ಮುನಿಸು ಮರೆತು ಒಂದಾದ ಬಿ.ಎಸ್ ಯಡಿಯೂರಪ್ಪ, ವಿ.ಸೋಮಣ್ಣ

ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಎರಡೂ ಕ್ಷೇತ್ರಗಳಲ್ಲಿಯೂ ಸೋತಿದ್ದರು. ಈ ಸೋಲಿನ ಬಳಿಕ ಸ್ವಪಕ್ಷದವರ ವಿರುದ್ಧವೇ ಅಸಮಾಧಾನ ಹೊರಹಾಕಿದ್ದರು. ಆದರೀಗ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಎಸ್​ ಯಡಿಯೂರಪ್ಪ ಹಾಗೂ ವಿ ಸೋಮಣ್ಣ ವೈ ಮನಸ್ಸು ಮರೆತು ಮತ್ತೆ ಒಂದಾಗಿದ್ದಾರೆ.

ಮುನಿಸು ಮರೆತು ಒಂದಾದ ಬಿ.ಎಸ್ ಯಡಿಯೂರಪ್ಪ, ವಿ.ಸೋಮಣ್ಣ
​ಮುನಿಸು ಮರೆತು ಒಂದಾದ ಬಿ.ಎಸ್ ಯಡಿಯೂರಪ್ಪ, ವಿ.ಸೋಮಣ್ಣ
Follow us
Pramod Shastri G
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 02, 2024 | 7:21 PM

ಬೆಂಗಳೂರು, ಮಾ.02: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯನವರ ವಿರುದ್ದವೇ ಸ್ಪರ್ಧಿಸಿ ವಿ.ಸೋಮಣ್ಣ(V Somanna) ಅವರು ಸೋಲುಂಡಿದ್ದರು. ಇದಾದ ಬಳಿಕ ಬಿ.ಎಸ್​ ಯಡಿಯೂರಪ್ಪ (BS Yediyurappa) ಹಾಗೂ ವಿ ಸೋಮಣ್ಣ ನಡುವೆ ವೈಮನಸ್ಸು ಬೆಳೆದಿತ್ತು. ಆದರೀಗ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಇಂದು(ಮಾ.02) ಡಾಲರ್ಸ್ ಕಾಲನಿಯ ಬಿ.ಎಸ್ ಯಡಿಯೂರಪ್ಪನವರ ನಿವಾಸಕ್ಕೆ ವಿ ಸೋಮಣ್ಣ ಅವರು ಆಗಮಿಸಿದ್ದು, ಇಬ್ಬರು ಕೂಡ ಮುನಿಸು ಮರೆತು ಮತ್ತೆ ಒಂದಾಗಿದ್ದಾರೆ.

ಹೈಕಮಾಂಡ್​ ಮಟ್ಟದಲ್ಲೂ ಸೋಮಣ್ಣ, ಬಿಎಸ್​ವೈ ನಡುವೆ ಮಾತುಕತೆ

ಇನ್ನು ಇಬ್ಬರ ರಾಜಿ ಸಂಧಾನದಲ್ಲಿ ಎಂ.ಡಿ.ಲಕ್ಷ್ಮಿನಾರಾಯಣ್, ಶೆಟ್ಟರ್ ಯಶಸ್ವಿಯಾಗಿದ್ದಾರೆ. ಹೈಕಮಾಂಡ್​ ಮಟ್ಟದಲ್ಲಿ ಸೋಮಣ್ಣ, ಬಿಎಸ್​ವೈ ನಡುವೆ ಮಾತುಕತೆ ನಡೆದಿತ್ತು. ಅಷ್ಟೇ ಅಲ್ಲ, ಕೇಂದ್ರ ಬಿಜೆಪಿ ನಾಯಕರು ಸಹ ಇಬ್ಬರ ಜೊತೆ ಮಾತುಕತೆ ನಡೆಸಿದ್ದಾರೆ. ಜಗದೀಶ್​ ಶೆಟ್ಟರ್ ಮತ್ತು ತುಮಕೂರು ಸಂಸದ ಬಸವರಾಜ್ ಜೊತೆ ಸೋಮಣ್ಣ ಮಾತಾಡಿದ್ದರು. ಇದೀಗ ವಿಧಾನಸಭೆ ಟಿಕೆಟ್​ ಹಂಚಿಕೆ ವೇಳೆ ಶುರುವಾಗಿದ್ದ ಇಬ್ಬರ ನಡುವಿನ ವೈಮನಸ್ಸು ಇಂದು ಅಂತ್ಯವಾಗಿದೆ. ಅದು ಅಲ್ಲದೆ ಲೋಕಸಭೆ ಚುನಾವಣೆ ಸನಿಹದಲ್ಲೇ ಇಬ್ಬರು ಬಲಿಷ್ಠ ನಾಯಕರು ಮತ್ತೆ ಒಂದಾಗಿದ್ದಾರೆ.

ಇದನ್ನೂ ಓದಿ:ಅಧ್ಯಕ್ಷನಾಗಿ ಎರಡು ತಿಂಗಳಾದರೂ ವಿಜಯೇಂದ್ರಗೆ ಸೋಮಣ್ಣರೊಂದಿಗೆ ಮಾತಾಡಲಾಗಿಲ್ಲ!

ಯಡಿಯೂರಪ್ಪ ಮೇಲಿನ ಮುನಿಸು ಎಲ್ಲವೂ ಮುಗಿಸಿದೆ-ವಿ ಸೋಮಣ್ಣ

ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ವಿ ಸೋಮಣ್ಣ, ‘ನಾವು ಟಿಕೆಟ್ ಬಗ್ಗೆ ಚರ್ಚೆ ಮಾಡಿಲ್ಲ, ಸೌಹಾರ್ದ ಯುತವಾಗಿ ಮಾತಾಡಿದ್ದೇವೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು. ಈ ಹಿನ್ನಲೆ ಕರ್ನಾಟಕದಲ್ಲಿ 28 ಸ್ಥಾನಗಳನ್ನು ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ. ಕೆಲವು ವಿಚಾರಗಳನ್ನು ನಿಮ್ಮ ಮುಂದೆಯೇ ಮಾತಾಡಿದ್ದೇನೆ. ದೇಶಕ್ಕಿಂತ ನಾವ್ಯಾರೂ ದೊಡ್ಡವರಲ್ಲ ಎಂದರು.

ಇನ್ನು ಯಡಿಯೂರಪ್ಪ ಮೇಲಿನ ಮುನಿಸು ಎಲ್ಲವೂ ಮುಗಿಸಿದೆ. ಮೇಲಿನವರು ಏನು ತೀರ್ಮಾನ ಮಾಡುತ್ತಾರೆ ಅದರ ಪ್ರಕಾರ ಆಗುತ್ತದೆ. ನಾನು ಯಾವತ್ತಾದ್ರೂ ಬೇರೆ ಪಕ್ಷಕ್ಕೆ ಹೋಗುತ್ತೇನೆ ಎಂದು ಹೇಳಿದ್ದೀನಾ?, ನಿಮ್ಮಲ್ಲಿ ಜಗಳಗಳಿಲ್ಲವಾ, ಇವೆಲ್ಲ ಮನೆ ಜಗಳ. ಈಗ ಎಲ್ಲವೂ ಸರಿಹೋಗಿದೆ. ರಾಜಕೀಯದಲ್ಲಿ ನನಗೂ ಅನುಭವ ಇದೆ. ಜೆಡಿಎಸ್​ಗೆ ತುಮಕೂರು ಬಿಟ್ಟು ಕೊಡಬೇಕು ಎಂಬ ಚರ್ಚೆ ಇಲ್ಲ. ಅವೆಲ್ಲ ಊಹಾಪೋಹಗಳು, ದಳಕ್ಕೆ ಕೊಡಬೇಕಾ, ಬೇರೆಯವರಿಗೆ ಕೊಡಬೇಕಾ ಎಂಬುದನ್ನ ಮೇಲಿನವರು ತೀರ್ಮಾನ ಮಾಡ್ತಾರೆ ಎಂದು ಸ್ಪಷ್ಟಪಡಿಸಿದರು.

ಮುನಿಸಿಗೆ ಕಾರಣವಾಗಿತ್ತು ಸೀಟು ಹಂಚಿಕೆ

ಇನ್ನು ವಿಧಾನಸಭೆ ಚುನಾವಣೆ ವೇಳೆ ಮೊದಲು ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯಾಧ್ಯಕ್ಷ ಆಗಿರುವ ಬಿವೈ ವಿಜಯೇಂದ್ರ ಅವರನ್ನು ಕಣಕ್ಕಿಳಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ವಿಜಯೇಂದ್ರ ಅವರನ್ನು ತಮ್ಮ ಸ್ವಕ್ಷೇತ್ರ ಶಿಕಾರಿಪುರದಿಂದ ಕಣಕ್ಕಿಳಿಸಲು ಬಿಎಸ್‌ವೈ ಬಯಸಿದ್ದರು. ಈ ಕುರಿತು ಹೈಕಮಾಂಡ್‌ ಮನವೋಲಿಸುವಲ್ಲಿ ಸಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯ ಮತ್ತೋರ್ವ ಪ್ರಬಲ ನಾಯಕ ಆಗಿರುವ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಸಿದ್ದರಾಮಯ್ಯ ವಿರುದ್ದ ಕಣಕ್ಕಿಳಿಸಿತ್ತು. ಇದಾದ ಬಳಿಕ ಸೋಲುಂಡ ಸೋಮಣ್ಣನವರು ಸ್ವಪಕ್ಷದವರ ವಿರುದ್ದವೇ ಕಿಡಿಕಾರಿದ್ದರು. ಇದಕ್ಕೆಲ್ಲ ಇದೀಗ ಅಂತ್ಯ ಹಾಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:20 pm, Sat, 2 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ