Sign In

By signing in or creating an account, you agree with Associated Broadcasting Company's Terms & Conditions and Privacy Policy.

BY Vijayendra: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ, ಹಲವು ನಾಯಕರು ಗೈರು

BY Vijayendra Takes Charge as Karnataka BJP President: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು (ನವೆಂಬರ್ 15) ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡರು. ಆದ್ರೆ, ಪದಗ್ರಹಣ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ.

BY Vijayendra: ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ವಿಜಯೇಂದ್ರ, ಹಲವು ನಾಯಕರು ಗೈರು
ಬಿವೈ ವಿಜಯೇಂದ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 15, 2023 | 10:58 AM

ಬೆಂಗಳೂರು, (ನವೆಂಬರ್ 15): ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ ರಾಜ್ಯಾಧ್ಯಕ್ಷರ ಕೊಠಡಿಯಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಆದ್ರೆ, ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಬಂಡಾಯದ ಬಿಸಿ ತಟ್ಟಿದೆ. ಹೌದು.. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಬಹುತೇಕ ನಾಯಕರ ಗೈರು ಎದ್ದು ಕಾಣುತ್ತಿತ್ತು.

ಸಿ.ಟಿ.ರವಿ, ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್, ಡಾ.ಕೆ.ಸುಧಾಕರ್​, ಅರವಿಂದ ಬೆಲ್ಲದ್, ಅರವಿಂದ ಲಿಂಬಾವಳಿ ಸೇರಿದಂತೆ ಸಂತೋಷ್ ಬಣದ ನಾಯಕಕರು ವಿಜಯೇಂದ್ರ ಕಾರ್ಯಕ್ರಮದಿಂದ ದೂರು ಉಳಿದಿದ್ದಾರೆ. ಇದರೊಂದಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಆರಂಭದಲ್ಲೇ ಬಂಡಾಯದ ಬಿಸಿ ತಟ್ಟಿದೆ.

ಇದನ್ನೂ ಓದಿ: Karnataka Breaking Kannada News Live: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ವೈ.ವಿಜಯೇಂದ್ರ

ಇನ್ನು ಪದಗ್ರಹಣ ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್​.ಯಡಿಯೂರಪ್ಪ, ಡಿವಿ ಸದಾನಂದಗೌಡ, ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಮುನಿರತ್ನ, ಪ್ರಭು ಚೌಹಾಣ್​, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ನಾಯಕರು ಹಾಜರಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ವಿಜಯೇಂದ್ರ ಇಂದು ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮ ಮತ್ತು ಗೌರಿ ಹೋಮದ ಪೂರ್ಣಾಹುತಿಯಲ್ಲಿ ಭಾಗಿಯಾಗಿದ್ದರು. ನಿನ್ನೆ ರಾತ್ರಿಯಿಂದ ಪುರೋಹಿತರಾದ ನಾಗೇಂದ್ರ ಭಾರದ್ವಾಜ್ ತಂಡದಿಂದ ಬಿಜೆಪಿ ಕಚೇರಿಯಲ್ಲಿ ನಡೆದ ವಾಸ್ತು ಪೂಜೆ, ಗಣ ಹೋಮ, ದುರ್ಗಾ ಹೋಮ, ಸುದರ್ಶನ ಹೋಮ ಮತ್ತು ತ್ರೈಲೋಕ್ಯ ಸುಂದರಿ ಹೋಮ ಮತ್ತು ಪೂಜಾ ಕಾರ್ಯಗಳು ನಡೆದಿದ್ದವು.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:39 am, Wed, 15 November 23

ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್