ಲೋಕಸಭೆ ಚುನಾವಣೆ ತಯಾರಿ: ನಿನ್ನೆ ಜೆಪಿ ನಡ್ಡಾ, ಇಂದು ಅಮಿತ್ ಶಾರನ್ನು ಭೇಟಿಯಾದ ಬಿವೈ ವಿಜಯೇಂದ್ರ

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದೆಹಲಿಗೆ ತೆರಳಿ ಜೆಪಿ ನಡ್ಡಾ ಮತ್ತು ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ತಯಾರಿ: ನಿನ್ನೆ ಜೆಪಿ ನಡ್ಡಾ, ಇಂದು ಅಮಿತ್ ಶಾರನ್ನು ಭೇಟಿಯಾದ ಬಿವೈ ವಿಜಯೇಂದ್ರ
ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ
Follow us
ಕಿರಣ್​ ಹನಿಯಡ್ಕ
| Updated By: Rakesh Nayak Manchi

Updated on: Jul 20, 2023 | 4:37 PM

ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರನ್ನು ಇಂದು ಕರ್ನಾಟಕದ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಭೇಟಿಯಾಗಿದ್ದಾರೆ. ನಿನ್ನೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಲೋಕಸಭೆ ಚುನಾವಣೆಗೆ (Loka Sabha Elections) ಕೆಲವು ತಿಂಗಳು ಬಾಕಿ ಇರುವಂತೆ ಹಾಗೂ ರಾಜ್ಯ ವಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡುವೆ ವಿಜಯೇಂದ್ರ ಅವರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.

ಆದರೆ, ಭೇಟಿ ಬಗ್ಗೆ ಮಾಹಿತಿ ನೀಡಿದ ವಿಜಯೇಂದ್ರ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ತಂತ್ರಗಾರಿಕೆಯ ರೂಪಿಸಲು ಹಾಗೂ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಸಂಬಂಧ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Monsoon Session: ರಾಜಸ್ಥಾನ, ಬಂಗಾಳದಲ್ಲಿನ ಘಟನೆಗಳನ್ನು ಪ್ರಸ್ತಾಪಿಸಿ ವಿಪಕ್ಷಗಳಿಗೆ ಕೌಂಟರ್ ನೀಡಲು ಬಿಜೆಪಿ ಸಿದ್ಧತೆ

ಈ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ, “ಸಂಘಟನಾ ಚಾತುರ್ಯದ ಚಾಣಕ್ಯನೆಂದೇ ಬಣ್ಣಿಸಲ್ಪಡುವ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಮಾಡಲಾಯಿತು. ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು” ಎಂದರು. ನಿನ್ನೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ವಿಜಯೇಂದ್ರ ಅವರು ಭೇಟಿಯಾಗಿದ್ದರು.

ಸದ್ಯ ಕರ್ನಾಟಕದಲ್ಲಿ ವಿಪಕ್ಷ ನಾಯಕರನ್ನು ಆಯ್ಕೆ ಮಾಡುವ ವಿಚಾರ ಚರ್ಚೆಯಾಗುತ್ತಿದೆ. ಇನ್ನೊಂದೆಡೆ, ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸತತ ಮೂರನೇ ಬಾರಿ ದೇಶದ ಗದ್ದುಗೆ ಏರಲು ಬಿಜೆಪಿ ಸಜ್ಜಾಗುತ್ತಿದ್ದು, ರಾಜ್ಯದಲ್ಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಪ್ಲಾನ್ ಮಾಡಲಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ