BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ

ಬಿವೈ ವಿಜಯೇಂದ್ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ರಾಜಕಾರಣದ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ
ಬಿ.ವೈ ವಿಜಯೇಂದ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Nov 27, 2021 | 4:28 PM

ತುಮಕೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ (Family Politics) ಬಗ್ಗೆ ಟೀಕಿಸುತ್ತಿದ್ದ ಬಿಜೆಪಿಯಲ್ಲೂ ಈಗ ಕುಟುಂಬ ರಾಜಕಾರಣ ಹೆಚ್ಚುತ್ತಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮಗ ಬಿವೈ ರಾಘವೇಂದ್ರ (BY Raghavendra) ಸಂಸದರಾಗಿದ್ದಾರೆ. ಇದೀಗ ಅವರ ಇನ್ನೋರ್ವ ಮಗ ಬಿವೈ ವಿಜಯೇಂದ್ರ (BY Vijayendra) ಕೂಡ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇಷ್ಟು ದಿನ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ರಾಜಕಾರಣದ ಅಖಾಡಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಬಿ.ವೈ. ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ಆಡಳಿತದಲ್ಲಿ ಮೂಗು ತೂರಿಸುತ್ತಿದ್ದಾರೆ ಎಂಬ ಆರೋಪವನ್ನು ಎದುರಿಸಿದ್ದರು. ಇದೇ ಕಾರಣಕ್ಕೆ ಅನೇಕ ಬಿಜೆಪಿ ನಾಯಕರು ಹೈಕಮಾಂಡ್​ಗೂ ದೂರು ನೀಡಿದ್ದರು. ಇಂದು ತುಮಕೂರಿನಲ್ಲಿ ಮಾತನಾಡಿರುವ ಬಿ.ವೈ. ವಿಜಯೇಂದ್ರ, ನಾನು 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ಪ್ರವಾಸ ಮಾಡುತ್ತಿದ್ದೇನೆ. ನಾನು ರಾಜಕೀಯ ಸನ್ಯಾಸಿಯಲ್ಲ. ಮುಂದಿನ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿದೆ. ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಾಗಿನಿಂದಲೂ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂಬ ಬಯಕೆಯನ್ನು ಹೊಂದಿದ್ದೇನೆ. ನಾನು ಯವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸಲಿದೆ ಎಂದು ತಮ್ಮ ಚುನಾವಣಾ ಸ್ಪರ್ಧೆಯ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಬಿ.ಎಸ್. ಯಡಿಯೂರಪ್ಪ ಜೆಡಿಎಸ್​ ಬೆಂಬಲ ಕೋರಿದ್ದಾರೆ ಎಂದರೆ ಬಿಜೆಪಿ ವೀಕ್ ಆಗಿದೆ ಎಂದು ಅರ್ಥವಲ್ಲ. ಹೆಚ್ಚಿನ ಅಂತರದಿಂದ ಗೆಲ್ಲಬೇಕೆಂಬ ಉದ್ದೇಶದಿಂದ ಅವರು ಬೆಂಬಲ ಕೇಳಿದ್ದಾರೆ. ಒಳ್ಳೆಯ ಉದ್ದೇಶದಿಂದ ಬಿಎಸ್​ವೈ ಬೆಂಬಲ ಕೋರಿರುತ್ತಾರೆ. ಬಹುತೇಕ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ವಾತಾವರಣವಿದೆ. ಬಿಜೆಪಿ ಸ್ಪರ್ಧಿಸಿರುವ 20 ಕ್ಷೇತ್ರಗಳ ಪೈಕಿ 15ರಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಬೆಂಬಲ ನೀಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ: ಹೆಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

Published On - 4:24 pm, Sat, 27 November 21

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು