AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು

ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ನಿನ್ನೆ (ಸೆಪ್ಟೆಂಬರ್ 13) ನವದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇನ್ನು ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು ಎನ್ನುವ ಬಗ್ಗೆ ಬಿಎಸ್​ವೈ ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Sep 14, 2023 | 2:22 PM

Share

ಬೆಂಗಳೂರು, (ಸೆಪ್ಟೆಂಬರ್ 14): ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ನಿನ್ನೆ (ಸೆಪ್ಟೆಂಬರ್ 13) ನವದೆಹಲಿಗೆ ತೆರಳಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ(BS Yediyurappa )ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು(ಗುರುವಾರ) ಮಧ್ಯಾಹ್ನ 12.30ರ ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇನ್ನು ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ದೆಹಲಿ ಸಭೆಯಲ್ಲಿ ರಾಜ್ಯದ ಯಾವ ವಿಚಾರವೂ ಚರ್ಚೆಯಾಗಿಲ್ಲ. ಮೈತ್ರಿ ಬಗ್ಗೆಯೂ ಚರ್ಚೆ ಆಗಿಲ್ಲ. ಸಭೆಯಲ್ಲಿ ಕೇವಲ ಜಿ20 ಶೃಂಗಸಭೆ ಸಕ್ಸಸ್ ಬಗ್ಗೆ ಚರ್ಚೆ ಆಗಿದೆ ಎಂದು ಸ್ಪಷ್ಟಪಡಿಸಿದರು.

ದೆಹಲಿ ವರಿಷ್ಠರ ಜತೆ ರಾಜಕೀಯ ವಿಚಾರ ಚರ್ಚೆ ಆಗಿಲ್ಲ. ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೈತ್ರಿಗೆ ರಾಜ್ಯ ನಾಯಕರ ಆಕ್ಷೇಪ ಅಂತಾ ಏನೂ ಇಲ್ಲ. ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ. ಅವರು ಏನೂ ಪ್ರಸ್ತಾಪ ಮಾಡಲಿಲ್ಲ, ನಾನು ಏನೂ ಕೇಳಲಿಲ್ಲ. ಎಲ್ಲವನ್ನೂ ಮೋದಿ, ಅಮಿತ್​ ಶಾ ತೀರ್ಮಾನ ಮಾಡುತ್ತಾರೆ. ಕೇಂದ್ರ ನಾಯಕರು ಮಾಡುವ ತೀರ್ಮಾನಕ್ಕೆ ಸಹಮತ ಇರುತ್ತೆ. ನಾನು ವೈಯಕ್ತಿಕ ತೀರ್ಮಾನ ಮಾಡಲು ಆಗುವುದಿಲ್ಲ. ಎಲ್ಲಾ ದೆಹಲಿಯಲ್ಲೇ ತೀರ್ಮಾನ ಆಗಬೇಕು ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?  

ಇನ್ನು ಇದೇ ವೇಳೆ ಕಾವೇರಿ ನದಿ ನೀರು ವಿವಾದದ ಬಗ್ಗೆ ಮಾತನಾಡಿ, ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು. ನೀರು ಬಿಟ್ಟು ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು. ಸುಪ್ರೀಂಕೋರ್ಟ್​​ಗೆ ಕಾವೇರಿ ಕಣಿವೆಯ ವಾಸ್ತವ ಸ್ಥಿತಿ ವಿವರಿಸಬೇಕು. ರಾಜ್ಯದ 195 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ . ಕೂಡಲೇ ಬರ ಎದುರಿಸಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

Published On - 2:12 pm, Thu, 14 September 23

ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು