AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬುಧವಾರ ಬಿವೈ ವಿಜಯೇಂದ್ರ ಪದಗ್ರಹಣ

ವಿಜಯೇಂದ್ರ ಅವರು ಜಗನ್ನಾಥ ಭವನದ ಮುಂಭಾಗ ಗೋಪೂಜೆ ನೆರವೇರಿಸಲಿದ್ದಾರೆ. ಆನಂತರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮದ ಪೂರ್ಣಾಹುತಿ ನಡೆಯಲಿದೆ. ಇದೇ ವೇಳೆ ನಿರ್ಗಮಿತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿರಿರಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ಬಳಿಕ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬುಧವಾರ ಬಿವೈ ವಿಜಯೇಂದ್ರ ಪದಗ್ರಹಣ
ಬಿವೈ ವಿಜಯೇಂದ್ರ
TV9 Web
| Edited By: |

Updated on: Nov 14, 2023 | 6:36 PM

Share

ಬೆಂಗಳೂರು, ನವೆಂಬರ್ 14: ಬಿಜೆಪಿಯ (BJP) ಕರ್ನಾಟಕ ಘಟಕದ ನೂತನ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಅವರು ಬುಧವಾರ ಪದಗ್ರಹಣ ಮಾಡಲಿದ್ದಾರೆ. ಬೆಳಗ್ಗೆ 9.45ಕ್ಕೆ ಪಕ್ಷದ ರಾಜ್ಯ ಪ್ರಧಾನ ಕಚೇರಿಯಲ್ಲಿ ಬಿವೈ ವಿಜಯೇಂದ್ರಗೆ ಪೂರ್ಣಕುಂಭ ಸ್ವಾಗತ ದೊರೆಯಲಿದೆ. ಬಳಿಕ ವಿಜಯೇಂದ್ರ ಅವರು ಜಗನ್ನಾಥ ಭವನದ ಮುಂಭಾಗ ಗೋಪೂಜೆ ನೆರವೇರಿಸಲಿದ್ದಾರೆ. ಆನಂತರ ರಾಜ್ಯ ಬಿಜೆಪಿ ಕಚೇರಿಯಲ್ಲಿ ಗಣಪತಿ ಹೋಮದ ಪೂರ್ಣಾಹುತಿ ನಡೆಯಲಿದೆ. ಇದೇ ವೇಳೆ ನಿರ್ಗಮಿತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿರಿರಲಿದ್ದಾರೆ.

ಗಣಪತಿ ಹೋಮದ ಪೂರ್ಣಾಹುತಿ ಬಳಿಕ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷ ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು ಸುಮಾರು 6 ತಿಂಗಳು ಕಳೆದ ಬಳಿಕ ಬಿಜೆಪಿ ಹೈಕಮಾಂಡ್ ರಾಜ್ಯ ಘಟಕಕ್ಕೆ ಅಧ್ಯಕ್ಷರ ನೇಮಕ ಮಾಡಿದೆ. ಇದರ ಬೆನ್ನಲ್ಲೇ, ಮುಂದಿನ ಶುಕ್ರವಾರ ಪ್ರತಿಪಕ್ಷ ನಾಯಕನ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ.

ನೂತನ ಅಧ್ಯಕ್ಷರ ನೇಮಕ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆ ವಿಳಂಬವಾಗುತ್ತಿರುವುದು ರಾಜ್ಯದಲ್ಲಿ ಬಿಜೆಪಿ ನಾಯಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಅನೇಕ ನಾಯಕರು ಈ ಬಗ್ಗೆ ಬಹಿರಂಗವಾಗಿಯೂ ಅಸಮಾಧಾನವನ್ನು ಹೊರಹಾಕಿದ್ದರು. ಇದೀಗ ಕೊನೆಗೂ ಹೈಕಮಾಂಡ್ ಅಧ್ಯಕ್ಷರ ನೇಮಕ ಮಾಡಿದ್ದು, ಪ್ರತಿಪಕ್ಷ ನಾಯಕನ ಆಯ್ಕೆಗೂ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ತಮ್ಮ ಸಾಮರ್ಥ್ಯದಿಂದ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದಾರೆ: ಜೆಪಿ ನಡ್ಡಾ

ಶುಕ್ರವಾರ ಕೇಂದ್ರದ ವೀಕ್ಷಕರು ಬರಲಿದ್ದು, ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಆ ಬಳಿಕ ಪ್ರತಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ವಿಜಯೇಂದ್ರ ಈಗಾಗಲೇ ಘೋಷಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ