ಬಿವೈ ವಿಜಯೇಂದ್ರ, ನಾನು ಜೋಡೆತ್ತುಗಳಾಗಿ ಕೆಲಸ ಮಾಡುತ್ತೇವೆ: ವಿರೋಧ ಪಕ್ಷದ ನಾಯಕ ಆರ್​​ ಅಶೋಕ್

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಾಗಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವು ಕೆಲಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವುದೇ ನಮ್ಮ ಆದ್ಯತೆ ಎಂದು ಹೇಳಿದ್ದಾರೆ. 

Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 17, 2023 | 8:58 PM

ಬೆಂಗಳೂರು, ನವೆಂಬರ್​​ 17: ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತುಗಳಾಗಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ನಾವು ಕೆಲಸ ಮಾಡುತ್ತೇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ (R Ashok) ಹೇಳಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ ಎರಡು ಗುಂಪುಗಳಾಗಿವೆ. ಅಧಿಕಾರಕ್ಕೆ ಬಂದ ತಕ್ಷಣವೇ ವರ್ಗಾವಣೆ ದಂಧೆ ಶುರು ಮಾಡಿದೆ. ಕಾಂಗ್ರೆಸ್​ನವರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ರು. ಆದರೆ ಗ್ಯಾರಂಟಿ ಯೋಜನೆ ಶೇಕಡಾ 50ರಷ್ಟು ಜನರಿಗೂ ತಲುಪಿಲ್ಲ ಎಂದು ಕಿಡಿಕಾರಿದ್ದಾರೆ.

ನಾವು ಅಧಿಕಾರದಲ್ಲಿದ್ದಾಗ ರೈತರ ಪರ ನಿಂತಿದ್ದೆವು. ಆದರೆ ಈಗ ಕಾಂಗ್ರೆಸ್​ ಸರ್ಕಾರ ರೈತರ ಯೋಜನೆಗಳನ್ನೇ ನಿಲ್ಲಿಸಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ. ಕಾಂಗ್ರೆಸ್​ ಸರ್ಕಾರ ನಮ್ಮ ಶಾಸಕರ ಅನುದಾನ ಕಡಿತಗೊಳಿಸಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಆರ್​ ಅಶೋಕಗೆ ಒಲಿದ ವಿಪಕ್ಷ ನಾಯಕ ಪಟ್ಟ; ನಡೆದು ಬಂದ ಹಾದಿ

ಜೆಡಿಎಸ್ ಜತೆ ಸೇರಿ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಸಮರ್ಥ ವಿರೋಧ ಪಕ್ಷವಾಗಿ ನಾವು ಕೆಲಸ ಮಾಡುತ್ತೇವೆ. ಬಿಜೆಪಿಯ 66, ಜೆಡಿಎಸ್ 19 ಶಾಸಕರು ಸೇರಿ ಹೋರಾಟ ಮಾಡುತ್ತೇವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವುದೇ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.

ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದ ವರಿಷ್ಠರಿಗೆ ಧನ್ಯವಾದ ಹೇಳಿದ ಆರ್.ಅಶೋಕ್ 

ನನ್ನನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಧನ್ಯವಾದ ಹೇಳುತ್ತೇನೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ನಮ್ಮ ಶಾಸಕರಿಗೂ ಧನ್ಯವಾದ ಹೇಳುತ್ತೇನೆ. ತುರ್ತುಪರಿಸ್ಥಿತಿ ವೇಳೆ ಹೋರಾಟ ಮಾಡಿ 1 ತಿಂಗಳು ಜೈಲಿಗೆ ಹೋಗಿದ್ದೆ. 20 ವರ್ಷಗಳ ಕಾಲ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡಿದ್ದೇನೆ. ಎಲ್ಲವನ್ನೂ ಪರಿಗಣನೆ ಮಾಡಿ ನನಗೆ ವಿಪಕ್ಷ ನಾಯಕ ಸ್ಥಾನ ನೀಡಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆರ್ ಅಶೋಕ ಆಯ್ಕೆಗೆ ಅಸಲಿ ಕಾರಣಗಳೇನು? ಇಲ್ಲಿದೆ ವಿವರ

ಉತ್ತರಹಳ್ಳಿ, ಪದ್ಮನಾಭನಗರ ಕ್ಷೇತ್ರದ ಜನ 7 ಬಾರಿ ಆಯ್ಕೆ ಮಾಡಿದ್ದಾರೆ. ಒಂದೇ ಪಕ್ಷ, ಒಂದೇ ಚಿಹ್ನೆ, ಒಂದೇ ಸಿದ್ಧಾಂತದಡಿ 7 ಬಾರಿ ಗೆದ್ದಿದ್ದೇನೆ. ಆರಂಭದಿಂದಲೂ ಸಂಘ ಪರಿವಾರದಲ್ಲಿ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:55 pm, Fri, 17 November 23

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ