KGF Babu: ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್​ ಬಾಬುಗೆ ಎದುರಾಯ್ತು ಇಡಿ ಸಂಕಷ್ಟ

ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಿ ಕುಬೇರ ಕೆಜಿಎಫ್ ಬಾಬುಗೆ (KGF Babu) ಸಂಕಷ್ಟ ಎದುರಾಗಿದೆ.

KGF Babu: ಚುನಾವಣೆ ಮುಗಿಯುತ್ತಿದ್ದಂತೆ ಕೆಜಿಎಫ್​ ಬಾಬುಗೆ ಎದುರಾಯ್ತು ಇಡಿ ಸಂಕಷ್ಟ
ಕೆಜಿಎಫ್​ ಬಾಬು
Follow us
ರಮೇಶ್ ಬಿ. ಜವಳಗೇರಾ
|

Updated on: May 17, 2023 | 9:08 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ​​ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್​ ಬಾಬುಗೆ (KGF Babu) ಇಡಿ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್​ ಬಾಬುಗೆ ಇಡಿ ನೋಟಿಸ್ ನೀಡಿದ್ದು, ಇಂದುಶ್ರ(ಮೇ 17) ದೆಹಲಿಯ ಇಡಿ ಕಚೇರಿಯಲ್ಲಿ ಕೆಜಿಎಫ್​ ಬಾಬು ವಿಚಾರಣೆಗೆ ಹಾಜರಾಗಲಿದ್ದಾರೆ.  ಕೆಜಿಎಫ್ ಬಾಬು ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.

ಇದನ್ನೂ ಓದಿ: KGF Babu: ಮನೆ ಮನೆಗೆ ಕೆಜಿಎಫ್ ಬಾಬು ಕಳುಹಿಸಿದ್ದ 30 ಲಕ್ಷದ ಡಿಡಿ ಜಪ್ತಿ ಮಾಡಿದ ಪೊಲೀಸರು

ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್‌ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ. ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

ಇಡಿ ಅಕ್ರಮ ಹಣದ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದೆ. ಈ ಹಿಂದೆ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ಸಂಪತ್ತನ್ನು ಹೊಂದಿರುವುದಾಗಿ ಬಾಬು ಹೇಳಿಕೆ ಕೊಟ್ಟಿದ್ದರು. ರಾಜಕೀಯವಾಗಿ ಮಹತ್ವಾಕಾಂಕ್ಷಿಯಾಗಿದ್ದ ಬಾಬು ಇತ್ತೀಚೆಗೆ ಕಾಂಗ್ರೆಸ್​ನಿಂದ ಉಚ್ಛಾಟನೆಗೊಂಡಿದ್ದರು. ವಿಧಾನ ಪರಿಷತ್‌ನ ಸ್ಥಳೀಯ ಸಂಸ್ಥೆಗಳಿಗೆ ಕಳೆದ ಬಾರಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ ಸೋಲು ಕಂಡಿದ್ದರು. ಅಲ್ಲದೇ ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದಾರೆ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು