Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯಾಧ್ಯಕ್ಷರ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್, ತಂದೆ ಮಾರ್ಗ ಅನುಸರಿಸಿದ ವಿಜಯೇಂದ್ರ

ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಯಡಿಯೂರಪ್ಪ ಯಾವುದೇ ಒಂದು ಹುದ್ದೆಯ ಸ್ವೀಕರಿಸುವ ಮುನ್ನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯುತ್ತಾರೆ. ತಮ್ಮ ತಂದೆಯಂತೆ ವಿಜಯೇಂದ್ರ ಸಹ ನಡೆದುಕೊಳ್ಳುತ್ತಿದ್ದು, ಸಿದ್ಧಗಂಗಾ ಮಠದ ಶ್ರೀಗಳ ಆಶೀರ್ವಾದ ಪಡೆದ ಬಳಿಕ ತಮ್ಮ ಅಧಿಕಾರ ಸ್ವೀಕಾರ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಹಾಗಾದ್ರೆಮ ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಯಾವಾಗ? ಎಲ್ಲಿ? ಎನ್ನುವ ವಿವರ ಇಲ್ಲಿದೆ.

ಬಿಜೆಪಿ ರಾಜ್ಯಾಧ್ಯಕ್ಷರ ಅಧಿಕಾರ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್, ತಂದೆ ಮಾರ್ಗ ಅನುಸರಿಸಿದ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 12, 2023 | 11:29 AM

ತುಮಕೂರು, (ನವೆಂಬರ್ 12): ಕಳೆದ ಹಲವು ತಿಂಗಳಿನಿಂದ ತೂಗುಯ್ಯಾಲೆಯಲ್ಲಿದ್ದ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ(BY Vijayendra) ಅವರನ್ನು ನೇಮಕ ಮಾಡಲಾಗಿದೆ. ಇನ್ನು ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಈಗಾಗಲೇ ವಿಜಯೇಂದ್ರ ಅವರು ಹಲವು ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಳ್ಳುತ್ತಿದ್ದ, ಇದೇ ನವೆಂಬರ್ 15ರಂದು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇಂದು (ಭಾನುವಾರ) ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನವೆಂಬರ್ 15ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷನಾಗಿ ಅಧಿಕಾರ ಸ್ವೀಕರಿಸುತ್ತೇನೆ. ಮಾರನೇ ದಿನ ಅಂದರೆ ನವೆಂಬರ್ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸುವ ನಿರ್ಣಯ ಮಾಡಿದ್ದೇವೆ. ಪಕ್ಷದ ಎಲ್ಲಾ ಹಿರಿಯರು ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕಾರ ಮಾಡುತ್ತೇನೆ. ಈ ಕಾರ್ಯಕ್ರಮದಲ್ಲೂ ಎಲ್ಲರೂ ಭಾಗಿಯಾಗುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ನೂತನ ರಾಜ್ಯಧ್ಯಕ್ಷರ ಪದಗ್ರಹಣಕ್ಕೆ ಸಿದ್ಧತೆ; ಸಿಟಿ ರವಿ, ಯತ್ನಾಳ್, ಸೋಮಣ್ಣ ವಿಶ್ವಾಸಕ್ಕೆ ತೆಗೆದುಕೊಳ್ಳಲು ಬಿವೈ ವಿಜಯೇಂದ್ರ ಯತ್ನ

ಕೇಂದ್ರದ ವರಿಷ್ಠರು ಚರ್ಚೆ ಮಾಡಿ ಬಿಜೆಪಿಯ ರಾಜ್ಯದ ಅಧ್ಯಕ್ಷನಾಗಿ ಆಯ್ಕೆ ಮಾಡಿದ ನಂತರ, ಜವಾಬ್ದಾರಿ ಪಡೆಯುವ ಮುನ್ನ ಸಿದ್ದಗಂಗೆಗೆ ಬಂದು ಪೂಜ್ಯರ ಆಶೀರ್ವಾದ ಪಡೆದಿದ್ದೇನೆ. ತಂದೆಯವರು ಕೂಡ ಏನೇ ಜವಾಬ್ದಾರಿ ತಗೆದುಕೊಳ್ಳುವಾಗ, ಸಿದ್ದಗಂಗೆಗೆ ಭೇಟಿ ನೀಡಿ ನಡೆದಾಡುವ ದೇವರ ಆಶೀರ್ವಾದ ಪಡೆದು ಮುಂದೆ ಸಾಗುತ್ತಿದ್ದರು. ಅದೇ ರೀತಿ ನಾನು ಕೂಡ ಇಲ್ಲಿ ಬಂದು ಪೂಜ್ಯರ ಆಶೀರ್ವಾದ ಪಡೆದಿದ್ದೇನ. ಮುಂದಿನ ಗುರುವಾರ ನವೆಂಬರ್ 15ಕ್ಕೆ ಬಿಜೆಪಿ ಕಚೇರಿಯಲ್ಲಿ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಬರುತ್ತಿಲ್ಲ. ಆದ್ರೆ, ವೀಕ್ಷಕರು ಬರುವ ಸಾಧ್ಯತೆಯಿದೆ. ನಮ್ಮ ಮೊದಲ ಆದ್ಯತೆ ರೈತರಿಗೆ ಬರ ಪರಿಹಾರ ಕೊಡಿಸುವುದು. ಪಕ್ಷದಲ್ಲಿ ಕೆಲವು ಅಸಮಾಧಾನಗಳಿವೆ. ಮುಂದಿನ ದಿನಗಳಲ್ಲಿ ಅದನ್ನೆಲ್ಲ ಸರಿ ಮಾಡುತ್ತೇವೆ. ಯಾರು ಯಾರನ್ನ ಕೂಡ ಸೈಡ್ ಲೈನ್ ಮಾಡಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಮತ್ತಷ್ಟು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಮೇಲೆ ದೆಹಲಿಗೆ ಹೋಗುತ್ತೇನೆ. ಆಗ ಲೋಕಸಭಾ ಚುನಾವಣಾ ವಿಚಾರವಾಗಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ತಂದೆ ಮಾರ್ಗ ಅನುಸರಿಸಿದ ಪುತ್ರ

ಹೌದು… ಬಿಎಸ್ ಯಡಿಯೂರಪ್ಪ ಅವರು ಯಾವುದೇ ಒಂದು ಮಹತ್ವದ ಹುದ್ದೆಯ ಜವಾಬ್ದಾರಿ ವಹಿಸಿಕೊಳ್ಳುವ ಮುನ್ನ ವಿವಿಧ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದುಕೊಳ್ಳುತ್ತಿದ್ದರು. ಅದರಲ್ಲೂ ಮುಖ್ಯವಾಗಿ ಅಧಿಕಾರ ಸ್ವೀಕಾರ ಮುನ್ನ ಯಡಿಯೂರಪ್ಪನವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಳ್ಳುತ್ತಾರೆ. ಅದರಂತೆ ಇದೀಗ ಪುತ್ರ ವಿಜಯೇಂದ್ರ ಅವರು ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕವೇ ಅಧಿಕೃತವಾಗಿ ತಮ್ಮ ಅಧಿಕಾರ ಸ್ವೀಕಾರದ ದಿನ, ಸಮಯ ಪ್ರಕಟಿಸಿರುವುದು ವಿಶೇಷ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ