AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್​ ಪ್ರಕರಣವನ್ನು ಸಿಬಿಐಗೆ ಕೊಟ್ಟಿದೇಕೆ; ಬಿಎಸ್​ ಯಡಿಯೂರಪ್ಪ ಸ್ಪಷ್ಟನೆ

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ (CBI) ಕೇಸ್ ವಾಪಸ್ ಪ್ರಸ್ತಾವನೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಎಂದಿದ್ದಾರೆ. ಇದು ವಾಸ್ತವಿಕ ಅಂಶ ಅಲ್ಲ, ಡಿ.ಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಹೇಳಿದರು.

ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್​ ಪ್ರಕರಣವನ್ನು ಸಿಬಿಐಗೆ ಕೊಟ್ಟಿದೇಕೆ; ಬಿಎಸ್​ ಯಡಿಯೂರಪ್ಪ ಸ್ಪಷ್ಟನೆ
ಬಿಎಸ್​ ಯಡಿಯೂರಪ್ಪ
ಕಿರಣ್​ ಹನಿಯಡ್ಕ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 24, 2023 | 5:25 PM

Share

ಬೆಂಗಳೂರು, ನ.24: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧದ ಸಿಬಿಐ (CBI) ಕೇಸ್ ವಾಪಸ್ ಪ್ರಸ್ತಾವನೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಎಜಿ ಒಪ್ಪಿಗೆ ಇಲ್ಲದೇ ಬಿಜೆಪಿ(BJP)ಯವರು ಕಾನೂನು ಬಾಹಿರವಾಗಿ ಅನುಮತಿ ಕೊಟ್ಟಿದ್ದರು ಎಂದು ಆರೋಪಿಸಿದ್ದಾರೆ. ಆದರೆ ವಾಸ್ತವ ಸ್ಥಿತಿಯಲ್ಲಿ ಇಡಿಯವರು ಸಿಬಿಐಗೆ ಕೇಸ್ ಕೊಡಿಯೆಂದು ಪತ್ರ ಬರೆದಿದ್ದರು. ಹಾಗಾಗಿ ನಾವು ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದೇವೆ ಎಂದು ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ(BS Yadiyurappa) ಅವರು  ಸ್ಪಷ್ಟನೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ

ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರದ ಕಾನೂನು ಬಾಹಿರ ಆದೇಶ ವಾಪಸ್ ಪಡೆದಿದ್ದೇವೆ ಎಂದಿದ್ದಾರೆ. ಇದು ವಾಸ್ತವಿಕ ಅಂಶ ಅಲ್ಲ, ಡಿ.ಕೆ ಶಿವಕುಮಾರ್ ಅವರನ್ನು ರಕ್ಷಣೆ ಮಾಡಲು ಸಿದ್ದರಾಮಯ್ಯ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ನಾವು ಎಜಿ ಅಭಿಪ್ರಾಯ ಪಡೆದೇ ಸಿಬಿಐಗೆ ಪ್ರಕರಣ ಕೊಟ್ಟಿದ್ದೆವು. ಅಧಿವೇಶನದಲ್ಲಿ ಇನ್ನಷ್ಟು ದಾಖಲೆಗಳನ್ನು ಇಟ್ಟು ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ

ಸಿದ್ದರಾಮಯ್ಯ ಮಾಡಿದ ಕೆಲಸ ಅಕ್ಷಮ್ಯ ಅಪರಾಧ

ಇನ್ನು ಡಿ.ಕೆ ಶಿವಕುಮಾರ್ ಇದನ್ನು ಹೈಕೋರ್ಟ್​ನಲ್ಲಿ ಪ್ರಸ್ತಾಪಿಸಿದ್ದಾಗ ಹೈಕೋರ್ಟ್ ಕೂಡ ತಳ್ಳಿ ಹಾಕಿತ್ತು. ಡಿಕೆಶಿ ಅವರನ್ನು ಸಿಬಿಐ ಕೇಸ್​ನಿಂದ ರಕ್ಷಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಮಾಡಿದ ಕೆಲಸ ಅಕ್ಷಮ್ಯ ಅಪರಾಧ. ಕಾನೂನು ಬಾಹಿರವಾಗಿ ಡಿಕೆ ಶಿವಕುಮಾರ್​ ಅವರನ್ನು ಉಳಿಸಲು ಈ ಕೆಲಸವನ್ನು ಸಿಎಂ ಮಾಡಬಾರದಾಗಿತ್ತು. ಈಗಲಾದರೂ ಸರ್ಕಾರ ತನ್ನ ನಿರ್ಣಯ ವಾಪಸ್ ಪಡೆಯಲಿ, ರಾಜ್ಯದ ಜನ ಇದನ್ನು ಕ್ಷಮಿಸಲ್ಲ. ಸಿದ್ದರಾಮಯ್ಯ ರಾಜ್ಯದ ಜನರ ಬಳಿ ಕ್ಷಮೆ ಕೇಳಿ ನಿರ್ಣಯ ವಾಪಸ್ ಪಡೆಯಲಿ. ನಾವು ಎಜಿ ಅಭಿಪ್ರಾಯ ಪಡೆದು, ಕಾನೂನು ಚೌಕಟ್ಟಿನಲ್ಲೇ ಪ್ರಕರಣ ಸಿಬಿಐಗೆ ಕೊಟ್ಟಿದ್ದೇವು. ಈಗ ಹಿಂಬಾಗಿಲ ಮೂಲಕ ಪ್ರಕರಣದ ಅನುಮತಿ ವಾಪಸ್ ಪಡೆದಿದ್ದು ಅಕ್ಷಮ್ಯ ಅಪರಾಧ, ಅವರ ಅಪರಾಧದಲ್ಲಿ ಸಿದ್ದರಾಮಯ್ಯ ಕೂಡ ಶಾಮೀಲಾಗಲು ಹೊರಟಿದ್ದಾರೆ ಎಂದರು.

ಘಟನೆ ವಿವರ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ವಾಪಸ್ ಪಡೆಯುವ​ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಗುರುವಾರ(ನ.23) ಅನುಮೋದನೆ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಈ ವಿಚಾರವಾಗಿ ಇದೀಗ ಪರ ವಿರೋಧ ಚರ್ಚೆಗಳು ಶುರುವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!