AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ: ಲೋಕಸಭೆ ಚುನಾವಣೆಗೆ ಒಗ್ಗಟ್ಟಿನ ಮಂತ್ರ

ಆರ್​ಎಸ್​ಎಸ್ ಸಂಧಾನದಿಂದ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ ಬಂಡಾಯದ ಬಿಸಿ ತಣ್ಣಗಾಗಿದೆ ಎನ್ನಲಾಗಿದೆ. ಲೋಕಸಭೆ ಚುನಾವಣೆಯ ವರೆಗೆ ಭಿನ್ನಮತ ಮರೆತು ಒಗ್ಗಟ್ಟಿನಿಂದ ಮುಂದುವರಿಯಲು ಶಾಸಕರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ ರಮಶ್ ಜಾರಕಿಹೊಳಿ & ವಿಜಯೇಂದ್ರ ಮಧ್ಯೆ ಗುರುವಾರ ಮಾತುಕತೆ ನಡೆಯಿತು.

ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ: ಲೋಕಸಭೆ ಚುನಾವಣೆಗೆ ಒಗ್ಗಟ್ಟಿನ ಮಂತ್ರ
ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ
TV9 Web
| Edited By: |

Updated on: Nov 23, 2023 | 6:56 PM

Share

ಬೆಂಗಳೂರು, ನವೆಂಬರ್ 23: ಅಚ್ಚರಿಯ ಬೆಳವಣಿಗೆಯಲ್ಲಿ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ (BY Vijayendra) ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ (Ramesh Jarkoholi) ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಕೇಶವ ಕೃಪಾದಲ್ಲಿ (RSS Office) ಬಿಜೆಪಿಯ ಹಲವು ಹಿರಿಯ ಮುಖಂಡರು ಆರ್‌ಎಸ್‌ಎಸ್‌ ಮುಖಂಡರನ್ನು ಭೇಟಿ ಮಾಡಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆರ್ ಅಶೋಕ ಅವರನ್ನು ನೇಮಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ರಮೇಶ ಜಾರಕಿಹೊಳಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಂಡಾಯದ ಸುಳಿವು ನೀಡಿದ್ದರು. ಇದನ್ನು ಶಮನ ಮಾಡಲು ಆರ್​ಎಸ್​​ಎಸ್​ ಮಧ್ಯ ಪ್ರವೇಶಿಸಿದೆ ಎನ್ನಲಾಗಿದೆ.

ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವ ವಿಜಯೇಂದ್ರ ರಮೇಶ ಜಾರಕಿಹೊಕಿ ನಿವಾಸಕ್ಕೆ ದಿಢೀರ್ ಭೇಟಿ ನೀಡಿ 30 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಸಭೆಯ ನಂತರ ಮಾತನಾಡಿದ ವಿಜಯೇಂದ್ರ, ಪಕ್ಷವನ್ನು ಬಲಪಡಿಸಲು ಹಿರಿಯ ಮುಖಂಡ ರಮೇಶ್ ಜಾರಕಿಹೊಳಿ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

‘ಇಂದು (ಗುರುವಾರ) ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದೇನೆ. ಅವರು ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಜವಾಬ್ದಾರಿ. ನಾನು ಅವರೊಂದಿಗೆ ಮಾತನಾಡಿದೆ. ಅವರು ಕೆಲವು ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ನಾವು ಅವುಗಳನ್ನು ಒಟ್ಟಿಗೆ ಪರಿಹರಿಸಲು ನಿರ್ಧರಿಸಿದ್ದೇವೆ. ಲೋಕಸಭೆ ಚುನಾವಣೆಗೂ ಮುನ್ನ ಪಕ್ಷವನ್ನು ಬಲಪಡಿಸಲು ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ’ ಎಂದು ಭೇಟಿಯ ಬಳಿಕ ವಿಜಯೇಂದ್ರ ಹೇಳಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯತ್ನಾಳ್ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಅವರೊಂದಿಗೆ ಲೋಕಸಭೆ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಈವರೆಗೆ ಏನಾಗಿದೆಯೋ ಅದು ಆಗಿಹೋದ ವಿಚಾರ. ಇದು ಹೈಕಮಾಂಡ್ ನಿರ್ಧಾರವಾಗಿದ್ದು, ಅದನ್ನು ಒಪ್ಪಿಕೊಳ್ಳಬೇಕು. ಯಾವುದೇ ನಿರಾಸೆಯನ್ನು ವ್ಯಕ್ತಪಡಿಸದೇ ಲೋಕಸಭೆ ಚುನಾವಣೆಗೆ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಯತ್ನಾಳ್ ಮತ್ತು ಸುನೀಲ್ ಕುಮಾರ್ ಅವರೊಂದಿಗೆ ಬುಧವಾರ ಸಭೆ ನಡೆಸಿ ಲೋಕಸಭೆ ಚುನಾವಣೆಯತ್ತ ಗಮನ ಹರಿಸಲು ನಿರ್ಧರಿಸಿದ್ದೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಕಳೆದ ವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಸ್ಥಳದಿಂದ ನಿರ್ಗಮಿಸುವ ಮೂಲಕ ಅಶೋಕ ಅವರನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕರನ್ನಾಗಿ ನೇಮಿಸಿದ್ದಕ್ಕೆ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಕಳೆದ ವಾರ ವಿಜಯೇಂದ್ರ ಅವರನ್ನು ಭೇಟಿಯಾಗಲು ಯತ್ನಾಳ್ ನಿರಾಕರಿಸಿದ್ದರು. ಯತ್ನಾಳ್ ಅವರು ಎರಡೂ ಹುದ್ದೆಗಳ ರೇಸ್‌ನಲ್ಲಿದ್ದರೂ ಹೈಕಮಾಂಡ್ ಬೇರೆಯದೇ ಯೋಜನೆಗಳನ್ನು ಹಾಕಿಕೊಂಡಿತ್ತು.

ಹಠಾತ್ ಮನಸ್ಸು ಬದಲಾಗಲು ಕಾರಣವೇನು?

ಹಲವು ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಿ ರಾಜ್ಯ ನಾಯಕರನ್ನು ಸಮಾಧಾನಪಡಿಸಿದೆ ಎನ್ನಲಾಗಿದೆ. ರಮೇಶ್ ಜಾರಕಿಹೊಳಿ ಅವರು ಬುಧವಾರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದರು. ಬಳಿಕ ಬೆಂಗಳೂರಿನ ಆರ್‌ಎಸ್‌ಎಸ್ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿ ಹಿರಿಯ ಮುಖಂಡರ ಜತೆ ಸಮಾಲೋಚನೆ ನಡೆಸಿದ್ದರು.

ಇದನ್ನೂ ಓದಿ: ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿಖಿಲ್​​ಗೆ ಆಹ್ವಾನ, ಹಳೇ ಸೇಡು ತೀರಿಸಿಕೊಳ್ಳಲು ಪ್ಲ್ಯಾನ್

ರಮೇಶ್ ಜಾರಕಿಹೊಳಿ ಅವರಲ್ಲದೆ, ಮಾಜಿ ಸಚಿವರಾದ ಸುನೀಲ್ ಕುಮಾರ್ ಮತ್ತು ಸಿಟಿ ರವಿ ಅವರನ್ನೂ ಆರ್‌ಎಸ್‌ಎಸ್ ಕಚೇರಿಗೆ ಕರೆಸಲಾಗಿತ್ತು. ಅಲ್ಲಿ ಲೋಕಸಭೆ ಚುನಾವಣೆಯವರೆಗೆ ಒಟ್ಟಾಗಿ ಕೆಲಸ ಮಾಡಲು ಆರ್​ಎಸ್​​ಎಸ್ ನಾಯಕರು ಮನವಿ ಮಾಡಿದ್ದರು ಎನ್ನಲಾಗಿದೆ.

ನಂತರ ಸಂಜೆ ರಮೇಶ್ ಜಾರಕಿಹೊಳಿ ಅವರು ಯತ್ನಾಳ್ ಮತ್ತು ಸುನೀಲ್ ಕುಮಾರ್ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ಮೌನವಾಗಿರಲು ನಿರ್ಧರಿಸಿದ್ದರು. ಬೆಳವಣಿಗೆಗಳ ನಂತರ ವಿಜಯೇಂದ್ರ ಅವರು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ