ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?

ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರೇ. ಮೈತ್ರಿ ಬಗ್ಗೆ ನಾನೇನು ಪ್ರಸ್ತಾಪ ಮಾಡುವುದಿಲ್ಲ. ಮೈತ್ರಿ ಬಗ್ಗೆ ವರಿಷ್ಠರೇ ಕೇಳಿದರೆ ನಮ್ಮ ಅಭಿಪ್ರಾಯ ಹೇಳುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ದೆಹಲಿ ತಲುಪಿದ ಬಿಎಸ್ ಯಡಿಯೂರಪ್ಪ; ಬಿಜೆಪಿ, ಜೆಡಿಎಸ್ ಮೈತ್ರಿ ಬಗ್ಗೆ ಹೇಳಿದ್ದೇನು?
ಬಿಎಸ್ ಯಡಿಯೂರಪ್ಪ
Edited By:

Updated on: Sep 13, 2023 | 4:33 PM

ನವದೆಹಲಿ, ಸೆಪ್ಟೆಂಬರ್ 13: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಬುಧವಾರ ಮಧ್ಯಾಹ್ನ ದೆಹಲಿ ತಲುಪಿದ್ದಾರೆ. ಸಂಜೆ 7 ಗಂಟೆಗೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ಅವರು ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ (BJP JDS Alliance) ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು.

ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ ನಾವು ಚರ್ಚಿಸುವುದು ಸರಿಯಲ್ಲ. ಇಂದಿನ ಸಭೆಯಲ್ಲಿ ಹೈಕಮಾಂಡ್ ಪ್ರಸ್ತಾಪಿಸಿದರೆ ನಾವು ನಮ್ಮ ಅಭಿಪ್ರಾಯ ಹೇಳಬಹುದು. ರಾಜ್ಯಾಧ್ಯಕ್ಷರ ಮತ್ತು ಪ್ರತಿಪಕ್ಷ ನಾಯಕರ ಆಯ್ಕೆ ಆಗಬೇಕು ಎಂಬ ಬೇಡಿಕೆ ಇದೆ. ಲೋಕಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರವಾಗಿ ಮಾತುಕತೆ ಆಗದೆ ಪ್ರತಿಕ್ರಿಯೆ ನೀಡಲು ಇಷ್ಟಪಡಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೈತ್ರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನಿರ್ಧಾರ ಮಾಡ್ತಾರೆ. ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಅವರೇ. ಮೈತ್ರಿ ಬಗ್ಗೆ ನಾನೇನು ಪ್ರಸ್ತಾಪ ಮಾಡುವುದಿಲ್ಲ. ಮೈತ್ರಿ ಬಗ್ಗೆ ವರಿಷ್ಠರೇ ಕೇಳಿದರೆ ನಮ್ಮ ಅಭಿಪ್ರಾಯ ಹೇಳುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಕಾರಣ ನಿಂತ ನೀರಲ್ಲ, ಕೆಲ ಸಂದರ್ಭದಲ್ಲಿ ಕೆಲ ನಿರ್ಧಾರ ಅನಿವಾರ್ಯ; ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಮಾತು

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ಬಗ್ಗೆ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಸುಳಿವು ನೀಡಿದ್ದರು. ಅದು ರಾಜ್ಯ ರಾಜಕಾರಣದಲ್ಲಿ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ತ ಜೆಡಿಎಸ್​ ಪ್ರಮುಖರೂ ಸಹ ಮೈತ್ರಿ ವಿಚಾರವಾಗಿ ಸಕಾರಾತ್ಮಕ ಹೇಳಿಕೆ ನೀಡುತ್ತಿದ್ದಾರೆ.

ಮತ್ತಷ್ಟು ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us