ಶೀಘ್ರ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ; ಬಿಎಸ್ ಯಡಿಯೂರಪ್ಪ

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

ಶೀಘ್ರ ಪ್ರತಿಪಕ್ಷ ನಾಯಕನ ಆಯ್ಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ; ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Sep 07, 2023 | 2:47 PM

ಬೆಂಗಳೂರು, ಸೆಪ್ಟೆಂಬರ್ 7: ‘ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಿದ್ದಾರೆ. ಪ್ರತಿಪಕ್ಷ ನಾಯಕರು ಇಲ್ಲ ಎಂದು ನಾವು ನಮ್ಮ ಕೆಲಸ ನಿಲ್ಲಿಸಿಲ್ಲ. ಈ ಯಡಿಯೂರಪ್ಪ ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ಶೀಘ್ರದಲ್ಲೇ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22-23 ಸೀಟು ಗೆಲ್ಲಿಸುವ ವಿಶ್ವಾಸವಿದೆ’ ಎಂದು ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು.

ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಹಿಂದೆ ಮಾಡಿರುವ ಕೆಲಸಗಳಿಗೂ ಕೂಡ ಕಮಿಷನ್ ಕೇಳುತ್ತಿದ್ದಾರೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ದ್ವೇಷ ಸಾಧಿಸ್ತಿದ್ದಾರೆ. ನಾಳೆ 15-20 ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಈ ಎಚ್ಚರಿಕೆಯನ್ನು ಸರ್ಕಾರಕ್ಕೆ ಕೊಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ರೈತರ ಆತ್ಮಹತ್ಯೆ ಬಗ್ಗೆ ಸಚಿವ ಶಿವಾನಂದ ಪಾಟೀಲ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಿವಾನಂದ ಪಾಟೀಲ್​ರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.

ಯಡಿಯೂರಪ್ಪ ಜೈಲಿಗೆ ಹೋಗಲು ಬಿಜೆಪಿಯವರೇ ಕಾರಣ ಎಂಬ ಎಂಪಿ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೇಣುಕಾಚಾರ್ಯ ಜೊತೆ ಮಾತಾಡಿದ್ದೇನೆ. ನಾನು ಯಾವುದರ ಬಗ್ಗೆಯೂ ಚರ್ಚೆ ಮಾಡಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ತಮ್ಮ ವಿರುದ್ಧ ಉತ್ತರ ಪ್ರದೇಶದಲ್ಲಿ FIR ದಾಖಲಾಗಿರುವ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಪ್ರತಿಕ್ರಿಯೆ

ನಾವೆಲ್ಲರೂ ಒಟ್ಟಾಗಿ ಸೇರಿಕೊಂಡು ಪಕ್ಷ ಸಂಘಟನೆ ಮಾಡಬೇಕಿದೆ. ವಲಸಿಗ ಬಿಜೆಪಿ ಶಾಸಕರು ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿಲ್ಲ. ನಮ್ಮ ಎಲ್ಲಾ ಶಾಸಕರ ಜೊತೆಗೂ ನಾನು ಮಾತನಾಡಿದ್ದೇನೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಇನ್ನು ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆ ಬಗ್ಗೆ ಬುಧವಾರವೇ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು. ಸಚಿವ ಜಿ ಪರಮೇಶ್ವರ ಅವರು ಹಿಂದೂ ಧರ್ಮದ ಬಗ್ಗೆ ನೀಡಿದ್ದ ಹೇಳಿಕೆಯನ್ನೂ ಖಂಡಿಸಿದ್ದರು. ಹಿಂದೂ ಧರ್ಮದ ಅಸ್ತಿತ್ವ, ಮೂಲದ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ, ಗೃಹ ಸಚಿವ ಪರಮೇಶ್ವರ ಅವರ ಉದ್ಧಟತನದ ಹೇಳಿಕೆ ಅತ್ಯಂತ ಖಂಡನೀಯ ಮಾತ್ರವಲ್ಲ, ಅವರ ಬೇಜವಾಬ್ದಾರಿತನಕ್ಕೆ ಹಿಡಿದ ಕನ್ನಡಿಯಾಗಿದೆ. ರಾಷ್ಟ್ರಗೀತೆಯ ಅಂತ್ಯದಲ್ಲಿ ‘ಜೈ ಹಿಂದ್’ ಎನ್ನುವ ಜಯಘೋಷ, ನಮ್ಮ ತಾಯ್ನೆಲ, ಇಲ್ಲಿನ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ರಾಷ್ಟ್ರಧರ್ಮ, ಜೀವನ ಪದ್ಧತಿಯ ಸಂಕೇತವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಹೊಣೆಗೇಡಿತನದ ಮಾತುಗಳನ್ನಾಡಿ ಪರಮೇಶ್ವರ್ ಅವರು ತಮ್ಮ ಘನತೆಗೆ ತಾವೇ ಕುಂದು ತಂದುಕೊಂಡಿದ್ದಾರೆ. ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಘಾಸಿಯುಂಟು ಮಾಡುವ, ರಾಷ್ಟ್ರದ ಅಸ್ಮಿತೆಯಂತಹ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ, ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ