ಬಸವರಾಜ ಬೊಮ್ಮಾಯಿಯನ್ನು ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ

ಯಡಿಯೂರಪ್ಪ ಹೈಕಮಾಂಡ್​​ನವರನ್ನು ಬ್ಲ್ಯಾಕ್ ಮೆಲ್ ಮಾಡಿ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಆಶ್ಚರ್ಯ ಎಂದರೆ, ಬೊಮ್ಮಾಯಿ ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ ಈಗ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸವರಾಜ ಬೊಮ್ಮಾಯಿಯನ್ನು ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ
ಬಸನಗೌಡ ಪಾಟೀಲ್ ಯತ್ನಾಳ್ & ವಿಜಯೇಂದ್ರ
Follow us
Sahadev Mane
| Updated By: Ganapathi Sharma

Updated on:Dec 12, 2023 | 10:17 AM

ಬೆಳಗಾವಿ, ಡಿಸೆಂಬರ್ 12: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ನಾಯಕರನ್ನು ಸೋಲಿಸಲು ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ (BY Vijayendra) ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಆರೋಪಿಸಿದ್ದಾರೆ. 2ಎ ಮೀಸಲಾತಿಗೆ ಆಗ್ರಹಿಸಿ ನಡೆಯಲಿರುವ ಪಂಚಮಸಾಲಿ ಪ್ರತಿಭಟನೆಗೂ ಮುನ್ನ ಸೋಮವಾರ ರಾತ್ರಿ ಬೆಳಗಾವಿಯ ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಬಿವೈ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪ ಹೈಕಮಾಂಡ್​​ನವರನ್ನು ಬ್ಲ್ಯಾಕ್ ಮೆಲ್ ಮಾಡಿ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಹೈಕಮಾಂಡ್ ಕೂಡ ಯಾಕೆ ಹೆದರಿತೋ ಗೊತ್ತಿಲ್ಲ. ಸುಮ್ಮನೆ ಶಿಸ್ತು, ಶಿಸ್ತು ಎಂದು ಹೇಳುತ್ತಾರೆ, ನಾವೇನು ಗುಲಾಮರಾ? ನಮ್ಮದೇನು ಶಕ್ತಿ ಇಲ್ಲವೇ, ನಮ್ಮ ಹಿಂದೆಯೂ ಜನ ಇದ್ದಾರೆ. ನೀವೆಲ್ಲ ಗಟ್ಟಿಯಾಗಿ ನಿಲ್ಲಿ, ಎಲ್ಲರನ್ನೂ ಸರಿ ಮಾಡೊಣ ಎಂದು ಯತ್ನಾಳ್ ಹೇಳಿದ್ದಾರೆ.

ಯಡಿಯೂರಪ್ಪ ಬ್ಲ್ಯಾಕ್​​ಮೇಲ್ ಮಾಡಿದ್ದರು. ಲೋಕಸಭಾ ಚುನಾವಣೆ ಪ್ರಚಾರಕ್ಕೆ ರಾಜ್ಯದಲ್ಲಿ ಎಲ್ಲಿಯೂ ಹೋಗಲ್ಲ ಎಂದು ಹೆದರಿಸಿದ್ದರು. ಶಿವಮೊಗ್ಗ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡ್ತಿನಿ ಉಳಿದ ಕಡೆ ಹೋಗಲ್ಲ ಎಂದಿದ್ದರು ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಸಚಿವ ಸೋಮಣ್ಣ ಅವರನ್ನು ಸೋಲಿಸಿದ್ದು ಯಾರು? ಲಿಂಗಾಯತರನ್ನು ಅಲ್ಲಿಗೆ ಕಳುಹಿಸಿ ಸೋಮಣ್ಣ ಅವರನ್ನು ಬಲಿ ಕೊಟ್ಟರು. ಸೋಮಣ್ಣ ಅವರನ್ನು ಗೋವಿಂದರಾಜ ನಗರದಲ್ಲಿ 20-25 ಸಾವಿರ ಮತಗಳಿಂದ ಗೆಲ್ಲಿಬೇಕಿತ್ತು. ಆದರೆ ಅವರನ್ನು ಬಲಿಪಶು ಮಾಡಿದರು ಎಂದು ಅವರು ದೂರಿದ್ದಾರೆ.

ಬೊಮ್ಮಾಯಿ ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ: ಯತ್ನಾಳ್

ಆಶ್ಚರ್ಯ ಎಂದರೆ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದರು ಎಂದು ಯತ್ನಾಳ್ ಗಂಭೀರ ಆರೋ ಮಾಡಿದ್ದಾರೆ. ಆಶ್ಚರ್ಯ ಎಂದರೆ, ಬೊಮ್ಮಾಯಿ ಸೋಲಿಸಲು ಹಣ ಕಳುಹಿಸಿದ್ದ ವಿಜಯೇಂದ್ರ ಈಗ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ. ಬೊಮ್ಮಾಯಿ ಅವರೇ ವಿಜಯೇಂದ್ರ ಹಣ ಕಳುಹಿಸಿದ್ದ ಬಗ್ಗೆ ನನಗೆ ಹೇಳಿದ್ದರು. ಒಮ್ಮೆ ಸತ್ಯ ಹೊರಬರಬೇಕು ರಾಜ್ಯದಲ್ಲಿ. ಅಪ್ಪ, ಮಕ್ಕಳು ಏನು ಮಾಡಿದ್ದಾರೆ ಎಂಬುದು ಗೊತ್ತಾಗಬೇಕು ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯಾವ ಕಾಲಕ್ಕೂ ಮೀಸಲಾತಿ ಕೊಡಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದರು -ಯತ್ನಾಳ್ ಆರೋಪ

ತಮ್ಮ ವಿರುದ್ಧ ದುರ್ಬಲ ಅಭ್ಯರ್ಥಿ ಹಾಕಿಸಿಕೊಂಡರು. ಅಲ್ಲಿ ಸಿದ್ದರಾಮಯ್ಯಗೆ ಸಪೋರ್ಟ್ ಮಾಡಿದ್ರು. ಕನಕಪುರದಲ್ಲಿ ಅವರಿಬ್ಬರದು ಹೊಂದಾಣಿಕೆ ಇದೆ. ಹಿಂಗೆಲ್ಲ ಮಾಡಿ ನಮ್ಮ ಹೆಸರನ್ನು ಕೆಡಿಸುವ ಪ್ರಯತ್ನ ಮಾಡಿದರು ರಾಜ್ಯದಲ್ಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಕ್ರಿಯೆ ನೀಡದ ವಿಜಯೇಂದ್ರ

ಬೊಮ್ಮಾಯಿ ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಲು ವಿಜಯೇಂದ್ರ ನಿರಾಕರಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಗಿದು ಟಾಂಗ್ ಕೊಟ್ಟ ವಿಜಯೇಂದ್ರ, ದಿನಕ್ಕೊಂದು ಹೇಳಿಕೆ ಕೊಡಲು ಆಗಲ್ಲ, ಧನ್ಯವಾದ ಎಂದು ತೆರಳಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:15 am, Tue, 12 December 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ