ಹಾನಗಲ್ ಉಪಚುನಾವಣೆ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ: ಬಿಎಸ್ ಯಡಿಯೂರಪ್ಪ

Karnataka Byelections: ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಈ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ. ಎಲ್ಲರೂ ಕುಳಿತು ಸೋಲಿನ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಹಾನಗಲ್ ಉಪಚುನಾವಣೆ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ: ಬಿಎಸ್ ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ
Follow us
TV9 Web
| Updated By: ganapathi bhat

Updated on: Nov 02, 2021 | 3:54 PM

ಬೆಂಗಳೂರು: ಸಿಂದಗಿ ಕ್ಷೇತ್ರದಲ್ಲಿ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದೇವೆ. 30 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಿಂದಗಿ ಕ್ಷೇತ್ರದ ಜನರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಹಾನಗಲ್​ ಕ್ಷೇತ್ರದಲ್ಲಿ ಕೂಡ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಹಿನ್ನಡೆ ಆಗಿದೆ. ಅದಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೀಗುವ ಅವಶ್ಯಕತೆ ಇಲ್ಲ. ಈ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಇಲ್ಲಿ ಬೊಮ್ಮಾಯಿ ನಾಯಕತ್ವದ ಪ್ರಶ್ನೆ ಉದ್ಭವಿಸಲ್ಲ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದೇವೆ. ಸೋಲು, ಗೆಲುವನ್ನು ಸಮಾನವಾಗಿ ಹಂಚಿಕೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಒಟ್ಟಾಗಿ ಪಕ್ಷ ಬಲಪಡಿಸುತ್ತೇವೆ. ಎಲ್ಲಿ ಎಡವಿದ್ದೇವೆ ಎಂದು ನಾವು ಚರ್ಚೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಈ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ. ಎಲ್ಲರೂ ಕುಳಿತು ಸೋಲಿನ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಹಾನಗಲ್ ಕ್ಷೇತ್ರದಲ್ಲಿ ನಮಗೆ ಸಣ್ಣಮಟ್ಟದ ಸೋಲಾಗಿದೆ. ಈ ಸೋಲನ್ನು ನಾವು ಸವಾಲಾಗಿ ಸ್ವೀಕಾರ ಮಾಡುತ್ತೇವೆ. ಮುಂದಿನ ಚುನಾವಣೆಗೆ ಇನ್ನಷ್ಟು ಹೋರಾಟ ಮಾಡ್ತೇವೆ. ಮತದಾರರು ಕೊಟ್ಟಿರುವ ತೀರ್ಪಿಗೆ ನಾವು ತಲೆಬಾಗ್ತೇವೆ. ಹಾನಗಲ್​ನಲ್ಲಿನ ಸೋಲು ಮುಖ್ಯಮಂತ್ರಿಗೆ ಹಿನ್ನಡೆ ಅಲ್ಲ. ಹಾನಗಲ್​ನಲ್ಲಿನ ಮತದಾರರು ಆಮಿಷಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾನಗಲ್​ನಲ್ಲಿ ನಮಗೆ ಹಿನ್ನಡೆ ಆಗಿದೆ. ಈ ಸೋಲಿನ ಬಗ್ಗೆ ನಾವು ಕುಳಿತು ಚರ್ಚೆ ಮಾಡುತ್ತೇವೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ.

ಉಪಚುನಾವಣೆ ಫಲಿತಾಂಶದ ಬಗ್ಗೆ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಗೆ ಮಿಶ್ರ ಫಲಿತಾಂಶ ಸಿಕ್ಕಿದೆ. ನಾವು ಇವಿಎಮ್ ದೂರಲ್ಲ. ಜನರ ತೀರ್ಪು ಸ್ವಾಗತಿಸುತ್ತೇವೆ. ಬಿಜೆಪಿ 2 ಕ್ಷೇತ್ರ ಗೆದ್ದಿದ್ರೆ ವಿಪಕ್ಷಗಳು ಇವಿಎಮ್ ದೂರುತ್ತಿದ್ದವು. ನಾವು ಗೆದ್ದ ಇಬ್ಬರೂ ಅಭ್ಯರ್ಥಿಗಳನ್ನ ಅಭಿನಂದಿಸುತ್ತೇವೆ ಎಂದು ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ ಹೇಳಿದ್ದಾರೆ.

ಹಾನಗಲ್ ಕ್ಷೇತ್ರದಲ್ಲಿ ನಮಗೆ ಸಣ್ಣ ಪ್ರಮಾಣದಲ್ಲಿ ಸೋಲು ಉಂಟಾಗಿದೆ ಎಂದು ಬೆಂಗಳೂರಿನಲ್ಲಿ ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ನೀಡಿದ್ದಾರೆ. ಹಾನಗಲ್​ನಲ್ಲಿ ದಿ.ಸಿ.ಎಂ. ಉದಾಸಿ ಓಡಾಟ ಮಾಡಿರಲಿಲ್ಲ. ಶಾಸಕರಾದ ಬಳಿಕ ಅನಾರೋಗ್ಯ ಹಿನ್ನೆಲೆ ಓಡಾಡಿರಲಿಲ್ಲ. ಹೀಗಾಗಿ ಹಾನಗಲ್​​ನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಗೆದ್ದಿದ್ದಾರೆ. ಅದು ಮಾನೆ ವರ್ಚಸ್ಸಿನ ಗೆಲುವು, ಕಾಂಗ್ರೆಸ್​ ಗೆಲುವಲ್ಲ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ನಿರೀಕ್ಷೆ ಮೀರಿ‌ ಸಿಂದಗಿ ಜನ ನಮಗೆ ಜಯ ತಂದು ಕೊಟ್ಟಿದ್ದಾರೆ. ಹಾನಗಲ್ ನಲ್ಲಿ ಸಣ್ಣ ಪ್ರಮಾಣದ‌ ಸೋಲಾಗಿದೆ. ಸೋಲಿಗೆ ಕಾರಣ ಹುಡುಕಿ ಸರಿಪಡಿಸಿ ಮತ್ತೆ ಗೆಲ್ಲುತ್ತೇವೆ. ಜನಾದೇಶಕ್ಕೆ ತಲೆ ಬಾಗುತ್ತೇವೆ. ತಿದ್ದಿಕೊಳ್ಳಲು ಇದೊಂದು ಸಮಯ. ಹಾನಗಲ್ ನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುತ್ತೇವೆ. ಚುನಾವಣೆಯಲ್ಲಿ ಸೋಲು ಗೆಲುವು ಸ್ವಾಭಾವಿಕ. ಮತ್ತೆ ಹಾನಗಲ್ ಪಡೆಯುತ್ತೇವೆ. ಹಾನಗಲ್​ನಲ್ಲಿ ಪಂಚಮಸಾಲಿ‌ ಸಮುದಾಯದ ಮೀಸಲಾತಿ ವಿಚಾರ ಪ್ರಭಾವ ಬೀರಿಲ್ಲ. ಸಿಂದಗಿಯಲ್ಲೂ ಅಷ್ಟೇ ಪಂಚಮಸಾಲಿ ಮತದಾರರು ಇದಾರೆ. ಹಾಗಿದ್ರೆ ಸಿಂದಗಿ ಹೇಗೆ ನಮಗೆ ಗೆಲುವಾಯ್ತು? 7 ಸಾವಿರ ಮತದಿಂದ ಗೆದ್ದ ಸಿದ್ದರಾಮಯ್ಯ ಅಷ್ಟು ಜಂಭ ಪಡುವುದಾದರೆ 30 ಸಾವಿರ ಅಂತರದಿಂದ ಗೆದ್ದ ನಾವೆಷ್ಟು ಪಡಬೇಕು ಎಂದು ಬೆಂಗಳೂರಿನಲ್ಲಿ ಪಿಡಬ್ಲ್ಯುಡಿ ಸಚಿವ ಸಿ.ಸಿ.ಪಾಟೀಲ್​ ಹೇಳಿದ್ದಾರೆ.

ಇದನ್ನೂ ಓದಿ: Hangal Byelection 2021: ಹಾನಗಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಗೆ ಕಾರಣಗಳು ಏನೇನು?

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಯ ಕೆಲಸವೇ ಅವರನ್ನು ಕಾಪಾಡಿದೆ: ಹಾನಗಲ್ ಹಿನ್ನಡೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ