ಬೆಂಗಳೂರು, (ಸೆಪ್ಟೆಂಬರ್ 14): ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ನಿನ್ನೆ (ಸೆಪ್ಟೆಂಬರ್ 13) ನವದೆಹಲಿಗೆ ತೆರಳಿದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa )ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇಂದು(ಗುರುವಾರ) ಮಧ್ಯಾಹ್ನ 12.30ರ ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಇನ್ನು ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ. ದೆಹಲಿ ಸಭೆಯಲ್ಲಿ ರಾಜ್ಯದ ಯಾವ ವಿಚಾರವೂ ಚರ್ಚೆಯಾಗಿಲ್ಲ. ಮೈತ್ರಿ ಬಗ್ಗೆಯೂ ಚರ್ಚೆ ಆಗಿಲ್ಲ. ಸಭೆಯಲ್ಲಿ ಕೇವಲ ಜಿ20 ಶೃಂಗಸಭೆ ಸಕ್ಸಸ್ ಬಗ್ಗೆ ಚರ್ಚೆ ಆಗಿದೆ ಎಂದು ಸ್ಪಷ್ಟಪಡಿಸಿದರು.
ದೆಹಲಿ ವರಿಷ್ಠರ ಜತೆ ರಾಜಕೀಯ ವಿಚಾರ ಚರ್ಚೆ ಆಗಿಲ್ಲ. ಮೋದಿ, ಅಮಿತ್ ಶಾ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಮೈತ್ರಿಗೆ ರಾಜ್ಯ ನಾಯಕರ ಆಕ್ಷೇಪ ಅಂತಾ ಏನೂ ಇಲ್ಲ. ವರಿಷ್ಠರು ಏನು ತೀರ್ಮಾನ ಮಾಡುತ್ತಾರೋ ನೋಡಬೇಕು. ಇದರಲ್ಲಿ ವೈಯಕ್ತಿಕ ಅಭಿಪ್ರಾಯ ಏನೂ ಇರುವುದಿಲ್ಲ. ಅವರು ಏನೂ ಪ್ರಸ್ತಾಪ ಮಾಡಲಿಲ್ಲ, ನಾನು ಏನೂ ಕೇಳಲಿಲ್ಲ. ಎಲ್ಲವನ್ನೂ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ. ಕೇಂದ್ರ ನಾಯಕರು ಮಾಡುವ ತೀರ್ಮಾನಕ್ಕೆ ಸಹಮತ ಇರುತ್ತೆ. ನಾನು ವೈಯಕ್ತಿಕ ತೀರ್ಮಾನ ಮಾಡಲು ಆಗುವುದಿಲ್ಲ. ಎಲ್ಲಾ ದೆಹಲಿಯಲ್ಲೇ ತೀರ್ಮಾನ ಆಗಬೇಕು ಎಂದು ಹೇಳಿದರು.
ಇದನ್ನೂ ಓದಿ: ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?
ಇನ್ನು ಇದೇ ವೇಳೆ ಕಾವೇರಿ ನದಿ ನೀರು ವಿವಾದದ ಬಗ್ಗೆ ಮಾತನಾಡಿ, ತಮಿಳುನಾಡಿಗೆ ಒಂದು ತೊಟ್ಟು ನೀರನ್ನು ಕೂಡ ಬಿಡಬಾರದು. ನೀರು ಬಿಟ್ಟು ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧ ಮಾಡಿದೆ. ಕೂಡಲೇ ಸರ್ಕಾರ ನೀರು ಹರಿಸುವುದನ್ನು ನಿಲ್ಲಿಸಬೇಕು. ಸುಪ್ರೀಂಕೋರ್ಟ್ಗೆ ಕಾವೇರಿ ಕಣಿವೆಯ ವಾಸ್ತವ ಸ್ಥಿತಿ ವಿವರಿಸಬೇಕು. ರಾಜ್ಯದ 195 ತಾಲೂಕುಗಳಲ್ಲಿ ಭೀಕರ ಬರ ಪರಿಸ್ಥಿತಿ ಇದೆ . ಕೂಡಲೇ ಬರ ಎದುರಿಸಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.
Published On - 2:12 pm, Thu, 14 September 23