AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಹಿಂದೆಯೇ ದೆಹಲಿಗೆ ಹಾರಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ಹೈಕಮಾಂಡ್​ ನಾಯಕರ ಭೇಟಿಗೆ ತೆರಳಿದ್ದಾರೆ. ಸೀಟು ಹಂಚಿಕೆ ಸಂಬಂಧ ಮಾತುಕತೆಗೆ ದೆಹಲಿಗೆ ಹೋಗಿದ್ದಾರೆ. ಇನ್ನು ಕುಮಾರಸ್ವಾಮಿ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಹ ದಿಲ್ಲಿಗೆ ಹಾರಿದ್ದಾರೆ. ಈ ಇಬ್ಬರೂ ದೆಹಲಿ ವಿಮಾನ ಹೋಗುವ ಮುನ್ನ ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಕುಮಾರಸ್ವಾಮಿ ಹಿಂದೆಯೇ ದೆಹಲಿಗೆ ಹಾರಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ರಾಜಕಾರಣದಲ್ಲಿ ಸಂಚಲನ
ವಿಜಯೇಂದ್ರ, ಕುಮಾರಸ್ವಾಮಿ
ರಮೇಶ್ ಬಿ. ಜವಳಗೇರಾ
|

Updated on: Dec 20, 2023 | 7:48 PM

Share

ಬೆಂಗಳೂರು, (ಡಿಸೆಂಬರ್ 20): ಮುಂಬರುವ ಲೋಕಸಭೆ ಚುನಾವಣೆಗೆ (Loksabha Elections 2024) ಕರ್ನಾಟಕದಲ್ಲಿ ಬಿಜೆಪಿ ಜತೆ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಾತುಕತೆ ನಡೆಸಲು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಇಂದು (ಡಿ. 20) ಸಂಜೆ ದೆಹಲಿಗೆ (New Delhi) ತೆರಳಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಸಹ ದಿಲ್ಲಿಗೆ ಹಾರಿದ್ದಾರೆ. ಇದರಿಂದ ಇತ್ತ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಲೋಕಸಭೆ ಚುನಾವಣೆಯಲ್ಲಿ 5 ರಿಂದ 7 ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಒಲವು ಹೊಂದಿದ್ದು, ಈ ಬಗ್ಗೆ ಬಿಜೆಪಿ ಹೈಕಮಾಂಡ್​ ಜತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರು ರಾಜ್ಯಾಧ್ಯಕ್ಷ ಸಮ್ಮುಖದಲ್ಲಿ ಕ್ಷೇತ್ರ ಹಂಚಿಕೆ ಫೈನಲ್​ ಮಾಡಲು ಬಿವೈ ವಿಜಯೇಂದ್ರಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ, ವಿಜಯೇಂದ್ರ ಆಗಲಿ ಕುಮಾರಸ್ವಾಮಿ ಆಗಲಿ ದೆಹಲಿಯ ಗುಟ್ಟು ಮಾತ್ರ ಬಿಟ್ಟುಕೊಟ್ಟಿಲ್ಲ.

ಇನ್ನು ದೆಹಲಿಗೆ ಹೋಗುವ ಮುನ್ನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ದೆಹಲಿಗೆ ಹೋಗುತ್ತಿದ್ದೇನೆ. ಆದ್ರೆ ಇದರಲ್ಲಿ ಯಾವುದೇ ವಿಶೇಷತೆ ಇಲ್ಲ. ನಾನು ವೈಯುಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ತೆರಳುತ್ತಿದ್ದೇನೆ. ದೆಹಲಿಯಿಂದ ಬಂದ ನಂತರ ಮಾತನಾಡುತ್ತೇನೆ ಎಂದು ಹೇಳಿ ವಿಮಾನ ಹತ್ತಿದರು.

ದೆಹಲಿಗೆ ಹೋಗುವ ಮುನ್ನ ವಿಜಯೇಂದ್ರ ಹೇಳಿದ್ದೇನು?

ಕುಮಾರಸ್ವಾಮಿ ದೆಹಲಿಯತ್ತ ಹೊರಟ ಬೆನ್ನಲ್ಲೇ ವಿಜಯೇಂದ್ರ ಸಹ ದಿಲ್ಲಿಗೆ ಹೋಗಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯೇಂದ್ರ, ಡಿಸೆಂಬರ್ 22, 23ರಂದು ಪೂರ್ವನಿಗದಿ ಕಾರ್ಯಕ್ರಮ ಹಿನ್ನೆಲೆ ದೆಹಲಿಗೆ ತೆರಳುತ್ತಿದ್ದೇನೆ. ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಬಿಜೆಪಿ ಘಟಕದ ಅಧ್ಯಕ್ಷರ ಸಭೆ ಕರೆಯಲಾಗಿದೆ. ಇದೇ ವೇಳೆ ವರಿಷ್ಠರನ್ನು ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸುತ್ತೇನೆ, ಎಂಪಿ‌ ಚುನಾವಣೆ ಸಂಬಂಧ ಸೀಟು ಹಂಚಿಕೆ ವಿಚಾರದ ಬಗ್ಗೆ ಚರ್ಚೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ರಾಷ್ಟ್ರೀಯ ನಾಯಕರ ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಿದ್ದೇನೆ. ಎಂಪಿ‌ ಚುನಾವಣೆ ಸಂಬಂಧ ಸೀಟು ಹಂಚಿಕೆ ವಿಚಾರದ ಬಗ್ಗೆ ಚರ್ಚೆ ಇಲ್ಲ. ಜೆಡಿಎಸ್ ಎಷ್ಟು ಸ್ಥಾನ ಬೇಡಿಕೆ ಇಟ್ಟಿದೆ ಎನ್ನುವುದು ನಮಗೆ ಗೊತ್ತಿಲ್ಲ. ಸೀಟುಗಳ ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಜೆಡಿಎಸ್ ವರಿಷ್ಠರ ಬೇಡಿಕೆಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಲಿದೆ. ರಾಷ್ಟ್ರೀಯ ನಾಯಕರ ಎದುರು ನಮ್ಮ ಅಭಿಪ್ರಾಯಗಳನ್ನ ತಿಳಿಸಲಿದ್ದೇವೆ ಎಂದು ಹೇಳಿದರು.

ಜೆಡಿಎಸ್​ ಕಣ್ಣಿಟ್ಟಿರುವ ಕ್ಷೇತ್ರಗಳಾವುವು?

ಏಳು ಕ್ಷೇತ್ರಗಳನ್ನು ಜಡಿಎಸ್​ಗೆ ನೀಡಬೇಕೆಂದು ಕುಮಾರಸ್ವಾಮಿ ಬೇಡಿಕೆ ಇಡುವ ಸಾಧ್ಯತೆ ಇದೆ. ರಾಮನಗರ, ಮಂಡ್ಯ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಸೇರಿ ಏಳು ಕ್ಷೇತ್ರಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ ಎನ್ನಲಾಗಿದೆ. ಒಂದು ವೇಳೆ ಇದಕ್ಕೆ ಬಿಜೆಪಿ ಹೈಕಮಾಂಡ್ ಏಳು ಕ್ಷೇತ್ರಗಳನ್ನು ಬಿಟ್ಟುಕೊಡಲು ಒಪ್ಪದಿದ್ದರೆ ಕನಿಷ್ಠ 5 ಕ್ಷೇತ್ರಕ್ಕೆ ಪಟ್ಟುಹಿಡಿಯುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ದೆಹಲಿ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಜೆಡಿಎಸ್​ಗೆ ಎಷ್ಟು ಕ್ಷೇತ್ರಗಳು ಸಿಗಲಿದೆ ಎನ್ನುವು ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!