ರಾಜಕೀಯ ಬೆಳವಣಿಗೆ ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗೆ ಯಾರೂ ಮುಂದಾಗಬಾರದು: ಬಿಎಸ್ ಯಡಿಯೂರಪ್ಪ ಮನವಿ

ರಾಜ್ಯದ ಬಿಜೆಪಿ ನಾಯಕರ ದೆಹಲಿ ಭೇಟಿ, ನಳಿನ್ ಕುಮಾರ್ ಕಟೀಲ್ ಮತ್ತಿರ ಪ್ರಕರಣಗಳು ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ವಿಚಾರದ ಬೆಂಕಿಗೆ ತುಪ್ಪ ಸುರಿದಂತಿತ್ತು. ಇದೀಗ ಈ ಎಲ್ಲಾ ಘಟನೆಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ಬೆಳವಣಿಗೆ ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗೆ ಯಾರೂ ಮುಂದಾಗಬಾರದು: ಬಿಎಸ್ ಯಡಿಯೂರಪ್ಪ ಮನವಿ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
Edited By:

Updated on: Jul 21, 2021 | 8:50 PM

ಬೆಂಗಳೂರು: ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು ಎಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಅವರು ಬರೆದುಕೊಂಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಇಂದು (ಜುಲೈ 21) ಬಹಳಷ್ಟು ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ನಡೆದಿದ್ದವು. ವಿವಿಧ ಪಕ್ಷಗಳ ರಾಜಕೀಯ ನಾಯಕರು, ವೀರಶೈವ ಲಿಂಗಾಯತ ಸಹಿತ ವಿವಿಧ ಸಮುದಾಯದ ಸ್ವಾಮೀಜಿಗಳು, ಮಠಾಧೀಶರು ಯಡಿಯೂರಪ್ಪ ಪರ- ವಿರೋಧ ಹೇಳಿಕೆ ನೀಡಿದ್ದರು. ಪಕ್ಷದ ವಿರುದ್ಧ, ಬಿಜೆಪಿ ವರಿಷ್ಠರ ನಡವಳಿಕೆಯ ವಿರುದ್ಧ ಅಸಮಾಧಾನ ತೋರ್ಪಡಿಸುವ ಹೇಳಿಕೆಗಳು ಕೂಡ ಈ ವೇಳೆ ಕೇಳಿಬಂದಿತ್ತು. ಹಲವರು ಯಡಿಯೂರಪ್ಪರನ್ನು ಭೇಟಿಯಾಗಿ ನೇರ ಬೆಂಬಲ ಸೂಚಿಸಿದ್ದರು. ರಾಜ್ಯದ ಬಿಜೆಪಿ ನಾಯಕರ ದೆಹಲಿ ಭೇಟಿ, ನಳಿನ್ ಕುಮಾರ್ ಕಟೀಲ್ ಮತ್ತಿರ ಪ್ರಕರಣಗಳು ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ವಿಚಾರದ ಬೆಂಕಿಗೆ ತುಪ್ಪ ಸುರಿದಂತಿತ್ತು. ಇದೀಗ ಈ ಎಲ್ಲಾ ಘಟನೆಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ
ಬೆಂಗಳೂರಿನಲ್ಲಿ ಇಂದು (ಜುಲೈ 21) ನಡೆದ ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ ಎಂದು ಹೇಳಿರುವುದು ತಿಳಿದುಬಂದಿದೆ. ನಿಮ್ಮೆಲ್ಲರ ಆಶೀರ್ವಾದ ಇರುವುದರಿಂದ ನಾನು ಪುಣ್ಯಶಾಲಿ. ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ. ಯಾವ ಕಾರಣವನ್ನೂ ಕೊಟ್ಟಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದರೂ ಈ ರೀತಿ ಎಲ್ಲಾ ನಡೆಯುತ್ತಿದೆ. 2 ಬಾರಿ ರಾಜ್ಯದಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತಂದಿದ್ದೇನೆ. ಆದರೆ, ವರಿಷ್ಠರು ಸೂಚಿಸಿದಂತೆ ನಾನು ನಡೆದುಕೊಳ್ಳಬೇಕಾಗುತ್ತದೆ. ಪಕ್ಷದ ಆದೇಶದ ವಿರುದ್ಧ ನಡೆದ್ರೆ ದ್ರೋಹ ಬಗೆದಂತಾಗುತ್ತೆ ಎಂದು ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ.

ಇದನ್ನೂ ಓದಿ: BS Yediyurappa: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಮುಂದುವರಿಕೆ; ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ

(BS Yediyurappa Karnataka CM Tweet appeals his fans to be disciplined and not to talk against BJP Party)

Published On - 8:41 pm, Wed, 21 July 21