ಆಪರೇಷನ್ ಹಸ್ತ; ಎಸ್‌ಟಿ ಸೋಮಶೇಖರ್, ಹೆಬ್ಬಾರ್ ಸಮಸ್ಯೆ ಬಗೆಹರಿಸುವ ಹೊಣೆ ಬೊಮ್ಮಾಯಿಗೆ ವಹಿಸಿದ ಯಡಿಯೂರಪ್ಪ

BS Yediyurappa meeting with BJP Leaders; ಸೋಮಶೇಖರ್ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಬೇಕು. ಶಾಸಕ ಶಿವರಾಮ್ ಹೆಬ್ಬಾರ್ ಜೊತೆಯೂ ಮಾತನಾಡಬೇಕು. ಬೆಂಗಳೂರಿನ ಉಳಿದ ನಾಯಕರೂ ಸೋಮಶೇಖರ್ ಜತೆ ಮಾತನಾಡಬೇಕು. ನಾನೂ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ಚರ್ಚಿಸುವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಆಪರೇಷನ್ ಹಸ್ತ; ಎಸ್‌ಟಿ ಸೋಮಶೇಖರ್, ಹೆಬ್ಬಾರ್ ಸಮಸ್ಯೆ ಬಗೆಹರಿಸುವ ಹೊಣೆ ಬೊಮ್ಮಾಯಿಗೆ ವಹಿಸಿದ ಯಡಿಯೂರಪ್ಪ
ಬಸವರಾಜ ಬೊಮ್ಮಾಯಿ ಹಾಗೂ ಬಿಎಸ್ ಯಡಿಯೂರಪ್ಪ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on:Aug 18, 2023 | 11:07 PM

ಬೆಂಗಳೂರು, ಆಗಸ್ಟ್ 18: ಬಿಬಿಎಂಪಿ ಹಾಗೂ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ (Karnataka Politics) ಚಟುವಟಿಕೆ ಬಿರುಸುಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ತಂತ್ರ ಹಾಗೂ ಪ್ರತಿ ತಂತ್ರ ಹೂಡುತ್ತಿವೆ. ಪ್ರತಿಪಕ್ಷಗಳು ಭ್ರಷ್ಟಾಚಾರ, ಕಾವೇರಿ ನೀರು ಹಂಚಿಕೆ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ, ಅತ್ತ ಕಾಂಗ್ರೆಸ್ ಈ ಹಿಂದೆ ಬಿಜೆಪಿ ಸೇರಿರುವ ನಾಯಕರಿಗೆ ಗಾಳ ಹಾಕುವ ವಿಷಯವನ್ನು ಮುನ್ನೆಲೆಗೆ ತೇಲಿಬಿಟ್ಟಿದೆ. ಈ ಹಿಂದೆ ಕಾಂಗ್ರೆಸ್​​ನಲ್ಲಿದ್ದು ಬಿಜೆಪಿ ಸೇರಿರುವ ನಾಯಕರು ಘರ್​ ವಾಪ್ಸಿ ಮಾಡುತ್ತಿದ್ದಾರೆ ಎಂಬ ವದಂತಿ ರಾಜ್ಯ ರಾಜಕೀಯದಲ್ಲಿ ಬಿರುಸುಗೊಂಡಿದೆ. ಈ ಮಧ್ಯೆ, ಎಸ್‌ಟಿ ಸೋಮಶೇಖರ್ ಹಾಗೂ ಶಿವರಾಮ ಹೆಬ್ಬಾರ್ ಅವರ ಸಮಸ್ಯೆ ಬಗೆಹರಿಸುವ ಹೊಣೆಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಬಿಜೆಪಿ ವಹಿಸಿದೆ.

ಬಿಬಿಎಂಪಿ, ಲೋಕಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಬೆಂಗಳೂರಿನ ಡಾಲರ್ಸ್ ಕಾಲೋನಿಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಇದೇ ವೇಳೆ, ಅತೃತಪ್ತ ನಾಯಕರ ಮುನಿಸು ಶಮನ ಮಾಡುವ ಹೊಣೆಯನ್ನು ಬಸವರಾಜ ಬೊಮ್ಮಾಯಿ‌ಗೆ ಅವರಿಗೆ ಯಡಿಯೂರಪ್ಪ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸೋಮಶೇಖರ್ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಬೇಕು. ಶಾಸಕ ಶಿವರಾಮ್ ಹೆಬ್ಬಾರ್ ಜೊತೆಯೂ ಮಾತನಾಡಬೇಕು. ಬೆಂಗಳೂರಿನ ಉಳಿದ ನಾಯಕರೂ ಸೋಮಶೇಖರ್ ಜತೆ ಮಾತನಾಡಬೇಕು. ನಾನೂ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಜೊತೆ ಚರ್ಚಿಸುವೆ. ಸ್ಥಳೀಯ ಮುಖಂಡರ ಜೊತೆ ಮಾತುಕತೆ ಮಾಡಿ ಸಮನ್ವಯ ಸಾಧಿಸಿ. ಎಲ್ಲರೂ ಒಟ್ಟಾಗಿ ಹೋಗುವಂತೆ ನೋಡಿಕೊಳ್ಳಿ ಎಂದು ಸಭೆಯಲ್ಲಿ ಬೊಮ್ಮಾಯಿ ಸೇರಿದಂತೆ ಪಕ್ಷದ ನಾಯಕರಿಗೆ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಯಾವ ನಾಯಕರೂ ಪಕ್ಷ ಬಿಡದಂತೆ ನೋಡಿಕೊಳ್ಳಿ. ವಲಸಿಗರು ಪಕ್ಷ ಬಿಡುವ ಬಗ್ಗೆ ಚರ್ಚೆಯಾದರೆ ಸ್ಪಷ್ಟೀಕರಣ ಕೊಡಿಸಿ. ಯಾರೂ ಪಕ್ಷ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆ ಆಗಬೇಕು. ಪ್ರತಿಯೊಬ್ಬ ನಾಯಕರೂ ಸಕ್ರಿಯರಾಗಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬೃಹತ್ ಪ್ರತಿಭಟನೆ: ಬಿ.ಎಸ್. ಯಡಿಯೂರಪ್ಪ

ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ಸದ್ಯದಲ್ಲೇ ಆಗಲಿದೆ. ಯಾರೇ ಆಯ್ಕೆ ಆದರೂ ಜೊತೆಯಾಗಿ ನಿಲ್ಲಬೇಕು. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕು. ಮುಂಬರುವ ಲೋಕಸಭೆ ಚುನಾವಣೆಯೇ ನಮ್ಮ ಗುರಿ. ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟಕ್ಕೆ ಹೆಚ್ಚು ಜನ ಬರಬೇಕು. ಇದರ ಜವಾಬ್ದಾರಿ ಎಲ್ಲರೂ ತೆಗೆದುಕೊಳ್ಳಬೇಕು ಎಂದು ಯಡಿಯೂರಪ್ಪ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 pm, Fri, 18 August 23

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ