ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷ ಪಟ್ಟ ಕಳೆದುಕೊತ್ತಾರೆ ಎಂಬ ಈಶ್ವರಪ್ಪ ಹೇಳಿಕೆಗೆ ವಿಜಯೇಂದ್ರ ಟಾಂಗ್​

Lok Sabha Election 2024: ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಕಾಂತೇಶ್​ಗೆ ಟಿಕೆಟ್​ ಸಿಗದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಬಿಎಸ್​ ಯಡಿಯೂರಪ್ಪ ಮತ್ತು ಅವರ ಕುಟುಂಬದ ಮೇಲೆ ಮುನಿಸಿಕೊಂಡಿದ್ದಾರೆ. ಬಿಎಸ್​ ಯಡಿಯೂರಪ್ಪ ಕುಟುಂಬದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮಾಡುತ್ತಾ ಬಂದಿರುವ ಅವರು, ಇದೀಗ ಲೋಕಸಭೆ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ರಾಜ್ಯಾಧ್ಯಕ್ಷ ಪಟ್ಟ ಕಳೆದುಕೊತ್ತಾರೆ ಎಂಬ ಈಶ್ವರಪ್ಪ ಹೇಳಿಕೆಗೆ ವಿಜಯೇಂದ್ರ ಟಾಂಗ್​
ಬಿವೈ ವಿಜಯೇಂದ್ರ, ಕೆಎಸ್​ ಈಶ್ವರಪ್ಪ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 20, 2024 | 1:53 PM

ಶಿವಮೊಗ್ಗ/ ನವದೆಹಲಿ ಮಾರ್ಚ್​ 20: ಲೋಕಸಭೆ ಚುನಾವಣೆ (Lok Sabha Election) ಫಲಿತಾಂಶದ ಬಳಿಕ ಬಿವೈ ವಿಜಯೇಂದ್ರ (BY Vijyayendra) ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ (KS Ehwarappa) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಕೆ.ಎಸ್​. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ. ನನ್ನ (ಈಶ್ವರಪ್ಪ) ಪುತ್ರ ಕಾಂತೇಶ್​​ಗೆ ವಿಧಾನಪರಿಷತ್​ ಸ್ಥಾನ ಕೊಡುತ್ತೇವೆ ಅಂತ ಹೇಳಿದ್ದರು. ನನ್ನನ್ನು (ಈಶ್ವರಪ್ಪ) ರಾಜ್ಯಪಾಲರನ್ನಾಗಿ ಮಾಡುತ್ತೇವೆ ಅಂತ ಬಿಜೆಪಿ ವರಿಷ್ಠರು ಹೇಳಿದ್ದರು. ಆದರೆ ನನಗೆ ಸ್ಥಾನಮಾನಗಳು ಬೇಡ, ಪಕ್ಷ ಉಳಿಯಬೇಕು ಅಷ್ಟೆ ಎಂದು ಬಿಜೆಪಿ ನಾಯಕ ಕೆಎಸ್​. ಈಶ್ವರಪ್ಪ ಹೇಳಿದರು.

ಒಂದು ಅವಧಿಗೆ ನೇಮಕ ಮಾಡಿದ್ದಾರೆ ಅಂತ ಭಾವಿಸುತ್ತೇನೆ: ವಿಜಯೇಂದ್ರ

ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ರಾಜ್ಯಾಧ್ಯಕ್ಷ ಹುದ್ದೆ ಕಳೆದುಕೊಳ್ಳುತ್ತಾರೆ ಎಂಬ ಕೆಎಸ್​ ಈಶ್ವರಪ್ಪ ಹೇಳಿಕೆ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿ, “ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಒಂದು ಅವಧಿಗೆ ನನ್ನನ್ನು ನೇಮಕ ಮಾಡಿದ್ದಾರೆ ಅಂತ ಭಾವಿಸುತ್ತೇನೆ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು ಅಷ್ಟೆ” ಎಂದರು.

ಇದನ್ನೂ ಓದಿ: ಯಡಿಯೂರಪ್ಪ ಕುಟುಂಬಕ್ಕೆ ಸೆಡ್ಡು ಹೊಡೆದಿರುವಂತಿದೆ ಹಿರಿಯ ನಾಯಕ ಈಶ್ವರಪ್ಪ ಧೋರಣೆ!

ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಂಡಾಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗುವುದಿಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಾಗಿದೆ. ಅಭ್ಯರ್ಥಿಗಳ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಬಾಕಿ ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಚರ್ಚೆಯಾಗಿದೆ. ಮಾ.22ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಸಭೆಯಲ್ಲಿ ಚರ್ಚಿಸಲಾದ ಎಲ್ಲ ವಿಷಯಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ ಎಂದರು.

ಹಿಂದುತ್ವದ ಕಾರಣಕ್ಕಾಗಿ ಈಶ್ವರಪ್ಪ ಸ್ಪರ್ಧೆ: ಕಾಂತೇಶ್​​

ಹಿಂದುತ್ವದ ಕಾರಣಕ್ಕಾಗಿ ಶಿವಮೊಗ್ಗದಲ್ಲಿ ಈಶ್ವರಪ್ಪ ಸ್ಪರ್ಧಿಸುತ್ತಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪಗೆ ಉತ್ತಮ ಬೆಂಬಲ ಸಿಗುತ್ತಿದೆ. ಎಷ್ಟೇ ಮನವೊಲಿಸಿದರೂ ಸ್ಪರ್ಧಿಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಪಕ್ಷ ಉಳಿಯಬೇಕು ಎಂಬುದು ಕಾರ್ಯಕರ್ತರ ಆಶಯವಾಗಿದೆ. ಕೆ.ಎಸ್​. ಈಶ್ವರಪ್ಪಗೆ ಕಾರ್ಯಕರ್ತರ ಬೆಂಬಲ ಕೂಡ ಸಿಗುತ್ತಿದೆ ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ