BS Yediyurappa: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಮುಂದುವರಿಕೆ; ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಬಸವರಾಜ ಬೊಮ್ಮಾಯಿ

ಬಿಎಸ್ ಯಡಿಯೂರಪ್ಪ: ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಚರ್ಚೆ ಅನಗತ್ಯ. ಈ ಬಗ್ಗೆ ಪಕ್ಷದ ಅಧ್ಯಕ್ಷರು, ಪ್ರಭಾರಿಗಳು ಏನೂ ಹೇಳಿಲ್ಲ. ವರಿಷ್ಠರು, ರಾಜ್ಯ ಉಸ್ತುವಾರಿ ಈ ಬಗ್ಗೆ ಪ್ರತಿಕ್ರಿಯಿಸುತ್ತಾರೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್ ಕೂಡ ಹೇಳಿಕೆ ನೀಡಿದ್ದಾರೆ.

BS Yediyurappa: ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಮುಂದುವರಿಕೆ; ಸಿಎಂ ಬದಲಾವಣೆ ಚರ್ಚೆ ಅನಗತ್ಯ: ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
TV9 Web
| Updated By: Digi Tech Desk

Updated on:Jul 21, 2021 | 6:03 PM

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ಸ್ವತಃ ಮುಖ್ಯಮಂತ್ರಿಗಳೇ ಅದನ್ನು ಖಚಿತಪಡಿಸಿದ್ದಾರೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಅದನ್ನೇ ಹೇಳಿದ್ದಾರೆ. ಈ ಎಲ್ಲಾ ಹೇಳಿಕೆ, ಗಾಳಿಸುದ್ದಿಗಳಿಂದ ರಾಜಕೀಯ ಅಸ್ಥಿರತೆಯನ್ನು ತರಲು ಪ್ರಯತ್ನಿಸಲಾಗುತ್ತಿದೆ. ಬಿ.ಎಸ್. ಯಡಿಯೂರಪ್ಪ ನಮ್ಮ ನಾಯಕ. ಅವರು ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಮೂಲಕ, ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಅವರು ಮಾಡಿದ್ದಾರೆ.

ಮುಖ್ಯಮಂತ್ರಿ ಆಗಿ ಆಗಿ ಬಿ.ಎಸ್. ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಚರ್ಚೆ ಅನಗತ್ಯ. ಈ ಬಗ್ಗೆ ಪಕ್ಷದ ಅಧ್ಯಕ್ಷರು, ಪ್ರಭಾರಿಗಳು ಏನೂ ಹೇಳಿಲ್ಲ. ವರಿಷ್ಠರು, ರಾಜ್ಯ ಉಸ್ತುವಾರಿ ಈ ಬಗ್ಗೆ ಪ್ರತಿಕ್ರಿಯಿಸುತ್ತಾರೆ ಎಂದು ಚಿತ್ರದುರ್ಗದಲ್ಲಿ ಬಿಜೆಪಿ ಎಂಎಲ್​ಸಿ ರವಿಕುಮಾರ್ ಕೂಡ ಹೇಳಿಕೆ ನೀಡಿದ್ದಾರೆ.

ಜುಲೈ 24ರಂದು ಚಿತ್ರದುರ್ಗದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಚಿತ್ರದುರ್ಗ ನಗರದ ವಿದ್ಯಾದಾನ ಸೌಧ ಶಾಲಾ ಆವರಣದಲ್ಲಿ ರಾಜ್ಯದ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದೆ. ಸಿಎಂ ಬದಲಾವಣೆ ವಿಚಾರ ಪತ್ರಿಕೆ, ಟಿವಿಯಲ್ಲಿ ನೋಡ್ತಿದ್ದೇವೆ. ಪಕ್ಷದ ಅದ್ಯಕ್ಷರು, ಪ್ರಭಾರಿಗಳು ಏನೂ ಹೇಳಿಲ್ಲ. ಹಾಗಾಗಿ ಸಿಎಂ ಬಿಎಸ್ ವೈ ಬದಲಾವಣೆ ಚರ್ಚೆ ಅನಗತ್ಯ ಎಂದು ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ. ದೆಹಲಿಯ ನಾಯಕರು, ರಾಜ್ಯ ಉಸ್ತುವಾರಿ ಈ ಬಗ್ಗೆ ಪ್ರತಿಕ್ರಿಯಿಸಲಿದ್ದಾರೆ. 2ವರ್ಷ ಪೂರೈಸಿದ ಹಿನ್ನೆಲೆ ಜುಲೈ 25ರಂದು ಶಾಸಕಾಂಗ ಸಭೆ ಕರೆಯಲಾಗಿತ್ತು. ಸಿಎಂ ಬದಲಾವಣೆ ವಿಚಾರ ಹಬ್ಬಿದ ಹಿನ್ನೆಲೆ ಅದನ್ನು ರದ್ದು ಮಾಡಲಾಯಿತು. ಜುಲೈ 25ರ ಸಂಜೆ ಎಮ್​ಎಲ್​​ಎ, ಎಮ್​ಎಲ್​ಸಿಗಳ ಸಭೆ ನಡೆಯಲಿದೆ. ಊಟ ಮತ್ತು ಚರ್ಚೆ ಔಪಚಾರಿಕವಾಗಿ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರಲ್ಲಿ ಫೇಕ್ ಆಡಿಯೋ ವೈರಲ್ ಆಗಿದೆ. ಕಟೀಲ್ ಹೆಸರಿಗೆ ಕಳಂಕ ತರಲು ನಡೆಸಿದ ಷಡ್ಯಂತ್ರ ಅದಾಗಿದೆ. ಪಕ್ಷ, ಸಿಎಂ ವಿರುದ್ಧ ಮಾತಾಡಿದ ಯತ್ನಾಳ್ ಮತ್ತಿತರರಿಗೆ ನೋಟಿಸ್ ಕೊಟ್ಟಿದೆ. ಪಕ್ಷಕ್ಕೆ ಧಕ್ಕೆ ತರುವವರ ವಿರುದ್ಧ ಸೂಕ್ತ ಸಮಯದಲ್ಲಿ ಕ್ರಮ ಖಚಿತ. ಹಿರಿಯ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿಗೆ ಸಚಿವ ಸ್ಥಾನದ ಬಗ್ಗೆ ರಾಜ್ಯದ ಪ್ರಮುಖರಿಂದ ನಿರ್ಧಾರ ಎಂದು ರವಿಕುಮಾರ್ ತಿಳಿಸಿದ್ದಾರೆ.

ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ ಎಂದು ಹೇಳಿರುವುದು ತಿಳಿದುಬಂದಿದೆ. ನಿಮ್ಮೆಲ್ಲರ ಆಶೀರ್ವಾದ ಇರುವುದರಿಂದ ನಾನು ಪುಣ್ಯಶಾಲಿ. ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ. ಯಾವ ಕಾರಣವನ್ನೂ ಕೊಟ್ಟಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಆದರೂ ಈ ರೀತಿ ಎಲ್ಲಾ ನಡೆಯುತ್ತಿದೆ. 2 ಬಾರಿ ರಾಜ್ಯದಲ್ಲಿ ಬಿಜೆಪಿಯನ್ನ ಅಧಿಕಾರಕ್ಕೆ ತಂದಿದ್ದೇನೆ. ಆದರೆ, ವರಿಷ್ಠರು ಸೂಚಿಸಿದಂತೆ ನಾನು ನಡೆದುಕೊಳ್ಳಬೇಕಾಗುತ್ತದೆ. ಪಕ್ಷದ ಆದೇಶದ ವಿರುದ್ಧ ನಡೆದ್ರೆ ದ್ರೋಹ ಬಗೆದಂತಾಗುತ್ತೆ ಎಂದು ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬದಲಾವಣೆ ವಿಚಾರ: ಕರ್ನಾಟಕ ರಾಜಕೀಯ ವಿಪ್ಲವದ ಬಗ್ಗೆ ಕೋಡಿಮಠದ ಶ್ರೀ ಭವಿಷ್ಯ

ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಹುಡುಕಬೇಕಾಗುತ್ತದೆ: ಯಡಿಯೂರಪ್ಪ ಭೇಟಿ ಬಳಿಕ ಸ್ವಾಮೀಜಿಗಳ ಹೇಳಿಕೆ

(BS Yediyurappa will continue as CM of Karnataka says Basavaraj Bommai Ravikumar)

Published On - 4:31 pm, Wed, 21 July 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ