AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Canteen: ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ

ಇಂದಿರಾ ಕ್ಯಾಂಟೀನ್‌ ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಲಾಗಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ.

Indira Canteen: ಇಂದಿರಾ ಕ್ಯಾಂಟೀನ್‌ ಊಟದ ದರ ಏರಿಕೆ: ಸಂಪುಟ ಸಭೆ ನಿರ್ಧಾರ
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on:Aug 19, 2023 | 8:39 PM

Share

ಬೆಂಗಳೂರು, ಆಗಸ್ಟ್​ 19: ಇಂದಿರಾ ಕ್ಯಾಂಟೀನ್‌ (Indira Canteens) ಬಡವರಿಗೆ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಲಾಗಿದೆ. ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್​​ಗಳಲ್ಲಿ ಈ ಹೊಸ ದರ ಇರಲಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆ ಆಗಲಿದೆ.

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್​​.ಕೆ.ಪಾಟೀಲ್​ ಹೇಳಿಕೆ ನೀಡಿದ್ದು, ಬಿಬಿಎಂಪಿ  ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಒಪ್ಪಿಗೆ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು: ನಮಗೂ ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ: ಸಿಟಿ ರವಿ

1 ರಿಂದ 9ನೇ ತರಗತಿವರೆಗೆ ಕಲಿಕಾ ಬಲವರ್ಧನೆಗೆ 78.13 ಕೋಟಿ ರೂ. ವೆಚ್ಚದಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಆವರಣದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ 27.88 ಕೋಟಿ ರೂ. ನೀಡಲು ಅನುಮೋದನೆ ನೀಡಲಾಗಿದೆ ಎಂದರು.

ಗದಗ ಮೆಡಿಕಲ್ ಕಾಲೇಜ್ ಆವರಣದಲ್ಲಿ 138 ಕೋಟಿ ರೂ. ವೆಚ್ಚದಲ್ಲಿ 450 ಬೆಡ್​​ಗಳ ಆಸ್ಪತ್ರೆ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ್ದು, ಸಂಗಮ ಗ್ರಾಮವನ್ನು ಕೂಡಲಸಂಗಮ ಎಂದು ನಾಮಕರಣಕ್ಕೆ ಅನುಮೋದನೆ ನೀಡಲಾಗಿದೆ. ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಸುಪ್ರೀಂಕೋರ್ಟ್‌ಗೆ ಆ.21ರಂದು ವಸ್ತುಸ್ಥಿತಿ ಮನವಿ ಸಲ್ಲಿಕೆಗೆ ನಿರ್ಧರಿಸಲಾಗಿದೆ.

ಇದನ್ನೂ ಓದಿ: ವಿಧಾನಪರಿಷತ್ ಸ್ಥಾನಕ್ಕೆ ಸೀತಾರಾಂ, ಉಮಾಶ್ರೀ, ಸುಧಾಮ್‌ ದಾಸ್‌ ಹೆಸರಿಗೆ ಅನುಮೋದನೆ; ದಲಿತ ಸಚಿವರು, ನಾಯಕರಿಗೆ ತೀವ್ರ ಹಿನ್ನಡೆ

ಕಾನೂನು ಸಲಹೆಗಾರರಾಗಿ ನಿವೃತ್ತ ನ್ಯಾ.ನಾಗರತ್ನರನ್ನು ನೇಮಿಸಲು ಒಪ್ಪಿಗೆ ಸೂಚಿಸಿದ್ದು, ಗುತ್ತಿಗೆ ಆಧಾರದ ಮೇಲೆ ಮಹಿಳಾ, ಮಕ್ಕಳ ಕಲ್ಯಾಣ ಇಲಾಖೆಯಡಿ ಕಾನೂನು ಸಲಹೆಗಾರರಾಗ ನೇಮಿಸಲು ಸಂಪುಟ ಸಭೆ ಅನುಮೋದಿಸಿದೆ.

ಆರೋಪ ಸಾಬೀತಾದ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧೀನ ಕಾರ್ಯದರ್ಶಿ ಪಾಪಣ್ಣರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಹಿಂದಿನ ಸಂಪುಟ ಸಭೆಯಲ್ಲಿ ನಾಗಮಣಿಯನ್ನು ಅಮಾನತು ಮಾಡಿದ್ದೆವು. ಹಿಂದಿನ ಕೋರ್ಟ್ ಆದೇಶದ ಪ್ರಕಾರ ತಪ್ಪಿತಸ್ಥರಲ್ಲ ಅಂತಾ ವರದಿ ಸಿಕ್ಕಿದೆ ಎಂದು ಸಚಿವ ಹೆಚ್​​.ಕೆ.ಪಾಟೀಲ್​ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Sat, 19 August 23

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್