ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ

Karnataka CM BS Yediyurappa Resign: ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ: ಬಿಎಸ್ ಯಡಿಯೂರಪ್ಪ ಪುತ್ರಿ ಅರುಣಾದೇವಿ ಪ್ರತಿಕ್ರಿಯೆ
ಬಿ.ಎಸ್,ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
| Updated By: ganapathi bhat

Updated on:Jul 26, 2021 | 2:48 PM

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ರಾಜೀನಾಮೆಯಿಂದ ನಮಗೆ ಬೇಸರವಾಗಿಲ್ಲ. ನಮ್ಮ ಕುಟುಂಬದ ಯಾರಿಗೂ ಬೇಸರವಾಗಿಲ್ಲ ಎಂದು ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರಿ ಅರುಣಾದೇವಿ ಟಿವಿ9ಗೆ ಹೇಳಿಕೆ ನೀಡಿದ್ದಾರೆ. ರಾಜೀನಾಮೆ ನಿರ್ಧಾರವನ್ನು ಕುಟುಂಬಕ್ಕೂ ಹೇಳಿರಲಿಲ್ಲ. ರಾಜಕೀಯ ನಿರ್ಧಾರಗಳ ಬಗ್ಗೆ ಅವರು ಕುಟುಂಬಕ್ಕೆ ಮಾಹಿತಿ ಹೇಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್ ಸಂಕಷ್ಟದಲ್ಲಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ. ನಗುಮುಖದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿ ತುಂಬಾ ಆಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ. ಯಾವುದು ಸರಿ ಅನಿಸುತ್ತೆ ಅದನ್ನು ಅವರೇ ನಿರ್ಧರಿಸುತ್ತಾರೆ. ರಾಜೀನಾಮೆ ನೀಡಿದ ಬಗ್ಗೆಯೇ ಬಿಎಸ್‌ವೈ ಚಿಂತಿಸುತ್ತಿಲ್ಲ ಎಂದು ಅರುಣಾದೇವಿ ಹೇಳಿದ್ದಾರೆ.

ನಾಳೆಯಿಂದ ಏನು ಮಾಡಬಹುದು ಎಂದು ಅವರು ಚಿಂತಿಸುತ್ತಿದ್ದಾರೆ. ಅಧಿಕಾರ ಇರಲಿ, ಇಲ್ಲದಿರಲಿ ಹೋರಾಟ ಮಾಡಿದ್ದಾರೆ. ರೈತರು, ಬಡವರ ಪರ ನಿರಂತರ ಹೋರಾಟ ಮಾಡ್ತಿದ್ದಾರೆ. ಮುಂದೆ ಮುಖ್ಯಮಂತ್ರಿ ಆಗುವವರಿಗೆ ಯಡಿಯೂರಪ್ಪ ಸ್ಫೂರ್ತಿ ಎಂದು ಟಿವಿ9ಗೆ ಬಿಎಸ್‌ವೈ ಪುತ್ರಿ ಅರುಣಾದೇವಿ ಹೇಳಿಕೆ ನೀಡಿದ್ದಾರೆ.

ಮುಂದಿನ ಸಿಎಂ ಹೆಸರನ್ನು ನಾನು ಸೂಚಿಸಲು ಹೋಗಲ್ಲ ನನ್ನ ಪರವಾಗಿ ಕೆಲಸ ಮಾಡಿದ ಎಲ್ಲರಿಗೂ ಅಭಿನಂದನೆ. ದೆಹಲಿಯಿಂದ ನನಗೆ ಯಾವುದೇ ಒತ್ತಡ ಇರಲಿಲ್ಲ. ನಾನೇ ನಿರ್ಧಾರ ಮಾಡಿ ರಾಜೀನಾಮೆಯನ್ನ ಸಲ್ಲಿಸಿದ್ದೇನೆ. ಸ್ವಯಂಪ್ರೇರಿತನಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ಸಿಎಂ ಹೆಸರನ್ನು ನಾನು ಸೂಚಿಸಲು ಹೋಗಲ್ಲ. ಯಾವುದೇ ಹೆಸರು ಹೇಳುವುದಕ್ಕೆ ನಾನು ಇಷ್ಟಪಡುವುದಿಲ್ಲ. ಹೈಕಮಾಂಡ್ ಮುಂದಿನ ಸಿಎಂ ಯಾರೆಂದು ತೀರ್ಮಾನಿಸುತ್ತೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಸಂಕಲ್ಪ ಮಾಡಿದ್ದೇವೆ ಎಂದು ಯಡಿಯೂರಪ್ಪ ರಾಜೀನಾಮೆ ಬಳಿಕ ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಇಲ್ಲ. ನಾಳೆಯಿಂದಲೇ ಒಟ್ಟಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ. ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ನಾನು ರಾಜ್ಯ ರಾಜಕೀಯದಲ್ಲೇ ಇರುತ್ತೇನೆ. ಯಾವುದೇ ರಾಜ್ಯಪಾಲ ಹುದ್ದೆಯನ್ನು ಅಲಂಕರಿಸುವುದಿಲ್ಲ. ಮುಂದಿನ ಸಿಎಂಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: BS Yediyurappa Profile: ಗುಮಾಸ್ತನಿಂದ ಮುಖ್ಯಮಂತ್ರಿ ಗಾದಿಯುವರೆಗೂ ಬಿಎಸ್ ಯಡಿಯೂರಪ್ಪ ನಡೆದುಬಂದ ಹಾದಿ ಸುಲಭದ್ದೇನಲ್ಲ…

2 ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ; ರಾಜ್ಯಪಾಲ ಹುದ್ದೆ ಅಲಂಕರಿಸುವುದಿಲ್ಲ –ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ

(BS Yediyurappa daughter Aruna Devi on Karnataka CM BS Yediyurappa Resign)

Published On - 2:30 pm, Mon, 26 July 21

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ