ ಟೀಕೆ ಮಾಡಲಿ? ಎಂದು ಹೇಳಿದರು. ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮೊಟ್ಟೆ ಎಸೆದವರು ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂದು ಹೇಳಿದರು.

ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಸುದೀರ್ಘವಾಗಿ ಶ್ರೀಗಳ ಜೊತೆ ಚರ್ಚೆ ನಡೆಸಿದ್ದೇನೆ. ನಾವು ಏನೇನು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ ಅಂತ ತಿಳಿಸಿದ್ದೇನೆ. ಶ್ರೀಗಳಿಂದ ಅನೇಕ ಸಲಹೆಗಳನ್ನು ಪಡೆದುಕೊಂಡಿದ್ದೇನೆ ಎಂದರು.

ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಮೊಟ್ಟೆ ಎಸೆದ ಬಗ್ಗೆ ಕಾಂಗ್ರೆಸ್​​ ಕಾರ್ಯಕರ್ತ ತಪ್ಪೊಪ್ಪಿಗೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಯಾರು ಏನೇ ಒಪ್ಪಿಕೊಂಡರೂ ಈ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾಳೆ ಮತ್ತೊಬ್ಬ ನಾನೇ ಮಾಡಿದ್ದು ಅಂತ ಬರುತ್ತಾನೆ. ಹೀಗಾಗಿ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತೆ. ಈ ಬಗ್ಗೆ ಎಸ್​ಪಿ ಜೊತೆ ಚರ್ಚಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

Published On - 3:48 pm, Sat, 20 August 22

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್